Kannada Cinema; ಸರಳವಾಗಿ ಸೆಟ್ಟೇರಿದ ‘ಮಾರ್ಗದರ್ಶಿ’
Team Udayavani, Feb 2, 2024, 5:06 PM IST
1960ರ ದಶಕದಲ್ಲಿ ವರನಟ ಡಾ. ರಾಜಕುಮಾರ್ ಅಭಿನಯದ “ಮಾರ್ಗದರ್ಶಿ’ ಎಂಬ ಸಿನಿಮಾ ತೆರೆಗೆ ಬಂದಿದ್ದು ಬಹುತೇಕರಿಗೆ ನೆನಪಿರಬಹುದು. ಈಗ ಅದೇ “ಮಾರ್ಗದರ್ಶಿ’ ಎಂಬ ಹೆಸರಿನಲ್ಲಿ ಮತ್ತೂಂದು ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ.
ಅಂದಹಾಗೆ, ಈ ಸಿನಿಮಾದ ಹೆಸರು “ಮಾರ್ಗದರ್ಶಿ’ ಅಂತಿದ್ದರೂ, ಈ ಸಿನಿಮಾಕ್ಕೂ ಅಣ್ಣಾವ್ರ ಅಭಿನಯದ “ಮಾರ್ಗದರ್ಶಿ’ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ. ತಮ್ಮ ಸಿನಿಮಾದ ಕಥಾಹಂದರಕ್ಕೆ ಸೂಕ್ತ ಎಂಬ ಕಾರಣಕ್ಕೆ ಚಿತ್ರತಂಡ ತಮ್ಮ ಸಿನಿಮಾಕ್ಕೆ “ಮಾರ್ಗದರ್ಶಿ’ ಅಂಥ ಹೆಸರಿಟ್ಟುಕೊಂಡಿದೆ.
ಇತ್ತೀಚೆಗೆ “ಮಾರ್ಗದರ್ಶಿ’ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿದ್ದು, ಶಾಸಕ ಪ್ರಿಯಾಕೃಷ್ಣ ಸಿನಿಮಾಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. “ಚೈತನ್ಯ ಸಿನಿಮಾಸ್’ ಬ್ಯಾನರ್‌ನಲ್ಲಿ ಬಸವರಾಜು ನಿರ್ಮಾಣ ಮಾಡುತ್ತಿರುವ ಕ್ರೈಂ-ಥ್ರಿಲ್ಲರ್ ಕಥಾಹಂದರದ “ಮಾರ್ಗದರ್ಶಿ’ ಸಿನಿಮಾಕ್ಕೆ ನಾಗೇಶ್ ಉಜ್ಜನಿ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ನವ ಪ್ರತಿಭೆ ಸಾಗರ್ ನಾಯಕನಾಗಿ ಹಾಗೂ ಗಹನಾ ನಾಯಕಿಯಾಗಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ನಾಗೇಂದ್ರ ಅರಸ್, ಮಳವಳ್ಳಿ ಸಾಯಿಕೃಷ್ಣ, ಜಗದೀಶ್ ಕೊಪ್ಪ, ಶಿವಕುಮಾರ್ ಆರಾಧ್ಯ, ಜೋಗಿ ನಾಗರಾಜ್, ನಂಜಪ್ಪ ಆಚಾರ್, ಸೂರ್ಯ ಕುಂದಾಪುರ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.