Kannada Movie: ಬದುಕಿನ ಬವಣೆಗಳ ಚಿತ್ರಣ
Team Udayavani, Nov 24, 2023, 6:02 PM IST
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಮುದುಡಿದ ಎಲೆಗಳು’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.
ಎಂ. ಶಂಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ “ಮುದುಡಿದ ಎಲೆಗಳು’ ಸಿನಿಮಾವನ್ನು “ರಿಯೊ ಪ್ರೊಡಕ್ಷನ್’ ಲಾಂಛನದಲ್ಲಿ ರಂಜನಿ ನಿರ್ಮಿಸುತ್ತಿದ್ದಾರೆ.
ರಂಜಿತ್ ಕುಮಾರ್, ದರ್ಶನ್ ಸೂರ್ಯ, ಪಂಕಜ್ ಮೂವರು “ಮುದುಡಿದ ಎಲೆಗಳು’ ಸಿನಿಮಾದಲ್ಲಿ ನಾಯಕರಾಗಿ ಊರ್ವಶಿ ರಾಯ್, ಸೀಮಾ ವಸಂತ್, ಸುಶ್ಮಿತಾ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಹಿರಿಯ ನಟಿ ಭವ್ಯಾ, ಶೋಭರಾಜ್, ಶಂಕರ್ ಅಶ್ವಥ್, ಹರ್ಷಿಕಾ ಪೂಣಚ್ಚ, ಸಂತೋಷ್ ರೆಡ್ಡಿ, ಅಮಿತ್ ರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಸಿನಿಮಾದ ಮುಹೂರ್ತ ಬಳಿಕ ಮಾತನಾಡಿದ ನಿರ್ದೇಶಕ ಎಂ. ಶಂಕರ್, “ಸುಮಾರು ಮೂರು ವರ್ಷಗಳಿಂದ ಈ ಸಿನಿಮಾ ಯೋಚನೆ ಈಗ ಸಾಕಾರವಾಗುತ್ತಿದೆ. ಮನುಷ್ಯ ದಿನನಿತ್ಯ ಎದುರಿಸುವ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಕಥೆ ಬರೆದಿದ್ದೇನೆ. “ಮುದುಡಿದ ಎಲೆಗಳು’ ಹೇಗೆ ಚದರಿ ಹೋಗುತ್ತದೆ. ಮತ್ತೆ ಹೇಗೆ ಒಂದಾಗುತ್ತದೆ ಎಂಬ ಅಂಶವನ್ನೂ ಕಥೆ ಆಧರಿಸಿದೆ. ಮೂರು ಜನ ಸ್ನೇಹಿತರ ಜರ್ನಿ ಈ ಸಿನಿಮಾದಲ್ಲಿದೆ. ಹೇಗೆ ತಮ್ಮ ಜೀವನದಲ್ಲಿ ಕಷ್ಟಪಟ್ಟು ಮುಂದೆ ಬರುತ್ತಾರೆ ಎಂಬುದೇ ಸಿನಿಮಾದ ಕಥೆ. ಈ ಸಿನಿಮಾದ ಮೂಲಕ ಒಂದಷ್ಟು ಹೊಸ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇವೆ’ ಎಂದು ವಿವರಣೆ ನೀಡಿದರು.
ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಚಿಸಿದೆ.
“ಮುದುಡಿದ ಎಲೆಗಳು’ ಚಿತ್ರಕ್ಕೆ ಶ್ಯಾಮ ಸಿಂಧನೂರು ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನವಿದೆ. ಚಿತ್ರದ ಹಾಡುಗಳಿಗೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಹಾಡುಗಳಿಗೆ ಸೋನು ನಿಗಂ, ವಿಜಯ ಪ್ರಕಾಶ್, ಅರ್ಮನ್ ಮಲ್ಲಿಕ್, ಅನುರಾಧಾ ಭಟ್ ಮೊದಲಾದ ಗಾಯಕರು ಧ್ವನಿಯಾಗುತ್ತಿದ್ದಾರೆ. ಸದ್ಯ ಮುಹೂರ್ತವನ್ನು ನೆರವೇರಿಸಿ ಚಿತ್ರೀಕರಣಕ್ಕೆ ಚಾಲನೆ ನೀಡಿರುವ ಚಿತ್ರತಂಡ, ಮುಂದಿನ ವರ್ಷದ ಮಧ್ಯಭಾಗದಲ್ಲಿ “ಮುದುಡಿದ ಎಲೆಗಳು’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.