ನೆನಪಿರಲಿ ಪ್ರೇಮ್‌ 25ನೇ ಹೆಜ್ಜೆ

Team Udayavani, Mar 17, 2019, 5:41 AM IST

prem.jpg

“ಲೈಫ್ ಜೊತೆ ಒಂದ್‌ ಸೆಲ್ಫೀ’ ಚಿತ್ರದ ಬಳಿಕ “ನೆನಪಿರಲಿ’ ಪ್ರೇಮ್‌ ಯಾವ ಚಿತ್ರ ಮಾಡಲಿದ್ದಾರೆ ಎಂಬ ಪ್ರಶ್ನೆ ಇತ್ತು. ಅದರಲ್ಲೂ ಅವರೀಗ ಮಾಡುವ ಚಿತ್ರ 25 ನೇ ಚಿತ್ರ ಎಂಬುದೂ ವಿಶೇಷ. ತಮ್ಮ 25 ನೇ ಚಿತ್ರ ವಿಶೇಷವಾಗಿರಬೇಕು ಎಂಬ ಕಾರಣಕ್ಕೆ ಪ್ರೇಮ್‌ ವಿಶೇಷ ಕಥೆಗಳ ಹುಡುಕಾಟದಲ್ಲಿದ್ದರು. ಇದೀಗ ಅವರ 25 ನೇ ಚಿತ್ರಕ್ಕೊಂದು ಹೊಸ ಬಗೆಯ ಕಥೆ ಸಿಕ್ಕಿದೆ. ಹಾಗಾಗಿ, 25 ನೇ ಸಿನಿಮಾ ಏಪ್ರಿಲ್‌ನಲ್ಲಿ ಭರ್ಜರಿಯಾಗಿ ಸೆಟ್ಟೇರಲಿದೆ ಎಂಬುದು ಈ ಹೊತ್ತಿನ ಸುದ್ದಿ.

ಚಿತ್ರರಂಗಕ್ಕೆ ಬಂದು ಇಷ್ಟು ವರ್ಷಗಳ ಕಾಲ ಸೋಲು-ಗೆಲುವನ್ನು ಕಂಡು ಇಂದಿಗೂ ರನ್ನಿಂಗ್‌ನಲ್ಲಿರುವುದು ಸುಲಭವಲ್ಲ. ಪ್ರೇಮ್‌ ಆ ವಿಷಯದಲ್ಲಿ ಲಕ್ಕಿ. ಅವರು ಯಶಸ್ಸು ಕಂಡವರು. ಹಾಗೆಯೇ ಸೋಲನ್ನೂ ಉಂಡವರು. ಈ ಎರಡನ್ನೂ ಪ್ರೀತಿಯಿಂದಲೇ ಸ್ವೀಕರಿಸಿದ್ದ ಪ್ರೇಮ್‌ ತಮ್ಮ 25 ನೇ ಚಿತ್ರದ ಕುರಿತು ಹೇಳುವುದು ಹೀಗೆ. “ಪ್ರತಿ ನಟನಿಗೂ ತನ್ನ ಮೊದಲ ಚಿತ್ರ ಹೇಗೆ ವಿಶೇಷ ಆಗುತ್ತೋ, ಹಾಗೆಯೇ ಅವನ 25 ನೇ ಸಿನಿಮಾ ಕೂಡ ಅಷ್ಟೇ ವಿಶೇಷ.

ನಾನೀಗ 25 ನೇ ಸಿನಮಾದ ಹೊಸ್ತಿಲಲ್ಲಿ ನಿಂತಿದ್ದೇನೆ. “ಲೈಫ್ ಜೊತೆ ಒಂದ್‌ ಸೆಲ್ಫೀ’ ಚಿತ್ರದ ಬಳಿಕ ಏನಿಲ್ಲವೆಂದರೂ ನಾನು ಸುಮಾರು 80 ಕ್ಕೂ ಹೆಚ್ಚು ಕಥೆಗಳನ್ನು ಕೇಳಿದ್ದೇನೆ. ಆದರೆ, ಆ ಕಥೆಗಳು ನನ್ನಲ್ಲಿ ಅಷ್ಟೊಂದು ಭರವಸೆ ಮೂಡಿಸಲಿಲ್ಲ. ಆದರೆ, 25 ನೇ ಸಿನಿಮಾ ಮಾಡಲು ಸರಿಯಾದ ಕಥೆ ಎಂದೆನಿಸಿದ್ದರಿಂದ ಒಂದು ಕಥೆ ಆಯ್ಕೆ ಮಾಡಿಕೊಂಡು ಸಿನಿಮಾ ಮಾಡಲು ತಯಾರಿ ನಡೆಸಿದ್ದೇನೆ’ ಎಂಬುದು ಪ್ರೇಮ್‌ ಮಾತು.

ಅಂದಹಾಗೆ, ಪ್ರೇಮ್‌ ಅಭಿನಯದ 25 ನೇ ಚಿತ್ರವನ್ನು ರಾಘವೇಂದ್ರ ನಿರ್ದೇಶನ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ರಾಘವೇಂದ್ರ ಅವರಿಗೆ ಇದು ಮೊದಲ ಅನುಭವ. ಮೂಲತಃ ಮಂಡ್ಯದ ಕೆ.ಎಂ.ದೊಡ್ಡಿ ಗ್ರಾಮದವರಾದ ರಾಘವೇಂದ್ರ ಮಂಗಳೂರಿನಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದಾರೆ. “ಮೊದಲಿನಿಂದಲೂ ರಾಘವೇಂದ್ರ ಅವರಿಗೆ ಸಿನಿಮಾ ಮೇಲೆ ಆಸಕ್ತಿ ಇತ್ತು. ಒಳ್ಳೆಯ ಕಥೆ ಹೆಣೆದಿದ್ದರು. ನಾನು ಅದನ್ನು ಕೇಳಿದೊಡನೆ, ಇದೇ ನನ್ನ 25 ನೇ ಸಿನಿಮಾಗೆ ಸರಿಹೊಂದುವ ಕಥೆ ಅಂದುಕೊಂಡು ಒಪ್ಪಿದ್ದೇನೆ.

ಈ ಚಿತ್ರದಲ್ಲಿ ನನ್ನದು ನಾಲ್ಕು ಶೇಡ್‌ಗಳಿರುವ ಪಾತ್ರವಿದೆ. ರೆಗ್ಯುಲರ್‌ ಫಾರ್ಮೆಟ್‌ನಿಂದ ಹೊರಗಿರುವ ಚಿತ್ರ ಇದಾಗಲಿದೆ. ಉಳಿದಂತೆ ಇಲ್ಲೂ ಕಾಮಿಡಿ, ಲವ್‌ ಸೆಂಟಿಮೆಂಟ್‌, ಫ್ಯಾಮಿಲಿ ಸೆಂಟಿಮೆಂಟ್‌ ಇದ್ದರೂ, ಅದರಾಚೆಗೆ ವಿಶೇಷವಾದಂತಹ ಸಂದೇಶವೂ ಇದೆ. ಅದನ್ನು ಚಿತ್ರದಲ್ಲೇ ನೋಡಬೇಕು. ಇನ್ನು, ಈ ಚಿತ್ರವನ್ನು ಡಾ.ರಕ್ಷಿತ್‌ ನಿರ್ಮಾಣ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶಕ ರಾಘವೇಂದ್ರ ಅವರೇ ಸಂಗೀತವನ್ನೂ ನೀಡುತ್ತಿದ್ದಾರೆ.

ತುಂಬಾ ವರ್ಷಗಳ ಕಾಲ ಹೋಮ್‌ವರ್ಕ್‌ ಮಾಡಿಕೊಂಡೇ ನಿರ್ದೇಶನಕ್ಕೆ ಅಣಿಯಾಗಿದ್ದಾರೆ. ನಿರ್ದೇಶಕರ ಸಿನಿಮಾ ಪ್ರೀತಿ ಎಷ್ಟಿದೆ ಎಂಬುದು ಅವರ ಸ್ಕ್ರಿಪ್ಟ್ನಲ್ಲೇ ಗೊತ್ತಾಗುತ್ತದೆ’ ಎಂದು ವಿವರಿಸುವ ಪ್ರೇಮ್‌, ಸದ್ಯಕ್ಕೆ ಶೀರ್ಷಿಕೆ ಪಕ್ಕಾ ಆಗಿಲ್ಲ. ನಾಯಕಿ ಯಾರೆಂಬುದು ಗೊತ್ತಿಲ್ಲ. ಯಾರೆಲ್ಲ ಕಲಾವಿದರು ಇರುತ್ತಾರೆ ಎಂಬುದಕ್ಕೆ ಇನ್ನೂ ಸಮಯವಿದೆ. ತಂತ್ರಜ್ಞರ ಆಯ್ಕೆ ಇನ್ನಷ್ಟೇ ನಡೆಯುತ್ತಿದೆ’ ಎನ್ನುತ್ತಾರೆ ಪ್ರೇಮ್‌. 

ಟಾಪ್ ನ್ಯೂಸ್

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.