ಮೀ ಟೂ ಜಟಾಪಟಿ; ಶ್ರುತಿ ಹರಿಹರನ್ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು
Team Udayavani, Oct 22, 2018, 3:49 PM IST
ಬೆಂಗಳೂರು: ಮೀ ಟೂ ಅಭಿಯಾನದಲ್ಲಿ ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ವಿರುದ್ಧ ಹಿರಿಯ ನಟ, ಅರ್ಜುನ್ ಸರ್ಜಾ ಮಾವ ರಾಜೇಶ್ ಅವರು ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ ಶ್ರುತಿ ಹರಿಹರನ್ ವಿರುದ್ಧ ಕೋರ್ಟ್ ಮೆಟ್ಟಿಲೇರುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
ಲೂಸಿಯಾ ಖ್ಯಾತಿಯ ನಟಿ ಹರಿಹರನ್ ಮೀ ಟೂ ಅಭಿಯಾನದಡಿಯಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪ ಇದೀಗ ಭಾರೀ ಆರೋಪ, ಪ್ರತ್ಯಾರೋಪಕ್ಕೆ ಎಡೆ ಮಾಡಿಕೊಟ್ಟಿದೆ.
ಅಷ್ಟೇ ಅಲ್ಲ ಶ್ರುತಿ ಹರಿಹರನ್ ಗೆ ನಟ ಚೇತನ್, ಪ್ರಕಾಶ್ ರೈ ಸೇರಿದಂತೆ ಹಲವರು ಬೆಂಬಲ ನೀಡಿದ್ದರೆ, ಅರ್ಜುನ್ ಸರ್ಜಾಗೂ ಕೂಡಾ ಹಿರಿಯ ನಟಿ ಸರೋಜಾದೇವಿ ಸೇರಿದಂತೆ ಘಟಾನುಘಟಿ ನಟರು ಬೆಂಬಲ ನೀಡಿದ್ದಾರೆ.
ಸೋಮವಾರ ಬೆಳಗ್ಗೆ ವಾಣಿಜ್ಯ ಮಂಡಳಿಗೆ ಹಿರಿಯ ನಟ ರಾಜೇಶ್ ಅವರು ಆಗಮಿಸಿ, ಅಧ್ಯಕ್ಷ ಚಿನ್ನೇಗೌಡರಿಗೆ ಶ್ರುತಿ ಹರಿಹರನ್ ವಿರುದ್ಧ ದೂರು ನೀಡಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚಿತ್ರರಂಗದಲ್ಲಿ ಮಡಿವಂತಿಕೆ, ಮೈಲಿಗೆ ಇಲ್ಲ. ತಮ್ಮ ಅಳಿಯನ ವಿರುದ್ಧ ಷಡ್ಯಂತ್ರ ಮಾಡಿ ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ವಾಣಿಜ್ಯ ಮಂಡಳಿಯವರು ಕೈಗೊಳ್ಳುವ ತೀರ್ಮಾನಕ್ಕೆ ತಾವು ಬದ್ಧ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.