![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 5, 2019, 6:00 AM IST
ಭಿನ್ನ-ವಿಭಿನ್ನ ಶೀರ್ಷಿಕೆಯ ಸಿನಿಮಾಗಳು ಸೆಟ್ಟೇರುತ್ತಲೇ ಇದೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ “ಮಂಗಳವಾರ ರಜಾದಿನ’. ಹೀಗೊಂದು ಸಿನಿಮಾ ಸದ್ದಿಲ್ಲದೇ ಆರಂಭವಾಗಿದ್ದು, ಈಗ ಚಿತ್ರದ ಮೊದಲ ಹಾಡು ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್ 8ರಂದು ಚಿತ್ರದ ಹಾಡು ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.
ಚಿತ್ರದಲ್ಲಿ ಚಂದನ್ ಆಚಾರ್, ಲಾಸ್ಯಾ ನಾಗರಾಜ್, ನಂದನ್ ರಾಜ್ ಈ ಹಾಡಿನ ಚಿತ್ರೀಕರಣದಲ್ಲಿದ್ದಾರೆ. ಭಿನ್ನ ಹಾಸ್ಯಭರಿತ ಈ ಗೀತೆಯನ್ನು ಯುನ್ ಅವರು ಬರೆದು, ನೃತ್ಯ ನಿರ್ದೇಶನವನ್ನು ಮಾಡಿದ್ದಾರೆ. ಶೇಷವಾದ ಕಾರೊಂದನ್ನು ಈ ಹಾಡಿನಲ್ಲಿ ಬಳಸಿಕೊಳ್ಳಲಾಗಿದೆ. ಖ್ಯಾತ ಗಾಯಕ ನವೀನ್ ಸಜ್ಜು ಈ ಹಾಡನ್ನು ನೂತನ ಶೈಲಿಯಲ್ಲಿ ಹಾಡಿದ್ದಾರೆ.
ಯುವಿನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ 45 ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಥಮ ಪ್ರತಿ ಸಹ ಸಿದ್ಧವಾಗಿದೆ. ಕ್ಷೌರಿಕನ ಸುತ್ತ ಹೆಣೆಯಲಾದ ಈ ಚಿತ್ರ ಹಾಸ್ಯಭರಿತ, ಕೌಟುಂಬಿಕ ಕಥಾಹಂದರವನ್ನು ಹೊಂದಿದೆ. ಕ್ಷೌರಿಕನ ಪಾತ್ರದಲ್ಲಿ ಚಂದನ್ ಆಚಾರ್ ಅಭಿನಯಿಸಿದ್ದಾರೆ.
ಲಾಸ್ಯ ನಾಗರಾಜ್ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಹಂಗೀರ್, ರಜನಿಕಾಂತ್, ಗೋಪಾಲಕೃಷ್ಣ ದೇಶಪಾಂಡೆ, ನಂದನ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಪ್ರಜೋತ್ ಡೇಸಾ ಸಂಗೀತ ನೀಡಿದ್ದಾರೆ. ಯೋಗರಾಜ್ ಭಟ್,ನಾಗೇಂದ್ರ ಪ್ರಸಾದ್, ಯುವಿನ್ ಹಾಡುಗಳನ್ನು ರಚಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.