ನಾರಾಯಣನ ಓಟ ಜೋರು
ಎರಡನೇ ವಾರಕ್ಕೆ ಚಿತ್ರಮಂದಿರ ಹೆಚ್ಚಳ
Team Udayavani, Dec 31, 2019, 7:05 AM IST
ರಕ್ಷಿತ್ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಓಟ ಜೋರಾಗಿದೆ. ದಿನದಿಂದ ದಿನಕ್ಕೆ ಚಿತ್ರವನ್ನು ನೋಡುವವರ ಸಂಖ್ಯೆ ಹೆಚ್ಚಾಗುವ ಜೊತೆಗೆ ಚಿತ್ರದ ಕಲೆಕ್ಷನ್ ಕೂಡಾ ಹೆಚ್ಚಾಗುತ್ತಿದೆ. ಇದು ಚಿತ್ರತಂಡದ ಮೊಗದಲ್ಲಿ ನಗುಮೂಡಿಸಿದೆ. ಇದೇ ಕಾರಣದಿಂದ ಚಿತ್ರಮಂದಿರಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಪ್ರಸ್ತುತ “ಅವನೇ ಶ್ರೀಮನ್ನಾರಾಯಣ’ ಚಿತ್ರ 400ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ಎರಡನೇ ವಾರದಿಂದ 80 ಕೇಂದ್ರಗಳನ್ನು ಸೇರಿಸಲು ಚಿತ್ರತಂಡ ಮುಂದಾಗಿದೆ.
ಸಾಮಾನ್ಯವಾಗಿ ಚಿತ್ರಗಳು ವಾರಾಂತ್ಯದಲ್ಲಿ ಹೆಚ್ಚು ಕಲೆಕ್ಷನ್ ಹಾಗೂ ಹೌಸ್‌ಫುಲ್ ಆಗುತ್ತವೆ. ಆದರೆ, “ಅವನೇ ಶ್ರೀಮನ್ನಾರಾಯಣ’ ಚಿತ್ರ ವಾರಾಂತ್ಯದ ಹೊರತಾಗಿ ಇತರೆ ದಿನಗಳಲ್ಲೂ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರೋದು ಚಿತ್ರತಂಡ ಖುಷಿಗೆ ಕಾರಣವಾಗಿದೆ. ಇನ್ನು, ಈಗಾಗಲೇ ಚಿತ್ರ ವಿದೇಶಗಳಲ್ಲಿ ಬಿಡುಗಡೆಯಾಗಿ ಅಲ್ಲಿನ ಪ್ರೇಕ್ಷಕರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎರಡನೇ ವಾರಕ್ಕೂ ಮುಂಗಡ ಬುಕ್ಕಿಂಗ್ ಬಹುತೇಕ ಫುಲ್ ಆಗಿವೆ.
ನಿರ್ಮಾಪಕ ಪುಷ್ಕರ್ ತಮ್ಮ ಪುಷ್ಕರ್ ಫಿಲಂಸ್‌ನಡಿ ವಿದೇಶಗಳಲ್ಲಿ ಸಿನಿಮಾ ಬಿಡುಗಡೆ ಮಾಡಿದ್ದಾರೆ. ಯುಕೆ, ಯೂರೋಪ್, ಆಸ್ಟ್ರೇಲಿಯಾ, ಯುಎಸ್ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ದೇಶಗಳಲ್ಲಿ ಈಗಾಗಲೇ ಬಿಡುಗಡೆಯಾಗಿದೆ. ಇನ್ನು ಎರಡನೇ ವಾರಕ್ಕೆ ಫ್ರಾನ್ಸ್, ಪೋಲ್ಯಾಂಡ್, ಕೀನ್ಯಾ, ಜಪಾನ್, ಥೈಲ್ಯಾಂಡ್, ಇಸ್ರೇಲ್ ಸೇರಿದಂತೆ ಮತ್ತಷ್ಟು ದೇಶಗಳಲ್ಲಿ ತೆರೆಕಾಣಲಿದೆ. ಕನ್ನಡದಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿರುವ “ಅವನೇ ಶ್ರೀಮನ್ನಾರಾಯಣ’ ಚಿತ್ರ ಹೊಸ ವರ್ಷದಲ್ಲಿ ಪರಭಾಷೆಗಳಲ್ಲೂ ಬಿಡುಗಡೆಯಾಗಲಿದೆ.
ತೆಲುಗು ತಮಿಳು ಹಾಗೂ ಮಲಯಾಳಂ ಹಾಗೂ ಹಿಂದಿಯಲ್ಲಿ ತೆರೆಕಾಣುತ್ತಿದೆ. ಕನ್ನಡಿಗರು ಸದಭಿರುಚಿಯ ಚಿತ್ರಗಳನ್ನು ಪ್ರೋತ್ಸಾಹಿಸುವುದರಿಂದ “ಅವನೇ ಶ್ರೀಮನ್ನಾರಾಯಣ’ ಚಿತ್ರವನ್ನು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡಿ, ಇಲ್ಲಿಂದ ಚಿತ್ರದ ಯಶಸ್ವಿ ಪಯಣ ಮುಂದುವರೆಯಬೇಕೆಂಬುದು ಚಿತ್ರತಂಡದ ಆಶಯವಾಗಿತ್ತು. ಅದರಂತೆ ಈಗ ಪರಭಾಷೆಗಳಲ್ಲಿ ಬಿಡುಗಡೆಗೆ ಮುಂದಾಗಿದೆ. ಸಚಿನ್ ನಿರ್ದೇಶನದ ಈ ಚಿತ್ರವನ್ನು ಪುಷ್ಕರ್ ನಿರ್ಮಿಸಿದ್ದಾರೆ. ಶಾನ್ವಿ, ಪ್ರಮೋದ್ ಶೆಟ್ಟಿ, ಬಾಲಾಜಿ ಮನೋಹರ್, ಅಚ್ಯುತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.