“ನೀನು ಬಗೆಹರಿಯದ ಹಾಡು…’; ಗಾಳಿಪಟ-2 ಚಿತ್ರ ಮತ್ತೊಂದು ಹಾಡು ಬಂತು
Team Udayavani, Jul 25, 2022, 10:05 AM IST
ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಮತ್ತು ಪವನ್ ನಾಯಕರಾಗಿ ಅಭಿನಯಿಸಿರುವ, ಯೋಗರಾಜ್ ಭಟ್ ನಿರ್ದೇಶನದ “ಗಾಳಿಪಟ-2′ ಚಿತ್ರ ಇದೇ ಆಗಸ್ಟ್ 12ಕ್ಕೆ ಬಿಡುಗಡೆಯಾಗುತ್ತಿದೆ. ಸದ್ಯ ಭರದಿಂದ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ “ಗಾಳಿಪಟ-2′ ಚಿತ್ರತಂಡ, ಬ್ಯಾಕ್ ಟು ಬ್ಯಾಕ್ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.
ಈಗಾಗಲೇ ಬಿಡುಗಡೆಯಾಗಿರುವ “ಗಾಳಿಪಟ-2′ ಚಿತ್ರದ ಮೂರು ಹಾಡುಗಳು ಹಿಟ್‌ಲಿಸ್ಟ್ ಸೇರಿದ್ದು, ಈಗ ಚಿತ್ರದ ಮತ್ತೂಂದು ಹಾಡು ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಅಂದಹಾಗೆ, ಅದು “ನೀನು ಬಗೆಹರಿಯದ ಹಾಡು… ನೋಡು ಹದಿಹರೆಯದ ಪಾಡು…’ ಎಂಬ ಹಾಡು.
ಹದಿಹರೆಯದ ಹುಡುಗರ ಎದೆಬಡಿತವನ್ನು ವಿವರಿಸುವಂತಿರುವ ಈ ಹಾಡಿಗೆ ನಿಹಾಲ್ ಥಾವ್ರೋ ಧ್ವನಿಯಾಗಿದ್ದು, ಜಯಂತ್ ಕಾಯ್ಕಿಣಿ ಹಾಡಿಗೆ ಸಾಲುಗಳನ್ನು ಬರೆದಿದ್ದಾರೆ. ಇನ್ನು ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಲ್ಲಿ ನಟ ಪವನ್ ಕುಮಾರ್ ಮತ್ತು ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದು, ಈ ರೊಮ್ಯಾಂಟಿಕ್ ಗೀತೆಗೆ ಬಿ. ಧನಂಜಯ್ ನೃತ್ಯ ಸಂಯೋಜಿಸಿದ್ದಾರೆ.
“ಸೂರಜ್ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ರಮೇಶ್ ರೆಡ್ಡಿ ನಿರ್ಮಿಸುತ್ತಿರುವ “ಗಾಳಿಪಟ-2′ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನವಿದೆ. ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಮತ್ತು ಪವನ್ ಅವರಿಗೆ ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಸಂಯುಕ್ತಾ ಮೆನನ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ:10 ರೂ. ಡಾಕ್ಟರ್ ಖ್ಯಾತಿಯ ಮಲ್ಹಾರ್ ರಾವ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ
ಉಳಿದಂತೆ ಹಿರಿಯ ನಟ ಅನಂತ ನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗಿರುವ ಈ ಗೀತೆ ನಿಧಾನವಾಗಿ ಸಿನಿ ಪ್ರಿಯರ ಗಮನ ಸೆಳೆಯುತ್ತಿದ್ದು, ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.