Sandalwood; ಮಂಕು ತಿಮ್ಮನ ಕಗ್ಗ ಚಿತ್ರದಿಂದ ಹಾಡು ಬಂತು
Team Udayavani, Aug 17, 2024, 4:04 PM IST
ಡಿವಿಜಿ ಅವರ ಮಂಕುತಿಮ್ಮನ ಕಗ್ಗ ಈಗ ಸಿನಿಮಾ ರೂಪ ಪಡೆಯುತ್ತಿದೆ. ಕನ್ನಡದಲ್ಲಿ ಈಗಾಗಲೇ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ.ರವಿ), ಡಿ.ವಿ.ಜಿ ಅವರ ಮಂಕುತಿಮ್ಮನ ಕಗ್ಗವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ.
ಎನ್ ಎ ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ ಶಿವಕುರ್ಮಾ ಸಹ ನಿರ್ಮಾಣವಿರುವ ಈ ಚಿತ್ರದ ಸ್ವಾಮಿದೇವನೇ ಹಾಡು ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಿದೆ. ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರೀಗಳು ಬರೆದಿದ್ದ ಈ ಗೀತೆಯನ್ನು ಮಂಕುತಿಮ್ಮನ ಕಗ್ಗ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಎ.ಟಿ.ರವೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮಧುಗಿರಿ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.
ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಬಾಲಕ ಸೋಮಿ(ಡಿ.ವಿ.ಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್ , ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ.
ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್ ಮುಂತಾದವರು ತಾರಾ ಬಳಗದಲ್ಲಿದ್ದಾರೆ. ಸಿ.ನಾರಾಯಣ್ ಛಾಯಾಗ್ರಹಣ ಹಾಗೂ ಆರ್.ಡಿ ರವಿ ಸಂಕಲನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.