“ರಾಬರ್ಟ್’ ತಂಡಕ್ಕೆ ಹೊಸ ಎಂಟ್ರಿ
ದರ್ಶನ್ ಜೊತೆ ತೇಜಸ್ವಿನಿ ಪ್ರಕಾಶ್
Team Udayavani, Dec 21, 2019, 7:04 AM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮುಂಬರುವ ಚಿತ್ರ “ರಾಬರ್ಟ್’ನ ಕೆಲಸಗಳು ಭರದಿಂದ ನಡೆಯುತ್ತಿದೆ. ಸದ್ಯ ಚಿತ್ರದ ಬಹುಭಾಗ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಚಿತ್ರದ ಕೆಲ ದೃಶ್ಯಗಳ ಚಿತ್ರೀಕರಣಕ್ಕಾಗಿ ಕಾಶಿಗೆ ತೆರಳಿದೆ. ಇದರ ನಡುವೆಯೇ “ರಾಬರ್ಟ್’ ಚಿತ್ರತಂಡದ ಕಡೆಯಿಂದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಕೆಲ ತಿಂಗಳ ಹಿಂದಷ್ಟೇ “ರಾಬರ್ಟ್’ ಚಿತ್ರಕ್ಕೆ ನಾಯಕಿಯಾಗಿ ಆಶಾ ಭಟ್ ಆಯ್ಕೆಯಾಗಿದ್ದು, ನಿಮಗೆ ನೆನಪಿರಬಹುದು.
ಈಗ ಚಿತ್ರಕ್ಕೆ ಇನ್ನೊಬ್ಬ ನಟಿ ಸೇರ್ಪಡೆಯಾಗಿದ್ದಾರೆ. ಅವರ ಹೆಸರು ತೇಜಸ್ವಿನಿ ಪ್ರಕಾಶ್. 2008ರಲ್ಲಿ ತೆರೆಕಂಡ ದರ್ಶನ್ ಅಭಿನಯದ “ಗಜ’ ಚಿತ್ರದ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದ ತೇಜಸ್ವಿನಿ, ಈಗ “ರಾಬರ್ಟ್’ ಚಿತ್ರದಲ್ಲಿ ಮತ್ತೂಮ್ಮೆ ದರ್ಶನ್ ಜೊತೆ ಅಭಿನಯಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ಹಿಂದೆ “ಮಾತಾಡ್ ಮಾತಾಡ್ ಮಲ್ಲಿಗೆ’, “ಪ್ರೀತಿ ಏಕೆ ಭೂಮಿ ಮೇಲಿದೆ’, “ಅರಮನೆ’ ಮೊದಲಾದ ಕೆಲ ಚಿತ್ರಗಳಲ್ಲಿ ಅಭಿನಯಿಸಿದ್ದ ತೇಜಸ್ವಿನಿ ಪ್ರಕಾಶ್, ಕಳೆದ ಮೂರು-ನಾಲ್ಕು ವರ್ಷಗಳಿಂದ ಯಾವ ಚಿತ್ರಗಳಲ್ಲೂ ಕಾಣಿಸಿಕೊಂಡಿರಲಿಲ್ಲ.
ಇನ್ನು ಗುರುವಾರ (ಡಿ. 19) ತೇಜಸ್ವಿನಿ ಪ್ರಕಾಶ್ ಹುಟ್ಟುಹಬ್ಬವಿದ್ದು, ಇದೇ ದಿನ “ರಾಬರ್ಟ್’ ಚಿತ್ರತಂಡ ಸೋಶಿಯಲ್ ಮೀಡಿಯಾಗಳಲ್ಲಿ ತೇಜಸ್ವಿನಿ ಚಿತ್ರದಲ್ಲಿ ಅಭಿನಯಿಸುತ್ತಿರುವ ವಿಷಯವನ್ನು ಘೋಷಣೆ ಮಾಡಿದೆ. ಆದರೆ “ರಾಬರ್ಟ್’ ಚಿತ್ರದಲ್ಲಿ ತೇಜಸ್ವಿನಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಗುಟ್ಟನ್ನು ಮಾತ್ರ ನಿರ್ದೇಶಕ ತರುಣ್ ಸುಧೀರ್ ಬಿಟ್ಟುಕೊಟ್ಟಿಲ್ಲ. ಚಿತ್ರತಂಡದ ಮೂಲಗಳ ಪ್ರಕಾರ, “ರಾಬರ್ಟ್’ ಚಿತ್ರದ ಬಹುತೇಕ ಮಾತಿನ ಭಾಗದ ಚಿತ್ರೀಕರಣ ಅಂತಿಮ ಹಂತದಲ್ಲಿದ್ದು, ಕೆಲ ದಿನಗಳಲ್ಲೆ ಚಿತ್ರದ ಹಾಡಿನ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗುತ್ತಿದೆ.
“ಉಮಾಪತಿ ಫಿಲಂಸ್’ ಬ್ಯಾನರ್‌ನಲ್ಲಿ ಉಮಾಪತಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ತರುಣ್ ಸುಧೀರ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ದರ್ಶನ್‌ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ವಿನೋದ್ ಪ್ರಭಾಕರ್, ಚಿಕ್ಕಣ್ಣ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತವಿದ್ದು, ವಿ. ಹರಿಕೃಷ್ಣ ಹಿನ್ನಲೆ ಸಂಗೀತವಿದೆ. 2020ರ ಯುಗಾದಿ ಹಬ್ಬದ ವೇಳೆಗೆ “ರಾಬರ್ಟ್’ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Pani movie: ಕನ್ನಡದಲ್ಲಿ ಜೋಜು ಜಾರ್ಜ್ ಪಣಿ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.