ರಜನಿಕಾಂತ್ ಅಭಿನಯದ ಜೈಲರ್ ಮೊದಲ ಹಂತದ ಚಿತ್ರೀಕರಣ ಪೂರ್ಣ
Team Udayavani, Feb 15, 2023, 6:34 AM IST
ಮಂಗಳೂರು: “ಜೈಲರ್’ ಚಲನಚಿತ್ರದ ಚಿತ್ರೀಕರಣಕ್ಕೆ ಮಂಗಳೂರಿಗೆ ಆಗಮಿಸಿದ್ದ ಖ್ಯಾತ ನಟ ರಜನಿಕಾಂತ್ ಅವರು ಮಂಗಳೂರಿ ನಲ್ಲಿ ಮೊದಲನೇ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ.
ಪಿಲಿಕುಳದ ಗುತ್ತಿನ ಮನೆಯಲ್ಲಿ ಸೋಮವಾರ ಮತ್ತು ಮಂಗಳವಾರ ಜೈಲರ್ ಚಿತ್ರೀಕರಣ ಸಾಗಿತ್ತು. ಮಂಗಳವಾರ ನಟರಾದ ಶಿವರಾಜ್ ಕುಮಾರ್ ಮತ್ತು ರಜನಿಕಾಂತ್ ಅವರ ದೃಶ್ಯದ ಚಿತ್ರೀಕರಣ ಸಾಗಿತ್ತು. ಎರಡೂ ದಿನ ಗುತ್ತಿನ ಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಚಿತ್ರೀಕರಣ ಪೂರ್ಣಗೊಂಡ ಬಳಿಕ ಸಂಜೆ ಕೆಲ ಅಭಿಮಾನಿಗಳ ಜತೆ ರಜನಿಕಾಂತ್ ಅವರು ಫೋಟೋ ಕ್ಲಿಕ್ಕಿಸಿದ್ದು, ಜಾಲತಾಣದಲ್ಲಿ ವೈರಲ್ ಆಗಿತ್ತು. ರಜನಿಕಾಂತ್ ಅವರು ಖಾಸಗಿ ಹೊಟೇಲ್‌ನಲ್ಲಿ ತಂಗಿದ್ದು, ಅಭಿಮಾನಿಗಳು ಸೇರಿದಂತೆ ಯಾರಿಗೂ ಅವರನ್ನು ಭೇಟಿ ಮಾಡಲು ಅವಕಾಶ ಇರಲಿಲ್ಲ.
ಸಾಧುಕೋಕಿಲ ಪ್ರವೇಶ: ಕನ್ನಡ ಚಲನಚಿತ್ರ ಹಾಸ್ಯ ನಟ ಸಾಧುಕೋಕಿಲ ಅವರು ಬುಧವಾರ ಜೈಲರ್ ತಂಡವನ್ನು ಸೇರಿಕೊಂಡಿದ್ದರು. ಬುಧವಾರ ಪಿಲಿಕುಳದಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ಅವರೂ ಭಾಗಿಯಾದರು. ಅವರ ಜತೆ ಹಾಸ್ಯ ನಟ ಯೋಗಿ ಬಾಬು ಅವರ ಚಿತ್ರೀಕರಣವೂ ನಡೆಯಿತು.
ನಗರದಲ್ಲಿ ಮತ್ತೂಂದು ಶೆಡ್ನೂಲ್?
ಮೂಲಗಳ ಪ್ರಕಾರ ರಜನಿಕಾಂತ್ ಮತ್ತು ಶಿವರಾಜ್ ಕುಮಾರ್ ಅವರ ಇನ್ನೊಂದು ಹಂತದ ಶೂಟಿಂಗ್ ಮಂಗಳೂರಿನಲ್ಲಿ ನಡೆಯುವ ನಿರೀಕ್ಷೆ ಇದೆ. ದೇಶದ ಬೇರೆ ಬೇರೆ ಭಾಗದಲ್ಲಿ ಜೈಲರ್ ಶೂಟಿಂಗ್ ನಿಗದಿಯಾದ ಕಾರಣ ರಜನಿಕಾಂತ್ ತೆರಳಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಮಂಗಳೂರಿಗೆ ಬರುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.