ಏಕಕಾಲಕ್ಕೆ ಕನ್ನಡ ಮತ್ತು ತೆಲುಗಿನಲ್ಲಿ “ಮೀನಾ ಬಜಾರ್‌’

Team Udayavani, Feb 13, 2020, 7:01 AM IST

Meena-Bazar

ಇಡೀ ಪ್ರಪಂಚವೇ ಒಂದು ಬಜಾರ್‌ ಇದ್ದಂತೆ. ಈ ಬಜಾರ್‌ನಲ್ಲಿ ಒಳ್ಳೆಯದು, ಕೆಟ್ಟದ್ದು ಎರಡೂ ಇದೆ. ಇಲ್ಲಿ ಎಲ್ಲವೂ ಸಿಗುತ್ತೆ. ನೋವಿದೆ, ನಲಿವಿದೆ, ಮೋಸವಿದೆ, ದ್ವೇಷವಿದೆ, ಅಸೂಯೆಯೂ ಇದೆ. ಅಷ್ಟೇ ಯಾಕೆ ಕ್ರೌರ್ಯವೂ ತುಂಬಿದೆ. ಇವೆಲ್ಲಾ ಅಂಶಗಳನ್ನು ಒಳಗೊಂಡ ಚಿತ್ರವನ್ನು ಮಾಡಿರುವ ನಿರ್ದೇಶಕ ರಾಣಾ ಸುನೀಲ್‌ಕುಮಾರ್‌ ಸಿಂಗ್‌, ಇದೀಗ ತಮ್ಮ ಚಿತ್ರವನ್ನು ಬಿಡುಗಡೆ ಮಾಡೋಕೆ ಅಣಿಯಾಗಿದ್ದಾರೆ.

ಅಂದಹಾಗೆ, ಅವರ ನಿರ್ದೇಶನದ ಚಿತ್ರಕ್ಕೆ “ಡಬ್ಲ್ಯು ಡಬ್ಲ್ಯು ಡಬ್ಲ್ಯು.ಮೀನಾ ಬಜಾರ್‌.ಕಾಮ್‌’ ಎಂದು ನಾಮಕರಣ ಮಾಡಿದ್ದಾರೆ. ಇದು ಅವರ ಎರಡನೇ ನಿರ್ದೇಶನದ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ, ಸಾಹಸದ ಜೊತೆಯಲ್ಲಿ ಅವರು ಚಿತ್ರದಲ್ಲಿ ನಿರ್ದೇಶಕನ ಪಾತ್ರಕ್ಕೂ ಬಣ್ಣ ಹಚ್ಚಿದ್ದಾರೆ. ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿರುವುದರಿಂದ ಒಂದಷ್ಟು ಮಾಹಿತಿ ಹಂಚಿಕೊಂಡ ನಿರ್ದೇಶಕ ರಾಣಾ ಸುನೀಲ್‌ಕುಮಾರ್‌, ಹೇಳಿದ್ದಿಷ್ಟು.

“ಇದು ಈಗಿನ ವಾಸ್ತವ ಅಂಶಗಳನ್ನು ಹೊಂದಿದೆ. ಪ್ರಪಂಚ ಒಂದು ಬಜಾರ್‌ ಇದ್ದಂತೆ. ಇಲ್ಲಿ ಎಲ್ಲವೂ ಇದೆ. ಆ ವಿಷಯ ಇಟ್ಟುಕೊಂಡೇ ಒಂದಷ್ಟು ಪಾತ್ರಗಳ ಮೂಲಕ ಹೊಸ ವಿಷಯ ಹೇಳಹೊರಟಿದ್ದೇನೆ. ಇಲ್ಲಿ ಐದು ಪ್ರಮುಖ ಪಾತ್ರಗಳಿವೆ. ಪ್ರತಿಯೊಂದು ಪಾತ್ರಕ್ಕೂ ವಿಶೇಷತೆ ಇದೆ. ಚಿತ್ರ ನೋಡಿದವರಿಗೆ ಒಂದು ಸಂದೇಶವೂ ರವಾನೆಯಾಗುತ್ತೆ. ಅದೇನೆಂಬುದನ್ನು ಚಿತ್ರದಲ್ಲೇ ನೋಡಬೇಕು’ ಎಂಬುದು ನಿರ್ದೇಶಕರ ಮಾತು.

ಇನ್ನು, ಮುಂಬೈ ಮೂಲದ ಶ್ರೀಜಿತಾ ಘೋಷ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಲ್ಲಿ ನೇರವಾಗಿ ಮಾತನಾಡುವ, ತುಂಬಾನೇ ಬೋಲ್ಡ್‌ ಆಗಿರುವ ಪಾತ್ರ ಮಾಡಿದ್ದಾರಂತೆ. ಇನ್ನು, ಇದುವರೆಗೆ ಸುಮಾರು ನೂರಾರು ಚಿತ್ರಗಳಲ್ಲಿ ಐಟಂ ಡ್ಯಾನ್ಸರ್‌ ಆಗಿದ್ದ ಆಲಿಷಾ ಅವರು, ಇಲ್ಲಿ ಮೊದಲ ಸಲ ಖಳನಾಯಕಿ ಪಾತ್ರದಲ್ಲಿ ನಟಿಸಿದ್ದಾರಂತೆ. ಚಿತ್ರದಲ್ಲಿ ರಾಜೇಶ್‌ ನಟರಂಗ, ಅರವಿಂದ್‌, ಮಧುಸೂಧನ್‌, ಜೀವಾ, ಭಾಸ್ಕರ್‌, ಲಕ್ಷ್ಮೀ ಹೆಗಡೆ, ರೂಪೇಶ್‌ ಕುಮಾರ್‌ ಸೇರಿದಂತೆ ಹಲವರು ನಟಿಸಿದ್ದಾರೆ.

ಕದ್ರಿ ಮಣಿಕಾಂತ್‌ ಸಂಗೀತ ನೀಡಿದ್ದಾರೆ. ಮ್ಯಾಥುರಾಜನ್‌ ಛಾಯಾಗ್ರಹಣವಿದೆ. ಶ್ರೀಕಾಂತ್‌ ಸಂಕಲನ ಮಾಡಿದರೆ, ಸುಜಿ, ಅನೀ, ಕಲ್ಪನ್‌ ನೃತ್ಯ ಸಂಯೋಜಿಸಿದ್ದಾರೆ. ರಿಯಲ್‌ ಸತೀಶ್‌ ಸಾಹಸ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್‌ ಪ್ರಮಾಣ ಪತ್ರ ನೀಡಿದ್ದು, ಕನ್ನಡದಲ್ಲಿ ಯು/ಎ ತೆಲುಗಿನಲ್ಲಿ “ಯು’ ಪ್ರಮಾಣ ಪತ್ರ ಪಡೆದುಕೊಂಡಿರುವ ಚಿತ್ರಕ್ಕೆ ನಾಗೇಂದ್ರಸಿಂಗ್‌ ಅವರು ಸಿಂಗ್‌ ಸಿನಿಮಾಸ್‌ ಮೂಲಕ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.