ನವೆಂಬರ್‌ನಲ್ಲಿ “ನ್ಯೂರಾನ್’
Team Udayavani, Nov 5, 2019, 6:01 AM IST
ಫ್ರೆಂಡ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ವಿನಯ್ ಕುಮಾರ್.ಆರ್ ಅವರು ನಿರ್ಮಿಸಿರುವ “ನ್ಯೂರಾನ್’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾ ಪತ್ರವನ್ನು ನೀಡಿದೆ. ಚಿತ್ರ ನವೆಂಬರ್‌ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ನೈಜ ಘಟನೆ ಆಧಾರಿತ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರಕಥೆ ಬರೆದು ವಿಕಾಸ್ ಪುಷ್ಪಗಿರಿ ನಿರ್ದೇಶನ ಮಾಡಿದ್ದಾರೆ. ಇದು ಅವರಿಗೆ ಚೊಚ್ಚಲ ಚಿತ್ರ.
“ನ್ಯೂರಾನ್’ ಚಿತ್ರದ ಬಗ್ಗೆ ಹೇಳುವುದಾದರೆ, ಮನುಷ್ಯ ನ್ಯೂರಾನ್ಸ್ ಇಲ್ಲದೆ ಬದುಕಲು ಸಾಧ್ಯವಿಲ್ಲ. ಬ್ರೈನ್‌ಗೆ ಸಂದೇಶ ರವಾನಿಸೋದೇ ಈ ನ್ಯೂರಾನ್. ಇದರಿಂದಲೇ ಮೆದುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ. ಇವತ್ತಿನ ಜನರೇಷನ್‌ಗೆ ಬೇಕಾದ ಅಂಶಗಳೊಂದಿಗೆ ಈ ಚಿತ್ರ ಮಾಡಲಾಗಿದೆ. ಸಕಲೇಶಪುರ, ಮಡಿಕೇರಿ, ಬೆಂಗಳೂರು, ಗೋವಾದಲ್ಲಿ ಚಿತ್ರೀಕರಣ ಮಾಡಲಾಗಿದೆ. ಯುವ ಈ ಚಿತ್ರದ ಮೂಲಕ ನಾಯಕನಟನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.
ಇನ್ನುಳಿದಂತೆ ನೇಹಾ ಪಾಟೀಲ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವೈಷ್ಣವಿ ಮೆನನ್ ಪ್ರಮುಖ ಪಾತ್ರದಲ್ಲಿದ್ದಾರೆ. ಜೈಜಗದೀಶ್, ಶಿಲ್ಪಾ ಶೆಟ್ಟಿ, ವರ್ಷ, ಅರಂದ್ ರಾವ್, ಕಬೀರ್ ಸಿಂಗ್, ರಾಕ್‌ಲೈನ್ ಸುಧಾಕರ್, ಕಾರ್ತಿಕ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಗುರುಕಿರಣ್ ಸಂಗೀತವಿರುವ ಈ ಚಿತ್ರಕ್ಕೆ ಹೈದರಾಬಾದ್‌ನ ಶೋಯೆಬ್ ಅಹಮದ್ ಛಾಯಾಗ್ರಹಣ, ಶ್ರೀಧರ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.