Murphy; ಸಂಬಂಧಗಳ ಸುತ್ತ ಮರ್ಫಿ; ಪ್ರೇಕ್ಷಕ ಪ್ರಭು ನಂಬಿದ ತಂಡ

Team Udayavani, Oct 18, 2024, 10:42 AM IST

murhy

ಹೊಸ ಬಗೆಯ ಸಿನಿಮಾ ಮಾಡಬೇಕು, ರೆಗ್ಯುಲರ್‌ ಶೈಲಿಯನ್ನೇ ಬ್ರೇಕ್‌ ಮಾಡಬೇಕು, ಆ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗಬೇಕು ಎಂದು ಕನಸು ಕಾಣುವ ಸಿನಿ ಮನಸ್ಸುಗಳಿಗೇನು ಕೊರತೆಯಿಲ್ಲ. ಆದರೆ, ಕನಸು ನನಸು ಮಾಡುವುದು ಸುಲಭದ ಮಾತಲ್ಲ. ಈ ವಿಚಾರದಲ್ಲಿ “ಮರ್ಫಿ’ ತಂಡ ಕನಸನ್ನು ಸಾಕಾರಗೊಳಿಸಿದೆ.

ಹೌದು, “ಮರ್ಫಿ’ ಹೀಗೊಂದು ಸಿನಿಮಾ ಕನ್ನಡದಲ್ಲಿ ತಯಾರಾಗಿದ್ದು, ಚಿತ್ರ ಇಂದು ತೆರೆಕಾಣುತ್ತಿದೆ. ಈ ಹಿಂದೆ “ಉರ್ವಿ’ ಸಿನಿಮಾ ನಿರ್ದೇಶನ ಮಾಡಿರುವ ಪ್ರದೀಪ್‌ ವರ್ಮಾ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಪ್ರಭು ಮುಂಡ್ಕೂರು ಈ ಸಿನಿಮಾದ ನಾಯಕ.ಈ ಸಿನಿಮಾ ಮೂಲಕ ಹೊಸ ಬ್ರೇಕ್‌ ಸಿಗುವ ನಿರೀಕ್ಷೆ ಪ್ರಭು ಅವರಿಗಿದೆ. ಈ ಚಿತ್ರವನ್ನು ಸೋಮಣ್ಣ ಟಾಕೀಸ್‌ ಹಾಗೂ ವರ್ಣಸಿಂಧು ಸ್ಟುಡಿಯೋಸ್‌ ಸೇರಿ ನಿರ್ಮಿಸಿದೆ. ನಿರ್ದೇಶನದ ಜೊತೆಗೆ ಪ್ರದೀಪ್‌ ವರ್ಮಾ ನಿರ್ಮಾಣದಲ್ಲೂ ಸಾಥ್‌ ನೀಡಿದ್ದಾರೆ.

ಚಿತ್ರದಲ್ಲಿ ಪ್ರಭು ಮುಂಡ್ಕೂರ್‌, ರೋಶಾನಿ ಪ್ರಕಾಶ್‌, ಇಳಾ, ಮಹಾಂತೇಶ್‌, ದತ್ತಣ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ.

“ಮರ್ಫಿ’ ಸಂಬಂಧಗಳ ಮೌಲ್ಯ ಸಾರುವ ಸಿನಿಮಾ ಎನ್ನುವುದು ನಾಯಕ ಪ್ರಭು ಮಾತು. ಈ ಕುರಿತು ಮಾತನಾಡುವ ಅವರು, “ಇವತ್ತು ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಹಾರರ್‌, ಆ್ಯಕ್ಷನ್‌, ಅಂಡರ್‌ ವರ್ಲ್ಡ್ನಂತಹ ಡಾರ್ಕ್‌ ಶೇಡ್‌ ಸಿನಿಮಾಗಳು ಸಾಕಷ್ಟು ಬರುತ್ತಿವೆ. ಆದರೆ, ಕಸ್ತೂರಿ ನಿವಾಸ, ಬಂಗಾರದ ಮನುಷ್ಯದಂತಹ ಮೌಲ್ಯ ಸಾರುವ ಸಿನಿಮಾಗಳು ಬರುತ್ತಿಲ್ಲ. ಇದೇ ಕಾರಣದಿಂದ ನಾನು ಹಾಗೂ ಪ್ರದೀಪ್‌ ವರ್ಮಾ ಒಂದು ಮೌಲ್ಯಯುತ “ಯು’ ಸರ್ಟಿಫಿಕೇಟ್‌ನ, ಇಡೀ ಕುಟುಂಬ ನೋಡುವ ಸಿನಿಮಾ ಮಾಡಬೇಕೆಂಬ ಕನಸು ಕಂಡೆವು. ಆ ಕನಸು ಈಗ ನನಸಾಗಿದೆ. ಸಂಬಂಧಗಳ ಮೌಲ್ಯವೇನು, ಅದನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬ ಅಂಶವಿದೆ. ಸಿನಿಮಾದ ಜಾನರ್‌ ಬಗ್ಗೆ ಹೇಳುವುದಾದರೆ ಇದೊಂದು ರೊಮ್ಯಾಂಟಿಕ್‌ ಡ್ರಾಮಾ. ಹಲವು ಶೇಡ್‌ನೊಂದಿಗೆ ಕಥೆ ಸಾಗಿದೆ’ ಎನ್ನುತ್ತಾರೆ.

ಸಿನಿಮಾದ ಕಥೆ ಗೋವಾ ಹಿನ್ನೆಲೆಯಲ್ಲಿ ಸಾಗುತ್ತದೆ. ಅದೇ ಕಾರಣದಿಂದ ಚಿತ್ರದ ಬಹುಪಾಲು ಚಿತ್ರೀಕರಣ ಗೋವಾದಲ್ಲಿ ನಡೆದಿದೆ

ಟಾಪ್ ನ್ಯೂಸ್

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.