ವಿಂಟೇಜ್ ನಲ್ಲಿ ಹೊಸಬರ ಕನಸು; ತೆರೆಯತ್ತ ‘ಮಾಂಕ್ ದಿ ಯಂಗ್’
Team Udayavani, Jun 30, 2023, 11:44 AM IST
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಮಾಂಕ್ ದಿ ಯಂಗ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿಸಿ, ಸದ್ಯ ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿರುವ “ಮಾಂಕ್ ದಿ ಯಂಗ್’ ಸಿನಿಮಾದ ಮೊದಲ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್, ನಟ ಪ್ರಥಮ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಸಮಾರಂಭದಲ್ಲಿ ಹಾಜರಿದ್ದು “ಮಾಂಕ್ ದಿ ಯಂಗ್’ ಚಿತ್ರತಂಡಕ್ಕೆ ಶುಭ ಹಾರೈಸಿದರು.
“ವಾಲ್ಕಾನೋ ಪಿಕ್ಚರ್’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ “ಮಾಂಕ್ ದಿ ಯಂಗ್’ ಸಿನಿಮಾಕ್ಕೆ ಮಾಶ್ಚಿತ್ ಸೂರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ವಿಂಟೇಜ್ ಫ್ಯಾಂಟಸಿ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿರುವ “ಮಾಂಕ್ ದಿ ಯಂಗ್’ ಸಿನಿಮಾದಲ್ಲಿ ನಾಯಕನಾಗಿ ಸರೋವರ್, ನಾಯಕಿಯಾಗಿ ಸೌಂದರ್ಯಾ ಗೌಡ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಉಷಾ ಭಂಡಾರಿ, ರವಿಶಂಕರ್, ಪ್ರಣಯಮೂರ್ತಿ, ಶಿವಪ್ಪ, ಗೋಪಿಚಂದ್ ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇದೇ ವೇಳೆ ಮಾತನಾಡಿದ ನಿರ್ದೇಶಕ ಮಾಶ್ಚಿತ್ ಸೂರ್ಯ, “ಇದೊಂದು ವಿಂಟೇಜ್ ಫ್ಯಾಂಟಸಿ ಥ್ರಿಲ್ಲರ್ ಶೈಲಿಯ ಸಿನಿಮಾ. ಕನ್ನಡದಲ್ಲಿ ಈ ಶೈಲಿಯ ಸಿನಿಮಾಗಳು ಬಂದಿದ್ದು ತುಂಬ ಕಡಿಮೆ. ಒಂದಷ್ಟು ಕಾಲ್ಪನಿಕ ವಿಷಯಗಳನ್ನು ಇಟ್ಟುಕೊಂಡು ಅದನ್ನು ಥ್ರಿಲ್ಲಿಂಗ್ ಆಗಿ ಹೇಳಿದ್ದೇವೆ. ಎಲ್ಲ ಥರದ ಎಂಟರ್‌ಟೈನ್ಮೆಂಟ್ ಎಲಿಮೆಂಟ್ಸ್ ಸಿನಿಮಾದಲ್ಲಿದ್ದು, ಎಲ್ಲ ವರ್ಗದ ಆಡಿಯನ್ಸ್‌ಗೂ ಸಿನಿಮಾ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಿನಿಮಾದ ಬಗ್ಗೆ ಮಾತನಾಡಿದ ನಾಯಕ ನಟ ಸರೋವರ್, “ಔಟ್ ಆಫ್ ದಿ ಬಾಕ್ಸ್ ಕಲ್ಪನೆಯಲ್ಲಿ ಮೂಡಿಬಂದಿರುವ ಸಿನಿಮಾ. ಕಟ್ಟುಪಾಡುಗಳನ್ನು ಮೀರಿ ಕಟ್ಟಿಕೊಟ್ಟಿರುವ ಸಿನಿಮಾ ಇದಾಗಿದೆ. ಎಲ್ಲ ಯೋಚನೆಗಳು ಹೊಸದಾಗಿದೆ. ಸಿನಿಮಾದ ಮುಂದಿನ ದೃಶ್ಯಗಳನ್ನು ಯಾರೂ ಕೂಡ ಕಲ್ಪಿಸಿಕೊಳ್ಳಲಾಗದು. ಎರಡು ಮೂರು ಕಾಲಘಟ್ಟದಲ್ಲಿ ಸಿನಿಮಾ ಸಾಗುತ್ತದೆ. ಟೈಮ್ ಟ್ರಾವೆಲ್ ವಿಷಯ ಸಿನಿಮಾದಲ್ಲಿದೆ. ಸಿನಿಮಾದಲ್ಲಿ ಕಾಲ್ಪನಿಕ ಜಗತ್ತಿನಲ್ಲಿ ಬದುಕುವ ವ್ಯಕ್ತಿಯ ಪಾತ್ರದಲ್ಲಿ ಅಭಿನಯಿಸಿದ್ದೇನೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮದಲ್ಲಿ ಕಲಾವಿದರು, ತಂತ್ರಜ್ಞರು ಹಾಜರಿದ್ದರು.
ಜಿ.ಎಸ್.ಕಾರ್ತಿಕ ಸುಧನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.