ಶ್ರೀಕೃಷ್ಣ ಪರಮಾತ್ಮನಿಗೆ ಮುಹೂರ್ತ
ಚಿತ್ರಕ್ಕೆ ಚಾಲನೆ ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್
Team Udayavani, Nov 1, 2020, 1:57 PM IST
ವರನಟ ಡಾ. ರಾಜಕುಮಾರ್ ಅವರ ಕುಟುಂಬದ ಮತ್ತೂಂದು ಪ್ರತಿಭೆ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಪಾರ್ವತಮ್ಮ ಅವರ ಕಿರಿಯ ಸಹೋದರ ಶ್ರೀನಿವಾಸ ರಾಜುಪುತ್ರ ಧ್ರುವನ್ “ಭಗವಾನ್ ಶ್ರೀಕೃಷ್ಣ ಪರಮಾತ್ಮ’ ಚಿತ್ರದ ಮೂಲಕ ನಾಯಕ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಯಾಗುತ್ತಿದ್ದು, ಇತ್ತೀಚೆಗೆ ಧ್ರುವನ್ ಅಭಿನಯದ ಚೊಚ್ಚಲ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು.
ರಾಜರಾಜೇಶ್ವರಿನಗರದ ಷಣ್ಮುಖ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ “ಭಗವಾನ್ ಶ್ರೀಕೃಷ್ಣ ಪರಮಾತ್ಮ’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಭಗವಾನ್
ಶ್ರೀಕೃಷ್ಣ ಪರಮಾತ್ಮ’ ಚಿತ್ರವನ್ನು ಪ್ರಸಾದ್ ಬಿ.ಎನ್. ನಿರ್ದೇಶಿಸುತ್ತಿದ್ದಾರೆ. ಭರತ್ ವಿಷ್ಣುಕಾಂತ್ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಚಿತ್ರಕ್ಕೆ ಅದ್ವಿಕ್ ಆರ್ಯ ಕೆ. ಆರ್ ಛಾಯಾಗ್ರಹಣವಿದೆ. ಚಿತ್ರದಲ್ಲಿ ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸುತ್ತಿದ್ದಾರೆ.
ಉಳಿದಂತೆ ಹಿರಿಯ ನಟ ದತ್ತಣ್ಣ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ಮುಹೂರ್ತವನ್ನು ಆಚರಿಸಿರುವ ಚಿತ್ರತಂಡ ಇದೇ ನವೆಂಬರ್ನಿಂದ ಚಿಕ್ಕಮಗಳೂರು, ಬೆಂಗಳೂರು, ಚೆನ್ನೈ ಮುಂತಾದ ಕಡೆಗಳಲ್ಲಿ ಎರಡು ಹಂತದ ಚಿತ್ರೀಕರಣ ನಡೆಸಲು ಪ್ಲಾನ್ ಹಾಕಿಕೊಂಡಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.