ಕೇರಳ ಚಿತ್ರೋತ್ಸವಕ್ಕೆ ಮೂಕ ನಾಯಕ
Team Udayavani, May 15, 2018, 11:14 AM IST
ಕೇರಳ ಚಲನಚಿತ್ರ ಅಕಾಡೆಮಿಯು ಪ್ರತಿ ವರ್ಷ ಆಯೋಜಿಸುವ ರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ “ಮೂಕ ನಾಯಕ’ ಚಿತ್ರವು ಆಯ್ಕೆಯಾಗಿದೆ. ಕೇರಳದ ಈ 10ನೇ ಚಿತ್ರೋತ್ಸವವು ಜೂನ್ 8ರಿಂದ 12ರವರೆಗೆ ನಡೆಯಲಿದೆ.
ಈ ಮುನ್ನ “ಮೂಕ ನಾಯಕ’ ಚಿತ್ರವು ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನವಾಗುವುದರ ಜೊತೆಗೆ ಮುಂಬೈ ಮತ್ತು ನೋಯ್ಡ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರಶಂಸಾ ಪತ್ರಕ್ಕೆ ಭಾಜನವಾಗಿದೆ. ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಈ ಚಿತ್ರವು ಕರ್ನಾಟಕ ಮತ್ತು ಅಮೇರಿಕಾದಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.
ಕುಮಾರ್ ಗೋವಿಂದ್ “ಮೂಕ ನಾಯಕ’ನಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ “ಸ್ಪರ್ಶ’ ರೇಖ, ಶೀತಲ್ ಶೆಟ್ಟಿ, ಸುಂದರ್ ರಾಜ್, ವೆಂಕಟರಾಜು ಮುಂತಾದವರು ಅಭಿನಯಿಸಿದ್ದಾರೆ.
ಬಾಲರಾಜ್ ಸಂಜೀವ್ ಮೂವೀಸ್‌ನಡಿ ಬಾಲರಾಜ್ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಬರಗೂರು ರಾಮಚಂದ್ರಪ್ಪ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಗೆ ಚಿತ್ರವನ್ನು ನಿರ್ದೇಶಿಸಿದ್ದಾರೆ. ಶಮಿತಾ ಮಲಾ°ಡ್ ಅವರ ಸಂಗೀತ ನಿರ್ದೇಶನ, ಸುರೇಶ್ ಅರಸ್ ಅವರ ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಮೂರು ಕಳ್ಳತನ ಪ್ರಕರಣದ ಆರೋಪಿ ಬಂಧನ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.