“ಮೈ ನೇಮ್ ಇಸ್ ರಾಜ್’ ಸಂಗೀತ ಸಂಜೆ
Team Udayavani, Apr 24, 2022, 10:03 AM IST
ಏಪ್ರಿಲ್ 24 ವರನಟ ಡಾ.ರಾಜ್ ಕುಮಾರ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಏ. 28 ಗುರುವಾರ ನಗರದ ಚೌಡಯ್ಯ ಸಭಾಂಗಣದಲ್ಲಿ ಸಂಜೆ 6.30ಕ್ಕೆ ರಾಜ್ ನೆನಪಿನಲ್ಲಿ ”ಮೈ ನೇಮ್ ಇಸ್ ರಾಜ್ ’ ಎಂಬ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ.
ಕೆಲವು ವರ್ಷಗಳ ಹಿಂದೆ ಸರಿಗಮಪ ಮೂಲಕ ಮರಿ ಅಣ್ಣಾವ್ರು ಅಂತಲೇ ಹೆಸರಾಗಿದ್ದ ಮನೋಜವಂ ಅತ್ರೇಯ ಸಾರಥ್ಯದಲ್ಲಿ ಈ ಸಂಗೀತ ಕಾರ್ಯಕ್ರವ ನಡೆಯಲಿದೆ. ರಾಜ್ ಅವರ ಆದರ್ಶಮಯ ವ್ಯಕ್ತಿತ್ವವನ್ನು ಸಂಗೀತದ ಮೂಲಕ ಪ್ರೇಕ್ಷಕರಿಗೆ ಉಣಬಡಿಸುವ ಕಾರ್ಯಕ್ರಮ ಇದಾಗಲಿದೆ ಎಂಬುದು ತಂಡದ ಮಾತು.
ಇದನ್ನೂ ಓದಿ:ಇಂದು ವರನಟ ಡಾ.ರಾಜ್‌ಕುಮಾರ್ 94ನೇ ಜನ್ಮದಿನ
ನಾಡಿನ ಜನಪ್ರಿಯ ಗಾಯಕರು ಹಾಗೂ ವಾದ್ಯಗಾರರ ಸಮ್ಮಿಲನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಹಿರಿಯ ನಿರ್ದೇಶಕ ಭಗವಾನ್ ಸೇರಿದಂತೆ ಚಿತ್ರರಂಗದ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.
ಗಣ್ಯರ ಸ್ಮರಣೆ
ನಟಸಾರ್ವಭೌಮ ಡಾ. ರಾಜ್‌ಕುಮಾರ್ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಸೇರಿ ವಿವಿಧ ಗಣ್ಯರು ಸ್ಮರಣೆ ಮಾಡಿದ್ದಾರೆ.
‘ನಟಸಾರ್ವಭೌಮ, ಕನ್ನಡಿಗರ ಆರಾಧ್ಯ ದೈವ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ ಡಾ.ರಾಜ್ ಕುಮಾರ್ ರವರ ಜನ್ಮದಿನದಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕನ್ನಡ ಹಾಗೂ ಕನ್ನಡಿಗರ ಅಸ್ಮಿತೆಯಾಗಿ, ತೆರೆಯ ಮೇಲೆ ತಮ್ಮ ಅದ್ಭುತ ನಟನೆಯಿಂದ, ತೆರೆಯ ಹಿಂದೆ ತಮ್ಮ ಹೃದಯ ವೈಶಾಲ್ಯತೆಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ ಡಾ.ರಾಜ್ ಅವರು ಈ ನಾಡು, ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಿಸಿದ್ದಾರೆ.
‘ಕನ್ನಡನಾಡಿನ ಹೆಮ್ಮೆಯ ವರನಟ, ನಟಸಾರ್ವಭೌಮ ಶ್ರೀ ಡಾ.ರಾಜ್ಕುಮಾರ್ ಅವರ ಪುಣ್ಯಸ್ಮರಣೆಯಂದು ಕೋಟಿ ನಮನಗಳು. 200 ಕ್ಕೂ ಅಧಿಕ ಚಲನಚಿತ್ರಗಳನ್ನು ನೀಡಿ ಕಲಾ ರಸಿಕರ ಮನ ರಂಜಿಸಿದ ಅದ್ಭುತ ಕಲಾವಿದ ಅಣ್ಣಾವ್ರು. ಮನೋಜ್ಞ ಅಭಿನಯ, ಸರಳ ವ್ಯಕ್ತಿತ್ವದ ಜನ ಒಡನಾಟದೊಂದಿಗೆ ಅವರು ಎಲ್ಲರ ಮನದಾಳದಲ್ಲಿ ನೆಲೆಸಿದ್ದಾರೆ’ ಎಂದು ಸಚಿವ ಬಿ.ಸಿ.ನಾಗೇಶ್ ಸ್ಮರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.