ಹೊಸಬರ ಮೂರು ಮತ್ತೊಂದು!
Team Udayavani, Sep 21, 2021, 3:14 PM IST
“ಮೂರು ಮತ್ತೂಂದು’ ಹೀಗೊಂದು ವಿಭಿನ್ನ ಟೈಟಲ್‌ನ ಚಿತ್ರವೊಂದು ಆರಂಭವಾಗಿದ್ದು, ಈಗಾಗಲೇ ಶೇ 70ರಷ್ಟು ಚಿತ್ರೀಕರಣ ಮುಗಿಸಿದೆ. ಇದೊಂದು ಹಾರರ್ ಚಿತ್ರವಾಗಿದ್ದು, ಚಿತ್ರಕ್ಕೆ ಪ್ರಶಾಂತ್ ಅಂಕಪುರ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ವಿಪ್ರ ಪ್ರೊಡಕ್ಷನ್ಸ್‌ನ ಡಿ ವೀಣಾ ಅವರು ನಿರ್ಮಿಸುತ್ತಿದ್ದಾರೆ.
ಚಿತ್ರದ ಬಾಕಿ ಇರುವ 4 ಹಾಡುಗಳು ಹಾಗೂ ಕ್ಲೈಮ್ಯಾಕ್ಸ್ ಅನ್ನು ಚಿಕ್ಕಮಗಳೂರು, ಸಕಲೇಶಪುರ, ಕುಶಾಲನಗರ, ಹಾಸನದ ಸುತ್ತಮುತ್ತ ನಡೆಸಲಾಗುತ್ತದೆ, ಈ ಚಿತ್ರದಲ್ಲಿ ಸಸ್ಪೆನ್ಸ್, ಲವ್ ಸ್ಟೋರಿ ಜೊತೆಗೆ ವಿಭಿನ್ನ ಹಾರರ್ ಕಥಾಹಂದರವನ್ನು ಹೇಳಲಾಗಿದೆ.
ಇದನ್ನೂ ಓದಿ:ಕಿಟ್ಟಿ ‘ಗೌಳಿ’ಗೆ ಮುಹೂರ್ತ: ಪಾವನಾ ಗೌಡ ನಾಯಕಿ
ಮೂರು ಮತ್ತೂಂದು ಅಂದರೆ ಮೂವರ ನಡುವೆ ಬರುವ ಮತ್ತೂಬ್ಬ ವ್ಯಕ್ತಿ ಯಾರು ಅನ್ನೋದೇ ಚಿತ್ರದ ಸಸ್ಪೆನ್ಸ್. ಈ ಚಿತ್ರದ ನಾಯಕಿ ಮಮತಾ. ಹರಹರ ಮಹಾದೇವ, ಜೈ ಹನುಮಾನ್, ಮಹಾಕಾಳಿ, ಶನಿ, ಗಟ್ಟಿಮೇಳ,ಧಾರಾವಾಹಿಗಳಲ್ಲಿ ಅಭಿನಯಿಸಿರುವ ರಾಜ್ ಮಣೀಶ್ ಈ ಚಿತ್ರದ ನಾಯಕ.
ಉಳಿದ ತಾರಾಗಣದಲ್ಲಿ ಜೂ.ನರಸಿಂಹ ರಾಜು, ಮಂಡ್ಯ ಆನಂದ್, ಜಗದೀಶ್ ಮುಂತಾದವರು ನಟಿಸಿದ್ದಾರೆ. ಈ. ಚಿತ್ರಕ್ಕೆ ಸುರೇಶ್ ಬಾಬು ಅವರ ಛಾಯಾಗ್ರಹಣ, ಪಳನಿ ಸೇನಾಪತಿ ಅವರ ಸಂಗೀತ, ಕುಶಾಲ್ ಬರಗೂರು ಅವರ ಸಾಹಿತ್ಯ ಹಾಗೂ ಸಂಭಾಷಣೆ, ಹ್ಯಾರಿಸ್ ಜಾನಿ ಸಾಹಸ, ಕಲೈ ಮಾಸ್ಟರ್ ಅವರ ಕೊರಿಯಾಗ್ರಫಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.