ಕೋಮಲ್ 2020 ಗೆ ಮುಹೂರ್ತ
Team Udayavani, Nov 27, 2020, 3:05 PM IST
ನಟ ಕೋಮಲ್ ಹೊಸ ಸಿನಿಮಾ “ಟ್ವೆಂಟಿ ಟ್ವೆಂಟಿ’ ಬಗ್ಗೆ ನಿಮಗೆ ಗೊತ್ತೇ ಇದೆ. ಇತ್ತೀಚೆಗೆ ಈ ಚಿತ್ರಕ್ಕೆ ಮುಹೂರ್ತ ನಡೆದಿದೆ. ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಪಂಚಮುಖೀ ಗಣಪತಿ ದೇವಾಲಯದಲ್ಲಿ ಮುಹೂರ್ತವಾಗಿದೆ.
ಈ ತಿಂಗಳಲ್ಲೇ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಇದು ಔಟ್ ಅಂಡ್ ಔಟ್‌ಕಾಮಿಡಿ ಸಿನಿಮಾ.ಕೆ.ಎಲ್.ರಾಜಶೇಖರ್ ಈ ಚಿತ್ರದ ನಿರ್ದೇಶಕರು. ಈ ಹಿಂದೆ ಸಿನಿಮಾ,ಕಾಮಿಡಿ ಶೋಗಳಿಗೆ ಡೈಲಾಗ್ ಬರೆದು, ಸೈ ಎನಿಸಿಕೊಂಡಿರುವ ರಾಜಶೇಖರ್ ಈಗ “ಟ್ವೆಂಟಿ ಟ್ವೆಂಟಿ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಪ್ರೇಕ್ಷಕರನ್ನು ನಗಿಸಲು ಮುಂದಾಗಿದ್ದಾರೆ. ಕೋಮಲ್ ಕೂಡಾ ಕಥೆ ಕೇಳಿ ಫಿದಾ ಆಗಿದ್ದಾರೆ. ಈ ಚಿತ್ರವನ್ನು ಕ್ರಿಸ್ಟಲ್ ಪಾರ್ಕ್ ಸಿನಿಮಾಸ್‌ನಡಿ ಟಿ.ಆರ್.ಚಂದ್ರಶೇಖರ್ ನಿರ್ಮಿಸುತ್ತಿದ್ದಾರೆ.
ಇದನ್ನೂ ಓದಿ : ಅಟ್ಟಯ್ಯ ನಿರ್ದೇಶಕನ ಹಾಫ್ ಸ್ಟೋರಿ
ಡಿಸೆಂಬರ್ 4ಕ್ಕೆ ರನ್-2 ರಿಲೀಸ್ :
“ರನ್-2′ ಹೀಗೊಂದು ಸಿನಿಮಾ ತಯಾರಾಗಿರುವ ಬಗ್ಗೆ ನೀವು ಕೇಳಿರಬಹುದು. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಡಿಸೆಂಬರ್4 ರಂದು ತೆರೆಕಾಣಲಿದೆ. ಚಿತ್ರಕ್ಕೆ ಬಿ.ಎಸ್.ಸಂಜಯ್‌ಕತೆ, ಚಿತ್ರಕತೆ, ಸಂಕಲನ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಕಾಲೇಜು ದಿನಗಳನ್ನು ನೆನಪಿಸಿಕೊಂಡು ಹಾಗಯೇ ಪ್ರಯಾಣ ಮಾಡುವ ಸಂದರ್ಭದಲ್ಲಿ ಹುಡುಗಿಯೊಬ್ಬಳು ಸಹಾಯ ಕೋರುತ್ತಾಳೆ. ಅವಳ ಇಚ್ಚೆಯಂತೆ ಕರೆದುಕೊಂಡು ಹೋಗುವಾಗ ಸಮಸ್ಯೆಗಳು ಬರುತ್ತವೆ. ಅವೆಲ್ಲಾವನ್ನು ನಾಯಕ ಎದುರಿಸಿ ಹೇಗೆ ಹೊರಗೆ ಬರುತ್ತಾನೆ ಎಂಬುದು ಚಿತ್ರದ ಒನ್‌ಲೈನ್. ಚಿತ್ರದಲ್ಲಿ ಮಂಗಳೂರಿನ ಪವನ್ ಶೆಟ್ಟಿ ನಾಯಕರಾಗಿ ನಟಿಸಿದ್ದಾರೆ.2015ರ ಮಿಸ್ಟರ್ ವರ್ಲ್ಡ್ ಮತ್ತು ರಾಜ್ಯ ಸರ್ಕಾರದಿಂದ ಏಕಲವ್ಯ ಪ್ರಶಸ್ತಿ ಪಡೆದಿರುವ ಪವನ್ ಈಗ ಹೊಸ ಚಿತ್ರದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. “ಪಂಟ’ ಚಿತ್ರದಲ್ಲಿ ಕುಲುಕು ಕುಲುಕು ಹಾಡಿಗೆ ಹೆಜ್ಜೆ ಹಾಕಿದ್ದ ಮುಂಬೈ ಬೆಡಗಿ ತಾರಾ ಶುಕ್ಲಾ ನಾಯಕಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.