Kannada Movie: ಮುರುಗ ಸನ್ ಆಫ್ ಕಾನೂನು!
Team Udayavani, Aug 7, 2024, 5:10 PM IST
“ಕೊಡೆ ಮುರುಗ’ ಸಿನಿಮಾ ಮೂಲಕ ಹೀರೋ ಆದ ಮುನಿಕೃಷ್ಣ ಈಗ ಮತ್ತೂಂದು ಹೊಸ ಸಿನಿಮಾ ಮೂಲಕ ಅದೃಷ್ಟ ಪರೀಕ್ಷೆಗೆ ರೆಡಿಯಾಗಿದ್ದಾರೆ.
“ಮುರುಗ ಸನ್ ಆಫ್ ಕಾನೂನು’ ಎಂಬ ಚಿತ್ರದಲ್ಲಿ ಮುನಿಕೃಷ್ಣ ಅವರು ನಾಯಕನಾಗಿ ನಟಿಸುವ ಜೊತೆಗೆ ತಮ್ಮ ಎ.ಎಸ್.ಎ. ಪ್ರೊಡಕ್ಷನ್ ಬ್ಯಾನರ್ನಲ್ಲಿ ನಿರ್ಮಾಣ ಕೂಡ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಅನ್ನು ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರು ಬಿಡುಗಡೆ ಮಾಡಿ ತಂಡಕ್ಕೆ ಶುಭಕೋರಿದರು. ಈ ಚಿತ್ರವನ್ನು ವಿಜಯ್ ಪ್ರವೀಣ್ ನಿರ್ದೇಶನ ಮಾಡಿದ್ದಾರೆ.
ಜಾಗ ಕೇಳಿಕೊಂಡು ಊರಿಗೆ ಬರುವ ಖಳನಾಯಕ ನಂತರ ಇಡೀ ಊರನ್ನೇ ತನ್ನ ಕಬ್ಜ ಮಾಡಿಕೊಳ್ಳುತ್ತಾನೆ. ಮುರುಗನ ತಂದೆಯನ್ನೂ ಕೊಲೆ ಮಾಡಿಸುತ್ತಾನೆ. ನಂತರ ಎಲ್. ಎಲ್.ಬಿ.ಓದಿಕೊಂಡಿದ್ದ ಮುರುಗ ಹೇಗೆ ಕಾನೂನಾತ್ಮಕವಾಗಿ ತನ್ನ ಜಾಗದ ಜೊತೆಗೆ ಊರನ್ನೂ ಉಳಿಸಿಕೊಳ್ಳುತ್ತಾನೆ ಎಂಬುದೇ ಮುರುಗ ಸನ್ ಆಫ್ ಕಾನೂನು ಚಿತ್ರದ ಕಥಾಹಂದರ.
ಆನೇಕಲ್, ಮಲ್ಪೆ, ಬೆಂಗಳೂರು ಸುತ್ತಮುತ್ತ 62 ದಿನ ಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
ವೇದಿಕೆಯಲ್ಲಿ ನಿರ್ದೇಶಕ ವಿಜಯ್ ಮಾತನಾಡಿ, “ನನ್ನ ನಿರ್ದೇಶನದ 5ನೇ ಚಿತ್ರವಿದು. ಪುನೀತ್ ರಾಜಕುಮಾರ ಅವರು ನಮ್ಮ ಚಿತ್ರದ ಟೈಟಲ್ ಲಾಂಚ್ ಮಾಡಿಕೊಟ್ಟಿದ್ದರು. ಇದೊಂದು ಔಟ್ ಆ್ಯಂಡ್ ಔಟ್ ಕಾಮಿಡಿ ಸಿನಿಮಾ’ ಎಂದು ಹೇಳಿದರು.
“ಚಿತ್ರದ ಶೀರ್ಷಿಕೆ ಗೀತೆಯನ್ನು ಪುನೀತ್ರಾಜ್ಕುಮಾರ್ ಅವರು ಹಾಡಬೇಕಿತ್ತು. 10 ದಿನ ಶೂಟ್ ಆದ ಮೇಲೆ ಸಿನಿಮಾ ನಿಂತುಹೋಗಿತ್ತು. ಪುನೀತ್ ಅವರು ಹರಸಿದ ಸಿನಿಮಾ ನಿಲ್ಲಬಾರದೆಂದು ಸ್ವಂತ ಮನೆ ಮಾರಿ ಕಷ್ಟಪಟ್ಟು ಸಿನಿಮಾ ಮುಗಿಸಿದ್ದೇನೆ ಎಂದರು ಮುನಿಕೃಷ್ಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್ಪೋರ್ಟ್ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.