ಮಂಗಳೂರಲ್ಲಿ ಬಾಂಬ್ ಇಟ್ಟ ಆದಿತ್ಯ ರಾವ್ ಹೆಸರಿನ ಸಿನಿಮಾಕ್ಕಾಗಿ ಟೈಟಲ್ ನೋಂದಣಿ!
ನಿರ್ಮಾಪಕರು ಯಾರು? ಹೀರೋ ಯಾರು? ಕಥೆ, ಚಿತ್ರಕಥೆ ಯಾರದ್ದು ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ
Team Udayavani, Jan 23, 2020, 7:08 PM IST
ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದಲ್ಲಿ ಉಡುಪಿ ಮೂಲದ ಆದಿತ್ಯ ರಾವ್ ಪೊಲೀಸ್ ಕಸ್ಟಡಿಯಲ್ಲಿದ್ದರೆ, ಮತ್ತೊಂದೆಡೆ ಬಾಂಬ್ ಪ್ರಕರಣದ ಆರೋಪಿ ಆದಿತ್ಯ ರಾವ್ ಹೆಸರಿನಲ್ಲಿ ಸಿನಿಮಾ ನಿರ್ಮಿಸಲು ಸ್ಯಾಂಡಲ್ ವುಡ್ ನಿರ್ಮಾಪಕರೊಬ್ಬರು ಹೆಸರನ್ನು ನೋಂದಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.
ವಾಣಿಜ್ಯ ಮಂಡಳಿಯಲ್ಲಿ ನಿರ್ಮಾಪಕ ತುಳಸಿ ರಾಮ್ “ ಫಸ್ಟ್ Rank ಟೆರರಿಸ್ಟ್ ಆದಿತ್ಯ” ಎಂಬ ಶೀರ್ಷಿಕೆಯನ್ನು ನೋಂದಣಿ ಮಾಡಿಸಿರುವುದಾಗಿ ಪಬ್ಲಿಕ್ ಟಿವಿ ವರದಿ ವಿವರಿಸಿದೆ.
ಆದಿತ್ಯ ರಾವ್ ಹೆಸರಿನಲ್ಲಿ ಸಿನಿಮಾ ನಿರ್ಮಾಣವಾಗಲಿದೆಯಾ? ಇದಕ್ಕೆ ನಿರ್ಮಾಪಕರು ಯಾರು? ಹೀರೋ ಯಾರು? ಕಥೆ, ಚಿತ್ರಕಥೆ ಯಾರದ್ದು ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೇ ಶೀರ್ಷಿಕೆ ರಿಜಿಸ್ಟರ್ ಆದ ಕೂಡಲೇ ಸಿನಿಮಾ ತೆರೆಗೆ ಬರಲಿದೆ ಎಂದು ಹೇಳುವುದು ಕಷ್ಟ. ಯಾಕೆಂದರೆ ಕಳೆದ ಉಪ ಚುನಾವಣೆಯ ಪ್ರಚಾರದ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ನಿಖಿಲ್ ಎಲ್ಲಿದ್ದಿಯಪ್ಪ ಶೀರ್ಷಿಕೆಯನ್ನು ನೋಂದಾಯಿಸಲಾಗಿತ್ತು ಎಂಬುದನ್ನು ನೆನಪಿಸಿಕೊಳ್ಳಬಹುದು.
ಮತ್ತೊಂದೆಡೆ ಮತ್ತೊಂದು ವರದಿ ಪ್ರಕಾರ, ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸ್ಫೋಟಕ ಪ್ರಕರಣದ ಬಗ್ಗೆ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಸಿನಿಮಾ ಕಥೆ ಬರೆಯಲು ಮುಂದಾಗಿದ್ದಾರೆ ಎಂದು ತಿಳಿಸಿದೆ.
ಕಥೆ, ಚಿತ್ರಕಥೆ, ಸಂಭಾಷಣೆ ಚಂದ್ರಚೂಡ್ ಹೆಗಲೇರಿದ್ದು, ಈ ಸಿನಿಮಾಕ್ಕೆ ಆನೆ ಪಟಾಕಿ ಚಿತ್ರ ನಿರ್ಮಿಸಿದ್ದ ಸುರೇಶ್ ಮಂಗಳೂರು ಬಾಂಬ್ ಪ್ರಕರಣದ ಸಿನಿಮಾಕ್ಕೆ ಬಂಡವಾಳ ಹೂಡಲಿದ್ದಾರಂತೆ. ಸಿನಿಮಾಕ್ಕೆ ಐ ಯಾಮ್ ಕಲ್ಕಿ ಎಂದು ಹೆಸರಿಟ್ಟಿದ್ದು, ಏಕಕಾಲದಲ್ಲಿ ಕನ್ನಡ, ತಮಿಳು ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Suri Loves Sandhya: ಟೀಸರ್‌ನಲ್ಲಿ ಸೂರಿ ಲವ್ ಸ್ಟೋರಿ
MUST WATCH
ಹೊಸ ಸೇರ್ಪಡೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Lockdown Days: ಲಾಕ್‌ಡೌನ್ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.