ನಾಳೆ ಹುಬ್ಬಳ್ಳಿಯಲ್ಲಿ “ನಟಸಾರ್ವಭೌಮ’
Team Udayavani, Jan 4, 2019, 12:09 PM IST
ಐಟಿ ದಾಳಿ ಹಿನ್ನೆಲೆಯಲ್ಲಿ ಶನಿವಾರ (ನಾಳೆ) ನಡೆಯಬೇಕಿದ್ದ “ನಟಸಾರ್ವಭೌಮ’ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನೀತ್‍ರಾಜಕುಮಾರ್ ಗೈರಾಗುವ ಸಾಧ್ಯತೆಯಿದೆ. ಹುಬ್ಬಳ್ಳಿಯಲ್ಲಿ ನಾಳೆ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯಲಿದ್ದು, ಈ ಹಿಂದೆಯೇ ದಿನಾಂಕ ನಿಗದಿಯಾಗಿತ್ತು.
ಆದರೆ, ಗುರುವಾರದಿಂದ ಪುನೀತ್ ರಾಜಕುಮಾರ್ ಹಾಗೂ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ನಟ ನಿರ್ಮಾಪಕರ ಮನೆ ಮೇಲೆ ಐಟಿ ದಾಳಿಯಾಗಿದೆ. ಅಲ್ಲದೇ ಸತತ ಎರಡು ದಿನಗಳಿಂದ ನಡೆಯುತ್ತಿರುವ ತನಿಖೆಗೆ ಪುನೀತ್ ಮನೆಯಲ್ಲಿಯೇ ಇದ್ದುಕೊಂಡು ಸಹಕರಿಸುತ್ತಿದ್ದು, ನಾಳೆಯೂ ಕೂಡ ಅಧಿಕಾರಿಗಳ ತನಿಖೆ ಮುಂದುವರೆದರೆ ಕಾರ್ಯಕ್ರಮಕ್ಕೆ ಪುನೀತ್ ಹಾಜರಾಗಲು ಸಾಧ್ಯವಾಗುವುದಿಲ್ಲ ಎನ್ನಲಾಗುತ್ತಿದೆ.
ಇನ್ನು ನಾಳೆ ನೆಹರು ಮೈದಾನದಲ್ಲಿ ನಡೆಯಲಿರುವ ಆಡಿಯೋ ಬಿಡುಗಡೆ ಕಾರ್ಯಕ್ರಮದ ಎಲ್ಲ ಸಿದ್ಧತೆ ಭರದಿದ ಸಾಗಿದ್ದು, ಐಟಿ ದಾಳಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ಕ್ಯಾನ್ಸಲ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತು ಚಿತ್ರದ ನಿರ್ದೇಶಕ ಪವನ್ ಒಡೆಯರ್, ಕಾರ್ಯಕ್ರಮಕ್ಕೆ ಈಗಾಗಲೇ ಸಾಕಷ್ಟು ತಯಾರಿಯಾಗಿದೆ.
ಅಲ್ಲದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗಾಗಲೇ ದೂರದಿಂದ ಸಾಕಷ್ಟು ಜನರು ಬರುತ್ತಿದ್ದು, ಕಾರ್ಯಕ್ರಮವನ್ನು ನಿಲ್ಲಿಸುವ ಯೋಚನೆಯೇ ಇಲ್ಲ. ಈ ಕುರಿತು ಗೊಂದಲ ಬೇಡ ನೂರಕ್ಕೆ ನೂರರಷ್ಟು ಕಾರ್ಯಕ್ರಮ ನಡೆಯೋದು ಪಕ್ಕಾ. ಕಾರ್ಯಕ್ರಮದಲ್ಲಿ ಎಲ್ಲರೂ ಹಾಜರಾಗಲಿದ್ದಾರೆ. ಎಲ್ಲರೂ ಬನ್ನಿ ಎಂದು ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ತಮ್ಮ ಟ್ವಿಟ್ಟರ್ನಲ್ಲಿ ಶೇರ್ ಮಾಡಿದ್ದಾರೆ.
Tomo evening 5.30pm get ready for #Natasaarvabhowma audio release at Neharu Ground Hubli. All are welcome https://t.co/lV4385Kjcc
— Pavan Wadeyar (@PavanWadeyar) January 4, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.