ಮೂಕನಾಯಕ ಸೆನ್ಸಾರ್ ಆಗಿದೆ; ಬಿಡುಗಡೆಯಾಗಬೇಕಿದೆ
Team Udayavani, Jan 2, 2018, 11:06 AM IST
ಬರಗೂರು ರಾಮಚಂದ್ರಪ್ಪನವರು ಸದ್ದಿಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಮುಗಿಸಿರುವುದಷ್ಟೇ ಅಲ್ಲ, ಆ ಚಿತ್ರದ ಸೆನ್ಸಾರ್ ಸಹ ಆಗಿದ್ದು, “ಯು’ ಪ್ರಮಾಣ ಪತ್ರ ಸಿಕ್ಕಿದೆ. ಚಿತ್ರ ಯಾವುದು ಗೊತ್ತಾ? “ಮೂಕನಾಯಕ’. ಕುಮಾರ್ ಗೋವಿಂದ್, ಈ ಚಿತ್ರದಲ್ಲಿ “ಮೂಕನಾಯಕ’ನಾಗಿ ಕಾಣಿಸಿಕೊಂಡಿರುವುದು ವಿಶೇಷ.
“ಮೂಕನಾಯಕ’ ಎಂಬ ಹೆಸರೇ ಹೇಳುವಂತೆ, ಈ ಚಿತ್ರದ ನಾಯಕ ಸೂರ್ಯ ಒಬ್ಬ ಮೂಖನಾಗಿದ್ದು, ಗ್ರಾಮೀಣ ಭಾಗದ ಚಿತ್ರಕಲಾವಿದರನಾಗಿರುತ್ತಾನೆ. ಅಕ್ಕನ ಆಶ್ರಯದಲ್ಲಿ ಬದುಕುವ ಅವನಿಗೆ ತಾನು ರಚಿಸುವ ಚಿತ್ರಗಳೇ ಮಾತು ಇದ್ದಂತೆ. ತನ್ನ ಎಲ್ಲ ಭಾವನೆಗಳನ್ನೂ ಚಿತ್ರಗಳ ಮೂಲಕ ಅಭಿವ್ಯಕ್ತಿಗೊಳಿಸುವ ಆತ, ದಲಿತರ ಬವಣೆ, ರೈತರನ ಕಷ್ಟಗಳನ್ನು ತನ್ನ ಚಿತ್ರದ ಮೂಲಕ ಬಿಂಬಿಸುತ್ತಾ ಹೋಗುತ್ತಾನೆ.
ತನ್ನ ಚಿತ್ರಗಳಿಗೆ ಮಾರುಕಟ್ಟೆ ಇಲ್ಲದಿದ್ದರೂ, ಆತ ತನ್ನ ಬದ್ಧತೆಯನ್ನು ಬಿಡುವುದಿಲ್ಲ. ಹೀಗಿರುವಾಗಲೇ ಒಂದು ಅನಿರೀಕ್ಷಿತ ತಿರುವು ಪಡೆದುಕೊಳ್ಳುವ ಚಿತ್ರವು, ಒಂದು ಹಂತದಲ್ಲಿ ಹೋರಾಟದ ಮಜಲು ಮುಟ್ಟುತ್ತದೆ. ಆ ನಂತರ ಮಾತು ಮತ್ತು ಮೌನದ ಸಂಬಂಧಗಳನ್ನು ಮುನ್ನಡೆಗೆ ಹೇಗೆ ತರುತ್ತದೆ ಎಂಬುದನ್ನು ಚಿತ್ರ ಬಿಡಿಸಿಡುತ್ತಾ ಹೋಗುತ್ತದೆ.
“ಮೂಕನಾಯಕ’ ಚಿತ್ರಕ್ಕೆ ಬರಗೂರು ರಾಮಚಂದ್ರಪ್ಪನವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಗೆ ಗೀತೆಗಳನ್ನೂ ರಚಿಸಿದ್ದಾರೆ. ಈ ಚಿತ್ರವನ್ನು ಬಾಲರಾಜ್ ಎನ್ನುವವರು ನಿರ್ಮಿಸಿದ್ದು, ಚಿತ್ರದಲ್ಲಿ ಕುಮಾರ್ ಗೋವಿಂದ್, “ಸ್ಪರ್ಶ’ ರೇಖಾ, ಶೀತಲ್ ಶೆಟ್ಟಿ, ಸುಂದರ್ ರಾಜ್, ವೆಂಕಟರಾಜು ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಡಾ. ಶಮಿತಾ ಮಲ್ನಾಡ್ ಸಂಗೀತ ಸಂಯೋಜಿಸಿದ್ದು, ನಾಗರಾಜ್ ಅದವಾನಿ ಛಾಯಾಗ್ರಹಣ ಮಾಡಿದ್ದಾರೆ. ಸುರೇಶ್ ಅರಸ್ ಅವರ ಸಂಕಲನ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.