ಕಲರ್‌ಫುಲ್ ನೋಡು ಶಿವ
Team Udayavani, Mar 13, 2021, 12:45 PM IST
ದಿನದಿಂದ ದಿನಕ್ಕೆ ಆಲ್ಬಂ ಸಾಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಹಲವಾರು ಆಲ್ಬಂಗಳು ಬಿಡುಗಡೆಯಾಗಿದ್ದು, ಈಗ “ನೋಡು ಶಿವ’ ಎಂಬ ಆಲ್ಬಂ ಬಿಡುಗಡೆಯಾಗಿದೆ. ಸುಮಿತ್ ಎಂ.ಕೆ ಹಾಗೂ ಕಿರುತೆರೆ ನಟಿ ಮೇಘಾ ಶೆಟ್ಟಿ ಈ ಆಲ್ಬಂನಲ್ಲಿ ಅಭಿನಯಿಸಿದ್ದಾರೆ. ಅತಿಥಿ ಪಾತ್ರದಲ್ಲಿ ಚಂದನ್ ಶೆಟ್ಟಿ ಸಹ ಕಾಣಿಸಿಕೊಂಡಿದ್ದಾರೆ. ಎಂ.ಕೆ ಆರ್ಟ್ಸ್ ಲಾಂಛನದಲ್ಲಿ ಮೋನಿಕಾ ಕಲ್ಲುರಿ ಅವರು ಈ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದು, ಇತ್ತೀಚೆಗೆ ಆನಂದ್ ಆಡಿಯೋ ಯೂಟ್ಯೂಬ್‌ನಲ್ಲಿ ಹಾಡು ಬಿಡುಗಡೆಯಾಗಿದೆ.
ಚಿತ್ರಕ್ಕೆ ಚಂದನ ಶೆಟ್ಟಿ ಸಂಗೀತ ನೀಡಿದ್ದಾರೆ. ಆಲ್ಬಂ ಬಗ್ಗೆ ಮಾತನಾಡುವ ಅವರು, “ಲಾಕ್‌ಡೌನ್ ಶುರುವಾಗಿ ಒಂದು ವಾರ ಆಗಿತ್ತು. ಸುಮಿತ್ ಅವರು ಕರೆ ಮಾಡಿ, ಲಿರಿಕ್ಸ್ ಕಳುಹಿಸಿದ್ದರು. ಟ್ಯೂನ್ ಮಾಡುವಂತೆಯೂ ಹೇಳಿದರು. ಲಾಕ್ ಡೌನ್ ಸಮಯದಲ್ಲಿ ಮಾಡಿದ ಹಾಡು ಇದು. ಆ ಹಾಡನ್ನು ಅದ್ಧೂರಿಯಾಗಿ ಚಿತ್ರೀಕರಣ ಮಾಡಲಾಗಿದೆ’ ಎಂದರು.
ಇದನ್ನೂ ಓದಿ:ನಾಯಕಿಯ ಹುಡುಕಾಟದಲ್ಲಿ ‘ಕಥಾನಾಯಕ’
ಇನ್ನು ಹಾಡಿಗೆ ಸಾಹಿತ್ಯ ಬರೆದು, ಆಲ್ಬಂನಲ್ಲಿ ಕಾಣಿಸಿಕೊಂಡಿರುವ ಸುಮಿತ್, “ಜೀವನದಲ್ಲಿ ಏನಾದರೊಂದು ಪ್ರಯತ್ನ ಮಾಡಬೇಕು. ಹಲವು ಸೋಲಿನ ಬಳಿಕ. ಒಂದು ಗೆಲುವು ಇದ್ದೇ ಇರುತ್ತದೆ. ಒಟ್ಟಿನಲ್ಲಿ ಏನೋ ಒಂದು ಮಾಡಬೇಕು. ಆ ಪ್ರಯತ್ನವೇ ಇದು. ಇದೀಗ ಹಾಡು ಬಿಡುಗಡೆ ಆಗಿದೆ’ ಎಂದರು.
ಸುಮಾರು 60 ನೃತ್ಯ ಕಲಾವಿದರು ಹಾಗೂ 150ಕ್ಕೂ ಅಧಿಕ ಸಹಕಲಾವಿದರು ಈ ಆಲ್ಬಂ ಸಾಂಗ್ ನಲ್ಲಿ ಅಭಿನಯಿಸಿದ್ದಾರೆ. ಬನ್ನೇರುಘಟ್ಟ ರಸ್ತೆಯ ಎ.ಎಂ.ಸಿ ಇಂಜನಿಯರಿಂಗ್ ಕಾಲೇಜ್ ಆವರಣದಲ್ಲಿ ಈ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ: ಮುಂದಿನ ವಾರದಿಂದ ಶುರು “ಮುಂದುವರೆದ ಅಧ್ಯಾಯ”
ಕರುಣಾಕರ್ ಅವರ ಛಾಯಾಗ್ರಹಣವಿದೆ. ಆಲ್ಬಂ ರಿಲೀಸ್‌ನಲ್ಲಿ ಹಿರಿಯ ನಿರ್ದೇಶಕ ಭಗವಾನ್, ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ, ಪ್ರಯತ್ನಕ್ಕೆ ಶುಭಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.