ಇಂದಿನಿಂದ ನಾರಾಯಣನ ಆನ್‌ಲೈನ್ ಬುಕ್ಕಿಂಗ್
ಫಸ್ಟ್ ಡೇ ಫಸ್ಟ್ ಶೋ ನೋಡಲು ಕಾತರ
Team Udayavani, Dec 23, 2019, 7:03 AM IST
ರಕ್ಷಿತ್ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಅದಕ್ಕೆ ಪೂರಕವಾಗಿ ಸಿನಿಮಾದ ಕ್ರೇಜ್ ಕೂಡಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿತ್ರದ ಟ್ರೇಲರ್ ದೊಡ್ಡ ಮಟ್ಟದಲ್ಲಿ ಹಿಟ್ ಆದ ಬೆನ್ನಲ್ಲೇ, ಬಿಡುಗಡೆಯಾದ “ಹ್ಯಾಂಡ್ಸಾಪ್’ ಹಾಡು ಸಖತ್ ವೈರಲ್ ಆಗಿದೆ. ಆ ಹಾಡಿನಲ್ಲಿ ರಕ್ಷಿತ್ ಶೆಟ್ಟಿ ಹಾಕಿರುವ ಸ್ಟೆಪ್ ಅನ್ನು ವಿಡಿಯೋ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಈ ನಡುವೆಯೇ ಚಿತ್ರದ ಆನ್‌ಲೈನ್ ಬುಕ್ಕಿಂಗ್ ಓಪನ್ ಆಗಿದೆ. ಇಂದಿನಿಂದ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಆನ್‌ಲೈನ್ ಬುಕ್ಕಿಂಗ್ ಓಪನ್ ಆಗುತ್ತಿದೆ. ಈ ಮೂಲಕ ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ಮಾಡಬೇಕೆಂದು ಕಾಯುತ್ತಿದ್ದವರು ಖುಷಿಪಡುವಂತಾಗಿದೆ. ಸಾಮಾನ್ಯವಾಗಿ ಮೂರು ದಿನಗಳ ಮೊದಲು ಆನ್‌ಲೈನ್ ಬುಕ್ಕಿಂಗ್ ಮಾಡಲಾಗುತ್ತದೆ. ಆದರೆ, “ಅವನೇ ಶ್ರೀಮನ್ನಾರಾಯಣ’ ಚಿತ್ರದ ಹವಾ ಜೋರಾಗಿರುವುದರಿಂದ ಒಂದು ವಾರ ಮೊದಲೇ ಬುಕ್ಕಿಂಗ್ ಆರಂಭವಾಗುತ್ತಿದೆ.
ಈ ನಡುವೆಯೇ ಬೆಂಗಳೂರಿನ ಊರ್ವಶಿ ಹಾಗೂ ಕಾವೇರಿ ಚಿತ್ರಮಂದಿರಗಳಲ್ಲಿ ಈಗಾಗಲೇ ಆನ್‌ಲೈನ್ ಬುಕ್ಕಿಂಗ್ ಆರಂಭವಾಗಿದ್ದು, ಮೊದಲ ದಿನದ ಎಲ್ಲಾ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ. ಈ ಚಿತ್ರ ಐದು ಭಾಷೆಗಳಲ್ಲಿ ತಯಾರಾಗಿದೆ. ಆರಂಭದಲ್ಲಿ ಐದು ಭಾಷೆಗಳಲ್ಲೂ ಒಂದೇ ದಿನ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿತ್ತು. ಆದರೆ, ಈಗ ಬೇರೆ ಬೇರೆ ಭಾಷೆಗಳ ಚಿತ್ರದ ಬಿಡುಗಡೆಯಲ್ಲಿ ಒಂದಷ್ಟು ಬದಲಾವಣೆಯಾಗಿದೆ. ಕನ್ನಡದಲ್ಲಿ “ಅವನೇ ಶ್ರೀಮನ್ನಾರಾಯಣ’ ಚಿತ್ರ ಡಿಸೆಂಬರ್ 27 ರಂದು ತೆರೆಕಂಡರೆ ತೆಲುಗಿನಲ್ಲಿ ಜನವರಿ 1, ತಮಿಳು ಹಾಗೂ ಮಲಯಾಳಂ ಜನವರಿ 3 ಹಾಗೂ ಹಿಂದಿಯಲ್ಲಿ ಜನವರಿ 17ರಂದು ತೆರೆಕಾಣುತ್ತಿದೆ.
ಕನ್ನಡಿಗರು ಸದಭಿರುಚಿಯ ಚಿತ್ರಗಳನ್ನು ಪ್ರೋತ್ಸಾಹಿಸುವುದರಿಂದ “ಅವನೇ ಶ್ರೀಮನ್ನಾರಾಯಣ’ ಚಿತ್ರವನ್ನು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡಿ, ಇಲ್ಲಿಂದ ಚಿತ್ರದ ಯಶಸ್ವಿ ಪಯಣ ಮುಂದುವರೆಯಬೇಕೆಂಬುದು ಚಿತ್ರತಂಡದ ಆಶಯ. ಆ ಕಾರಣಕ್ಕಾಗಿ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ಬೇರೆ ಬೇರೆ ಭಾಷೆಯ ಪ್ರಮುಖ ವಿತರಕರು ಚಿತ್ರದ ವಿತರಣೆಗೆ ಮುಂದೆ ಬಂದಿರುವ ಮೂಲಕ ಆಯಾ ಭಾಷೆಗಳಲ್ಲೂ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಸಚಿನ್ ನಿರ್ದೇಶನದ ಈ ಚಿತ್ರವನ್ನು ಪುಷ್ಕರ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.