ಚಿರು-ಮೇಘನಾ ಮದುವೆಗೆ ಮುಹೂರ್ತ ಫಿಕ್ಸ್
Team Udayavani, Apr 10, 2018, 11:42 AM IST
ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಮೇ 2 ರಂದು ಈ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಕಳೆದ ಅಕ್ಟೋಬರ್ 22 ರಂದು ಇವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಮದುವೆಗೆ ಮುಹೂರ್ತ ಫಿಕ್ಸ್ ಆಗಿರುವ ಹಿನ್ನೆಲೆಯಲ್ಲಿ ಇಬ್ಬರು ಸಹ ಈಗಾಗಲೇ ಮದುವೆಯ ಆಮಂತ್ರಣ ನೀಡಲು ಶುರುಮಾಡಿದ್ದಾರೆ.
ಎರಡು ಕುಟುಂಬದವರು ಕೂಡ ಸಂಬಂಧಿಕರಿಗೆ, ಆಪ್ತರಿಗೆ ಹಾಗು ಚಿತ್ರರಂಗದ ಗಣ್ಯರಿಗೆ ಮದುವೆಯ ಆಮಂತ್ರಣ ಪತ್ರಿಕೆ ವಿತರಿಸುವಲ್ಲಿ ನಿರತರಾಗಿದ್ದಾರೆ. ಮೇಘನಾರಾಜ್ ಕೂಡ ಈಗಾಗಲೇ ಕೇರಳದ ಚಿತ್ರರಂಗದ ಗಣ್ಯರು ಹಾಗೂ ಸ್ನೇಹಿತರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಕನ್ನಡ ಚಿತ್ರರಂಗದ ತಮ್ಮ ಸ್ನೇಹಿತರಿಗೆ, ನಿರ್ದೇಶಕ,ನಿರ್ಮಾಪಕರಿಗೂ ಮದುವೆಯ ಆಹ್ವಾನ ನೀಡಲು ತಯಾರಿ ನಡೆಸಿದ್ದಾರೆ.
ಅರಮನೆ ಮೈದಾನದ ವೈಟ್‌ಪೆಟಲ್ಸ್‌ನಲ್ಲಿ ಮೇ.2 ರ ಬೆಳಗ್ಗೆ 10.30 ಕ್ಕೆ ಇಬ್ಬರ ಮದುವೆ ಕಾರ್ಯ ಅದ್ಧೂರಿಯಾಗಿ ನೆರವೇರಲಿದೆ. ಅಂದು ಸಂಜೆ 7 ಕ್ಕೆ ಅರತಕ್ಷತೆ ಕಾರ್ಯಕ್ರಮವೂ ಜರುಗಲಿದೆ. ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದವರು ಕೂಡ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ, ತಮ್ಮ ಪುತ್ರ, ಪುತ್ರಿಯ ಮದುವೆಗೆ ಕನ್ನಡ ಚಿತ್ರರಂಗ ಸೇರಿದಂತೆ ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗದ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.