ಹೊರಬಂತು ನಟೇಶ್ ಹೆಗಡೆ ನಿರ್ದೇಶನದ ‘ಪೆದ್ರೊ’ ಟ್ರೇಲರ್
Team Udayavani, Mar 1, 2022, 11:23 AM IST
“ಬೂಸಾನ್ ಅಂತರಾಷ್ಟ್ರೀಯ ಸಿನಿಮೋತ್ಸವ’, “ಬಿಎಫ್ಐ ಲಂಡನ್ ಸಿನಿಮೋತ್ಸವ’, “ಫೆಸ್ಟಿವಲ್ ದೆ 3 ಕಾಂಟಿನೆಂಟ್ಸ್’ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ “ಪೆದ್ರೊ’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ಮೂಡಿಬಂದಿರುವ “ಪೆದ್ರೊ’ ಸಿನಿಮಾಕ್ಕೆ ನಟೇಶ್ ಹೆಗಡೆ ನಿರ್ದೇಶನ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ “ಪೆದ್ರೊ’ ಟ್ರೇಲರ್ ಬಿಡುಗಡೆ ಮಾಡಿದ್ದು, ಸದ್ಯ ಬಿಡುಗಡೆಯಾಗಿರುವ “ಪೆದ್ರೊ’ ಟ್ರೇಲರ್ ಸೋಶಿಯಲ್ ಮೀಡಿಯಾಗಳಲ್ಲಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.
“ಪೆದ್ರೊ’ ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ಗಿರೀಶ್ ಕಾಸರವಳ್ಳಿ, “ಇತ್ತೀಚಿನ ವರ್ಷಗಳಲ್ಲಿ ನಾನು ಮೆಚ್ಚಿದ ಸಿನಿಮಾಗಳಲ್ಲಿ ಒಂದು “ಪೆದ್ರೊ’. ಈ ಸಿನಿಮಾದಲ್ಲಿ ನಿರ್ದೇಶಕರು ಬಳಸಿರುವ ಭಾಷೆ ಹಾಗೂ ಸಿನಿಮಾ ಭಾಷೆ ನನ್ನನ್ನು ಆಶ್ಚರ್ಯಗೊಳಿಸಿತು. ಇದೊಂದು ಬಹಳ ಭಿನ್ನ ಅನುಭವ ಕೊಡುವ ಸಿನಿಮಾ. ಸ್ಟಾರ್ ನಟರು ಈ ರೀತಿಯ ಕಲಾ ಮಾದರಿಯ ಸಿನಿಮಾಗಳಿಗೆ ಬಂಡವಾಳ ಹೂಡುವ ಕಾರ್ಯ ಬೇರೆ ಬೇರೆ ಭಾಷೆಗಳಲ್ಲಿ ನಡೆದಿದೆ. ಇಲ್ಲಿ ರಿಷಬ್ ಶೆಟ್ಟಿಯವರು ಒಂದೊಳ್ಳೆಯ ಪರಂಪರೆಯನ್ನು ಹುಟ್ಟುಹಾಕುತ್ತ, ಮಾದರಿಯಾಗುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ:ಸ್ಯಾಂಡಲ್ ವುಡ್ ಶಿವಧ್ಯಾನ; ಇಂದು ಹಾಡು, ಪೋಸ್ಟರ್, ಟೈಟಲ್ ರಿಲೀಸ್
ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ನಟೇಶ್ ಹೆಗಡೆ, “ನಮ್ಮ ಸಿನಿಮಾ ಹಲವು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಆದರೆ ಈ ಸಿನಿಮಾ ನಮ್ಮ ಜನರಿಗೆ ಹೆಚ್ಚು ಅರ್ಥವಾಗುತ್ತದೆ ಎಂಬುದು ನನ್ನ ನಂಬಿಕೆ. ಹಾಗಾಗಿ ಈ ಟ್ರೇಲರ್ ಅನ್ನು ಪ್ರೇಕ್ಷಕರೊಂದಿಗೆ ಹಂಚಿಕೊಳ್ಳಲು ಖುಷಿಯಾಗುತ್ತದೆ’ ಎಂದರು.
ತನ್ನ ಮುದ್ದಿನ ನಾಯಿಯನ್ನು ಕೊಂದ ಹಂದಿಯನ್ನು ಕೊಲ್ಲಲು ಯತ್ನಿಸುವಾಗ ಆಗುವ ಅನಾಹುತ ಹಾಗೂ ಆ ನಂತರ “ಪೆದ್ರೊ’ನ ಜೀವನದಲ್ಲಿ ನಡೆಯುವ ಘಟನೆಗಳೇ ಸುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಇನ್ನು “ಪೆದ್ರೊ’ ಸಿನಿಮಾವನ್ನು ತಮಿಳಿನ ಜನಪ್ರಿಯ ನಿರ್ದೇಶಕ ವೆಟ್ರಿಮಾರನ್ ಪ್ರಸ್ತುತಪಡಿಸುತ್ತಿದ್ದು, ಟ್ರೇಲರ್ ಬಗ್ಗೆ ಅನೇಕ ಸ್ಟಾರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.