ಸೈಕೋ ಥ್ರಿಲ್ಲರ್ “ಮೇನಿಯಾ”
Team Udayavani, Jun 1, 2022, 2:06 PM IST

ಸೈಕೋ ಥ್ರಿಲ್ಲರ್ ಜಾನರ್‌ನಲ್ಲಿ ಸಾಕಷ್ಟು ಸಿನಿಮಾಗಳು ಬರುತ್ತಿವೆ. ಈ ಮೂಲಕ ಪ್ರೇಕ್ಷಕರಿಗೆ ಥ್ರಿಲ್ ನೀಡುವ ಪ್ರಯತ್ನ ಆ ಸಿನಿಮಾಗಳದ್ದು. ಈಗ ಅದೇ ಸಾಲಿಗೆ ಸೇರುವ ಚಿತ್ರ “ಮೇನಿಯಾ-ಸಿನ್ಸ್ 1999′. ಇದು ಕೂಡ ವಿಭಿನ್ನ ಕಥಾವಸ್ತು ಹೊಂದಿರುವ ಚಿತ್ರ.
ಜುಲೈನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುನ್ನ ನಾಯಕ ಸ್ವಸ್ತಿಕ್ ಆರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡಿದೆ. ಮಧು.ಎಸ್ ಈ ಚಿತ್ರದ ನಿರ್ದೇಶಕರು. ಲೂಸ್ ಮಾದ ಯೋಗಿ ಅಭಿನಯದ ಲಂಕೆಸೇರಿದಂತೆ ಕನ್ನಡದ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಮಧು ಎಸ್, ದೊರೆ – ಭಗವಾನ್ ಅವರ ಇನ್ಸ್ಟಿಟ್ಯೂಟ್ ನಲ್ಲಿ ನಿರ್ದೇಶನ ತರಬೇತಿ ಸಹ ಪಡೆದಿದ್ದಾರೆ. ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಮಧು ಅವರೆ ಬರೆಯುತ್ತಿದ್ದಾರೆ. ಇದು ಮಧು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಸ್ವಸ್ತಿಕ್ ಆರ್ಯ ಈ ಚಿತ್ರದ ನಾಯಕ. ರಂಗ ನಾಯಕಿ ಧಾರಾವಾಹಿಯಲ್ಲಿ ನಟಿಸಿರುವ ಇವರು, ವಿಜಯ್ ಪ್ರಕಾಶ್ ಹಾಡಿರುವ ಜಿಯಾ ಆಲ್ಬಂ ನಲ್ಲೂ ಅಭಿನಯಿಸಿದ್ದಾರೆ.
ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಈ ಆಲ್ಬಂ ಸಾಂಗ್ ಮೂಡಿ ಬಂದಿತ್ತು. ಸ್ವಸ್ತಿಕ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಾಯಕ ಸ್ವಸ್ತಿಕ್ ಆರ್ಯ ಅವರು ಅರುಣ್ ಭಟ್ ಅವರೊಡಗೂಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಬೆಂಗಳೂರು- ಮಂಗಳೂರಿನಲ್ಲಿ ನಲವತ್ತು ದಿನಗಳ ಚಿತ್ರೀಕರಣ ನಡೆಯಲಿದೆ. ಎರಡು ಹಾಡುಗಳಿರುತ್ತದೆ. ವಿಶಾಲ್ ಕುಮಾರ್ ಗೌಡ ಛಾಯಾಗ್ರಾಹಕರಾಗಿ ಹಾಗೂ ಮಧು ತುಂಬಕೆರೆ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.