ಟೀಸರ್‌ನಲ್ಲಿ ಹೊರಬಂದ “ಮಾಯಾವಿ’
Team Udayavani, Sep 22, 2019, 3:00 AM IST
ನವ ನಿರ್ದೇಶಕ ಬಿ. ನವೀನ್ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬಂದಿರುವ “ಮೇಲೊಬ್ಬ ಮಾಯಾವಿ’ ಚಿತ್ರ ತೆರೆಗೆ ಬರಲು ತಯಾರಿ ನಡೆಸುತ್ತಿದೆ. ಸದ್ಯ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ “ಮೇಲೊಬ್ಬ ಮಾಯಾವಿ’ಯ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ “ಮೇಲೊಬ್ಬ ಮಾಯಾವಿ’ ಚಿತ್ರದ ಟೀಸರ್ ಅನ್ನು ಬಿಡುಗಡೆಗೊಳಿಸಲಾಯಿತು.
ಮುಖ್ಯಮಂತ್ರಿ ಚಿನ್ನದ ಪದಕ ಪ್ರಶಸ್ತಿ ವಿಜೇತ ಪೊಲೀಸ್ ಇನ್‌ಸ್ಪೆಕ್ಟರ್ ಎಲ್.ವೈ ರಾಜೇಶ್ ಚಿತ್ರದ ಟೀಸರ್ ಬಿಡುಗಡೆಮಾಡಿ, “ಟೀಸರ್‌ನಲ್ಲಿ ಒಂದು ಫ್ರೆಶ್‌ನೆಸ್ ಇದೆ. ಎಲ್ಲರ ಬದುಕಿನಲ್ಲೂ ಹಾದು ಹೋಗುವ ಕತ್ತಲು-ಬೆಳಕಿನಾಟವನ್ನು ದೃಶ್ಯಗಳ ಮೂಲಕ ಮನೋಜ್ಞವಾಗಿ ಕಟ್ಟಿಕೊಡಲಾಗಿದೆ. ಟೀಸರ್ ನೋಡಿದ ಮೇಲೆ, ಇನ್ನೂ ಏನೋ ಇರಬೆಕಿತ್ತು ಎಂದೆನಿಸುತ್ತದೆ. ಕನ್ನಡದಲ್ಲಿ ಇತ್ತೀಚಿಗೆ ಹೊಸ ಪ್ರತಿಭೆಗಳು ಹೊಸತನದ ಚಿತ್ರಗಳೊಂದಿಗೆ ಬರುತ್ತಿದ್ದಾರೆ.
“ಮೇಲೊಬ್ಬ ಮಾಯಾವಿ’ ಚಿತ್ರ ಕೂಡ ಆ ಸಾಲಿಗೆ ಸೇರಲಿ’ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ನವೀನ್ ಕೃಷ್ಣ, “ಕರಾವಳಿ ಭಾಗದಲ್ಲಿ ನಡೆಯುವ ದಂಧೆಯೊಂದರ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ಈ ಟೀಸರ್‌ನಲ್ಲಿ ಕಂಟೆಂಟ್‌ನ್ನು ಬಿಟ್ಟುಕೊಡದೆ ಕೇವಲ ಚಿತ್ರದ ಬಗ್ಗೆ ಕುತೂಹಲ ಮೂಡಿಸುವ ಪ್ರಯತ್ನ ಮಾಡಿದ್ದೇವೆ.
ಮುಂಬರುವ ಟ್ರೇಲರ್‌ನಲ್ಲಿ ಚಿತ್ರದಲ್ಲಿರುವ ಮಾಫಿಯಾ, ನಾಯಕನಿಗಿರುವ ಸೈಕಾಲಿಜಿಕಲ್ ಡಿಸಾರ್ಡರ್, ನಾಯಕಿ ಅದನ್ನು ವಾಸಿ ಮಾಡಲು ಏನು ಮಾಡುತ್ತಾಳೆ, ಎನ್ನುವ ಇತರೆ ಸಂಗತಿಗಳನ್ನು ಪ್ರೇಕ್ಷಕರ ಮುಂದಿಡುತ್ತೇವೆ. ಅಕ್ಟೋಬರ್ ಮೊದಲನೇ ವಾರದಲ್ಲಿ ಟ್ರೇಲರ್ ರಿಲೀಸ್ ಮಾಡಿ, ನವೆಂಬರ್‌ನಲ್ಲಿ ಚಿತ್ರ ಬಿಡುಗಡೆಮಾಡುವ ಸಿದ್ಧತೆಯಲ್ಲಿದ್ದೇವೆ’ ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದರು.
ಸಮಾರಂಭದಲ್ಲಿ ನಿರ್ಮಾಪಕ ಭರತ್ ಕುಮಾರ್ ಸೇರಿದಂತೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಹಾಜರಿದ್ದರು. ಸಂಚಾರಿ ವಿಜಯ್, ಅನನ್ಯಾ ಶೆಟ್ಟಿ, ಚಕ್ರವರ್ತಿ ಚಂದ್ರಚೂಡ್, ಎಂ.ಕೆ ಮಠ ಮತ್ತಿತರರು “ಮೇಲೊಬ್ಬ ಮಾಯಾವಿ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ದಿವಂಗತ ಎಲ್.ಎನ್ ಶಾಸ್ತ್ರೀ ಸಂಗೀತ ಸಂಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.