ಟ್ರೇಲರ್ ನಲ್ಲಿ ಭೂತದ ಕಾಟ: ಆ.4ಕ್ಕೆ ನಮೋ ಭೂತಾತ್ಮ-2 ಚಿತ್ರ ತೆರೆಗೆ
Team Udayavani, Jul 24, 2023, 1:04 PM IST
ಕೋಮಲ್ ನಾಯಕರಾಗಿರುವ “ನಮೋ ಭೂತಾತ್ಮ-2′ ಚಿತ್ರ ಆಗಸ್ಟ್ 4ರಂದು ತೆರೆಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್‌ನಲ್ಲಿ ಹಾರರ್ ಜೊತೆಗೆ ಕಾಮಿಡಿ ಇರುವುದರಿಂದ ಇದೊಂದು ಪಕ್ಕಾ ಎಂಟರ್‌ಟೈನರ್ ಚಿತ್ರವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ.
ಚಿತ್ರದ ಬಗ್ಗೆ ಮಾತನಾಡುವ ಕೋಮಲ್, “ನಾನು ನಿರ್ಮಿಸಿ, ನಟಿಸಿದ್ದ ಮುರಳಿ ಮಾಸ್ಟರ್ ನಿರ್ದೇಶಿಸಿದ್ದ “ನಮೋ ಭೂತಾತ್ಮ’ ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ ಈ “ನಮೋ ಭೂತಾತ್ಮ-2′ ಚಿತ್ರ ನಮ್ಮಿಬ್ಬರ ಕಾಂಬಿನೇಶನ್‌ನಲ್ಲಿ ಬರುತ್ತಿದೆ. ಮೊದಲ ಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಆದರೆ ಈ ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ’ ಎಂದು ಚಿತ್ರದ ಬಗ್ಗೆ ಹೇಳಿದರು.
ನಿರ್ದೇಶಕ ಮುರಳಿ ಈ ಬಾರಿ ನಿರ್ಮಾಣದಲ್ಲೂ ತೊಡಗಿದ್ದಾರೆ. ಚಿತ್ರದ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿರುವ ಮುರಳಿ ಸಿನಿಮಾದ ಬಗ್ಗೆ ಖುಷಿಯಿಂದ ಮಾತನಾಡಿದ್ದಾರೆ. “2014 ರಲ್ಲಿ ನನಗೆ ಕೋಮಲ್ ಅವರು “ನಮೋ ಭೂತಾತ್ಮ’ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ್ದರು. ಆನಂತರ ಈಗ “ನಮೋ ಭೂತಾತ್ಮ-2′ ಚಿತ್ರದಲ್ಲಿ ಅವರ ಜೊತೆ ಮಾಡಿದ್ದೇನೆ. ನನ್ನ ಅಕ್ಕನ ಮಗ ಸಂತೋಷ್ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊರೊನಾ ಸಮಯದಲ್ಲೇ ಈ ಚಿತ್ರದ ಕಥೆ ಸಿದ್ಧ ಮಾಡಿಕೊಂಡಿದ್ದೆ. ಆ ನಂತರ ಕೋಮಲ್ ಅವರಿಗೆ ನಾನು ಹಾಗೂ ಸಂತೋಷ್ ಹೋಗಿ ಈ ಚಿತ್ರದ ಕಥೆ ಹೇಳಿದ್ದೆವು. ಕೋಮಲ್ ಅವರು ನಟಿಸಲು ಒಪ್ಪಿದರು.
ಚಿತ್ರಕ್ಕೆ “ನಮೋ ಭೂತಾತ್ಮ-2′ ಎಂದು ಹೆಸರಿಟ್ಟೆವು’ ಎನ್ನುವುದು ಮುರಳಿ ಮಾತು. ಚಿತ್ರದಲ್ಲಿ ಲೇಖಾ ಚಂದ್ರ, ವರುಣ್ ರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.