ಯು/ಎ ಸರ್ಟಿಫಿಕೇಟ್ ಪಡೆದ “ನಟಸಾರ್ವಭೌಮ’
Team Udayavani, Jan 19, 2019, 11:12 AM IST
ಪವರ್ಸ್ಟಾರ್ ಪುನೀತ್‍ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ “ನಟಸಾರ್ವಭೌಮ’ ಸಿನಿಮಾದ ಪೋಸ್ಟರ್, ಟೀಸರ್ ಹಾಗೂ ಹಾಡುಗಳು ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಅಲ್ಲದೇ ಅಪ್ಪು ಅಭಿನಯದ “ಅಂಜನಿಪುತ್ರ’ ಸಿನಿಮಾದ ನಂತರ ಈ ಚಿತ್ರ ತೆರೆ ಕಾಣುತ್ತಿದ್ದು, ಇದೀಗ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ.
ಹೌದು, ಯಾವುದೇ ಕಟ್ಸ್ ಹಾಗೂ ಮ್ಯುೂಟ್ಸ್ ಇಲ್ಲದೆ ಸೆನ್ಸಾರ್ ಮಂಡಳಿ “ನಟಸಾರ್ವಭೌಮ’ನಿಗೆ ಯು/ಎ ಸರ್ಟಿಫಿಕೇಟ್ ಕೊಟ್ಟಿದೆ. ಇನ್ನು ಅಪ್ಪು ಮೊದಲ ಬಾರಿಗೆ ಫೋಟೋ ಜರ್ನಲಿಸ್ಟ್ ಪಾತ್ರ ಮಾಡುತ್ತಿದ್ದು, ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ಈ ಸಿನಿಮಾವನ್ನು ಪವನ್ ಒಡೆಯರ್ ನಿರ್ದೇಶಿಸುತ್ತಿದ್ದಾರೆ.
ಪುನೀತ್ ಜೊತೆಗೆ ಡಿಂಪಲ್ ಕ್ವೀನ್ ರಚಿತಾ ರಾಮ್ ಹಾಗೂ ಮಲಯಾಳಂ ಚೆಲುವೆ ಅನುಪಮ ಪರಮೇಶ್ವರನ್ ನಟಿಸಿದ್ದಾರೆ. ಇಮಾನ್ ಡಿ ಸಂಗೀತ ಹಾಗೂ ವೈದಿ ಛಾಯಾಗ್ರಹಣ ಚಿತ್ರಕ್ಕಿದ್ದು, ಫೆಬ್ರವರಿ 7 ರಂದು ಚಿತ್ರ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.