ಇದೇ ತಿಂಗಳಲ್ಲಿ ಮೇಘಾ ಅಲಿಯಾಸ್ ಮ್ಯಾಗಿ
Team Udayavani, Jun 9, 2018, 11:01 AM IST
ಇದೇ ಮೊದಲ ಸಲ ನಟಿ ಸುಕೃತ ವಾಗ್ಲೆ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ “ಮೇಘ ಅಲಿಯಾಸ್ ಮ್ಯಾಗಿ’ ಚಿತ್ರ ಈಗ ತೆರೆಯ ಮೇಲೆ ಬರಲು ಸಜ್ಜಾಗಿದೆ. ಜೂ.15 ರಂದು ತೆರೆಗೆ ಬರುತ್ತಿರುವ ಈ ಚಿತ್ರವನ್ನು ವಿನಯ್‌ಕುಮಾರ್ ನಿರ್ಮಾಣ ಮಾಡಿದ್ದಾರೆ. ಇನ್ನು, ಚಿತ್ರವನ್ನು ವಿಶಾಲ್ ಪುಟ್ಟಣ್ಣ ನಿರ್ದೇಶನ ಮಾಡಿದ್ದಾರೆ. ಕಥೆ, ಚಿತ್ರಕಥೆ ಜವಾಬ್ದಾರಿಯೂ ಅವರದೇ.
ಇದೊಂದು ರೋಚಕ ಕಥಾನಕ ಹೊಂದಿರುವ ಚಿತ್ರ. ಹೆಣ್ಣೊಬ್ಬಳ ಮನದ ಭಾವೋದ್ವೇಗದ ಕಥಾನಕವನ್ನು ಒಳಗೊಂಡಿರುವ ಈ ಚಿತ್ರವು ಥ್ರಿಲ್ಲರ್ ಹಾಗೂ ಸಸ್ಪೆನ್ಸ್ ಕಥೆಯನ್ನು ಹೊಂದಿದೆ. ಸುಕೃತಾ ವಾಗ್ಲೆ ಈ ಚಿತ್ರದಲ್ಲಿ ಎರಡು ಬಗೆಯ ಪಾತ್ರದಲ್ಲಿ ಮಿಂಚಿದ್ದಾರೆ. ಒಂದು ರೀತಿಯ ನಾಯಕ, ನಾಯಕಿ ಆಗಿರುವಂತಹ ಪಾತ್ರ.
ಬೆಂಗಳೂರು, ಕಳಸಾ ಹಾಗೂ ಕುಂದಾಪುರದ ಸುತ್ತ ಮುತ್ತ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಜಿನಿಸ್ ಪೈಕ್ಕಟ್ಟು ಹಾಗೂ ಜಯಪ್ರಕಾಶ್ ಛಾಯಾಗ್ರಹಣ ಮಾಡಿದ್ದಾರೆ. ಅತಿಶಯ ಜೈನ್ ಸಂಗೀತವಿದೆ. ಪರಮೇಶ್ ಸಂಭಾಷಣೆ ಬರೆದಿದ್ದಾರೆ. ವಿನಯ್ ಕುಮಾರ್ ಕೂರ್ಗು ಸಂಕಲನವಿದೆ.
ವಿನು ಮನಸು ಹಿನ್ನೆಲೆ ಸಂಗೀತ ನೀಡಿದರೆ, ರಘು ಎಸ್, ಸೈ ಅರುಣ್ ಕುಮಾರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಮಲ್ಲಿಕಾರ್ಜುನ ಕಾರ್ಯಕಾರಿ ನಿರ್ಮಾಪಕರಾಗಿದ್ದು, ತೇಜ್ ಗೌಡ, ನೀತು ಬಾಲ, ಕಿರಣ್ ಕುಮಾರ್, ಮಂಜು ಪಾವಗಡ, ಅಶ್ವಿನ್ ಕುಮಾರ್, ಮಹೇಶ್ ಗೌಡ, ನಟರಾಜ್, ತನುಷ, ಇನ್ನು ಮುಂತಾದವರು ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.