ಸಂಬಂಧಗಳ ಸುತ್ತ ಮುಗಿಲ್‌ಪೇಟೆ
ಬಿಡುಗಡೆಯ ಹೊಸ್ತಿಲಿನಲ್ಲಿ ಮನುರಂಜನ್ ಚಿತ್ರ
Team Udayavani, Oct 27, 2021, 2:33 PM IST
ರವಿಚಂದ್ರನ್ ಪುತ್ರ ಮನುರಂಜನ್ ನಾಯಕರಾಗಿ ನಟಿಸಿರುವ “ಮುಗಿಲ್‌ಪೇಟೆ’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ನವೆಂಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ವಿಚಾರವನ್ನು ಚಿತ್ರತಂಡ ಇತ್ತೀಚೆಗೆ ಮಾಧ್ಯಮದ ಮುಂದೆ ಬಂದು ಹೇಳಿಕೊಳ್ಳುವ ಜೊತೆಗೆ ಸಿನಿಮಾ ಬಿಡುಗಡೆಯಾಗುತ್ತಿರುವ ಸಂತಸವನ್ನು ಹಂಚಿಕೊಂಡಿತು. ಇನ್ನು, ಚಿತ್ರಕ್ಕೆ ಸೆನ್ಸಾರ್‌ನಿಂದ ಯು/ಎ ಪ್ರಮಾಣ ಪತ್ರ ಸಿಕ್ಕಿದೆ.
ಈ ಚಿತ್ರವನ್ನು ಭರತ್ ಎಸ್ ನಾವುಂದ ನಿರ್ದೇಶಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಅವರು, “ಸಂಬಂಧಗಳಿಗೆ ಬೆಲೆ ಕೊಡುವ ಕುಟುಂಬವೊಂದು. ಸಂಬಂಧಗಳನ್ನು ಕಡೆಗಾಣಿಸುವ ಕುಟುಂಬ ಮತ್ತೂಂದು. ಈ ಎರಡು ಕುಟುಂಬದ ಎರಡು ಜೀವಗಳ ನಡುವೆ ಪ್ರೀತಿ ಮಾಡಿದಾಗ ಏನಾಗುತ್ತದೆ ಎಂಬುದೆ ಮುಗಿಲ್ ಪೇಟೆಯ ಕಥಾವಸ್ತು. ಇದು ಯಾವುದೇ ಒಂದು ಜಾನರ್‌ಗೆ ಸೀಮಿತವಾದ ಸಿನಿಮಾವಲ್ಲ. ಕೌಟುಂಬಿಕ ಸನ್ನಿವೇಶ, ಪ್ರೀತಿ, ಸಾಹಸ, ಉತ್ತಮ ಹಾಸ್ಯ ಎಲ್ಲವೂ ನಮ್ಮ ಸಿನಿಮಾದಲ್ಲಿದೆ’ ಎಂದರು.
ಚಿತ್ರಕ್ಕೆ ತೊಂಬತ್ತು ದಿನಗಳ ಕಾಲ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಸಕಲೇಶಪುರ, ಕುಂದಾಪುರ, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ನಾಯಕ ಮನುರಂಜನ್ ಮಾತನಾಡಿ, “ಚಿತ್ರದ ತುಣುಕು ಹಾಗೂ ಹಾಡುಗಳನ್ನು ಅಪ್ಪನಿಗೆ ತೋರಿಸಿದೆ. ಇಷ್ಟಪಟ್ಟರು. ಅವರ ಆಶೀರ್ವಾದ ಸದಾ ಇರುತ್ತದೆ. ಎಲ್ಲರ ಸಹಾಯದಿಂದ ನಮ್ಮ ಚಿತ್ರ ಬಿಡುಗಡೆ ಹಂತ ತಲುಪಿದೆ. ಟ್ರೇಲರ್ ಹಾಗೂ ಹಾಡು ಜನಪ್ರಿಯವಾಗಿದೆ.
ಇದನ್ನೂ ಓದಿ:- ಅಲ್ಪಸಂಖ್ಯಾತ ಬಾಂಧವರೇ ಕಾಂಗ್ರೆಸ್ ಗೆ ಒಮ್ಮೆ ಪಾಠ ಕಲಿಸಿ:ಹಾನಗಲ್ ನಲ್ಲಿ ಸಿಎಂ
ಇದನ್ನು ನೋಡಿದವರು ನನ್ನ ಪಾತ್ರ ಮೆಚ್ಚಿಕೊಂಡಿದ್ದಾರೆ. ಚಿತ್ರಕ್ಕೂ ಜನಮನ್ನಣೆ ಸಿಗುವ ಭರವಸೆಯಿದೆ. ಸಾಧುಕೋಕಿಲ, ರಂಗಾಯಣ ರಘು, ತಾರಾ, ಅವಿನಾಶ್ ಅವರಂತಹ ಉತ್ತಮ ಕಲಾವಿದರೊಡನೆ ಅಭಿನಯಿಸಿದ್ದ ಅನುಭವ ನಿಜಕ್ಕೂ ಮರೆಯುವ ಹಾಗಿಲ್ಲ’ ಎಂದರು. ನಟ ಸಾಧು ಕೋಕಿಲ ಈ ಚಿತ್ರದಲ್ಲಿ ಹದಿನೇಳು ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರಂತೆ. ಈ ಬಗ್ಗೆ ಮಾತನಾಡುವ ಅವರು, “ನಾನು ಮೊದಲ ಬಾರಿಗೆ ಹದಿನೇಳು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರತಂಡದವರು ಇದನ್ನು ಲಿಮ್ಕಾ ದಾಖಲೆಗೆ ಕಳುಹಿಸುತ್ತೇವೆ ಎನ್ನುತ್ತಿದ್ದಾರೆ. ಸಂತೋಷ. ಆದರೆ ಯಾವ ಪಾತ್ರಗಳು ಅಂತ ಈಗ ಹೇಳುವುದಿಲ್ಲ. ಚಿತ್ರದಲ್ಲೇ ನೋಡಿ ಆನಂದಿಸಿ’ಎಂದರು.
ಚಿತ್ರದಲ್ಲಿ ನಟಿಸಿದ ರಂಗಾಯಣ ರಘು ಭಾಗವತರ ಪಾತ್ರ ಮಾಡಿದ್ದಾರಂತೆ. “ನಾನು ಮೊದಲು ಬಣ್ಣ ಹಚ್ಚಿದ್ದು ರವಿಚಂದ್ರನ್ ಅವರ ಮನೆಯಲ್ಲಿ. ಈಗ ಅವರ ಮಗನೊಡನೆ ನಟಿಸಿದ್ದೇನೆ. ಭಾಗವತರ ಪಾತ್ರ ನಿರ್ವಹಣೆ ಮಾಡಿದ್ದೇನೆ’ ಎಂದರು. ಚಿತ್ರವನ್ನು ರಕ್ಷ ವಿಜಯ ಕುಮಾರ್ ನಿರ್ಮಿಸಿದ್ದಾರೆ. ಚಿತ್ರಕ್ಕೆ ಶ್ರೀಧರ್ ಸಂಭ್ರಮ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.