ಅದು-ಇದು ಮತ್ತು ಯೋಗಿ!
Team Udayavani, Dec 16, 2022, 2:53 PM IST
ನಟ ಯೋಗಿ ನಟಿಸಿರುವ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. “ನಾನು, ಅದು ಮತ್ತು ಸರೋಜ’. ಈ ಚಿತ್ರ ಡಿಸೆಂಬರ್ 30ರಂದು ತೆರೆಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಚಿತ್ರವನ್ನು ವಿನಯ್ ಪ್ರೀತಮ್ ನಿರ್ದೇಶಿಸಿದ್ದಾರೆ.
“ನಾನು ಈ ಹಿಂದೆ ಮಡಮಕ್ಕಿ ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. “ನಾನು, ಅದು ಮತ್ತು ಸರೋಜ’ ಚಿತ್ರದ ಕಥೆ ಮೂರು ಪ್ರಮುಖ ಪಾತ್ರಗಳ ಸುತ್ತ ಸಾಗುತ್ತದೆ. ಲೂಸ್ ಮಾದ ಯೋಗಿ, ಹಿರಿಯ ನಟ ದತ್ತಣ್ಣ ಹಾಗೂ ಅಪೂರ್ವ ಭಾರದ್ವಾಜ್ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. “ಅದು’ ಎಂಬುದು ಕೂಡಾ ಚಿತ್ರದಲ್ಲಿ ಮುಖ್ಯ ಪಾತ್ರ. ಅದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುವುದು ವಿನಯ್ ಮಾತು.
ಪೂಜಾ ವಸಂತ್ ಕುಮಾರ್ ಈ ಚಿತ್ರದ ನಿರ್ಮಾಪಕರು. ಚಿತ್ರದ ಬಗ್ಗೆ ಮಾತನಾಡುವ ನಟ ಯೋಗಿ, “ನನಗೆ ನಿರ್ದೇಶಕ ವಿನಯ್ ಕಥೆ ಹೇಳಿದಾಗ ತುಂಬಾ ಇಷ್ಟವಾಯಿತು. ತಮಿಳಿನಲ್ಲಿ ವಿಜಯ್ ಸೇತುಪತಿ ಅವರ ಸಿನಿಮಾವೊಂದನ್ನು ನೋಡಿದ್ದೆ. ಆಗಿನಿಂದ ನನಗೂ ಆ ರೀತಿಯ ಪಾತ್ರ ಮಾಡಬೇಕೆಂಬ ಆಸೆಯಿತ್ತು. ನನಗೆ ಒಂದೇ ತರಹದ ಸಿನಿಮಾ ಮಾಡುವುದಕ್ಕಿಂತ ವಿಭಿನ್ನ ಕಥೆಯ ಸಿನಿಮಾಗಳಲ್ಲಿ ನಟಿಸಲು ಇಷ್ಟಪಡುತ್ತೇನೆ. ಈ ವರ್ಷದ ಕೊನೆಗೆ ನಮ್ಮ ಸಿನಿಮಾ ಬಿಡುಗಡೆಯಾಗುತ್ತಿದೆ’ ಎಂದರು.
“ನನ್ನದು ಈ ಚಿತ್ರದಲ್ಲಿ ಲೈಂಗಿಕ ಕಾರ್ಯಕರ್ತೆಯ ಪಾತ್ರ. ಸಾಮಾನ್ಯವಾಗಿ ಬೇರೆ ನಟಿಯರು ಈ ಪಾತ್ರ ಮಾಡಲು ಮುಜುಗರ ಪಡುತ್ತಾರೆ. ನನಗೂ ಮೊದಲು ಸ್ವಲ್ಪ ಮುಜಗರವಾಯಿತು. ಆದರೆ ಪಾತ್ರವನ್ನು ಪಾತ್ರ ಎಂದು ತಿಳಿದು, ನಟಿಸಿದ್ದೆ. ಚಿತ್ರ ಚೆನ್ನಾಗಿ ಬಂದಿದೆ’ ಎನ್ನುವುದು ನಟಿ ಅಪೂರ್ವ ಭಾರದ್ವಾಜ್ ಮಾತು.
ರವಿಪ್ರಕಾಶ್ ರೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.