ಅತ್ಯಾಚಾರದ ಸುತ್ತ ಮತ್ತೂಂದು ಸಿನಿಮಾ
Team Udayavani, Mar 27, 2020, 1:33 PM IST
ಕನ್ನಡದಲ್ಲಿ ಈಗಾಗಲೇ ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಹಲವು ಚಿತ್ರಗಳು ಬಂದಿವೆ.ಕೆಲವು ಚಿತ್ರೀಕರಣ ದಲ್ಲಿದ್ದರೆ, ಇನ್ನೂ ಕೆಲವು ಶುರುವಿಗೆ ಸಜ್ಜಾಗು ತ್ತಿವೆ. ಈಗ ಆ ಸಾಲಿಗೆ “ನಕ್ಷೆ ‘ಎಂಬ ಹೊಸಬರ ಸಿನಿಮಾ ಕೂಡ ಅದೇ ಸಾಲಿಗೆ ಸೇರಿದ ಸಿನಿಮಾ ಆಗಿದ್ದು, ಇಷ್ಟರಲ್ಲೇ ಚಿತ್ರೀಕರಣ ಮುಗಿಸಿ, ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದೆ.
ಹೌದು, ಬಹುತೇಕಹೊಸಬರೇ ಸೇರಿ ಮಾಡಿರುವ “ನಕ್ಷೆ ‘ಚಿತ್ರ ಈಗಾಗಲೇ ಶೇ.40 ರಷ್ಟು ಚಿತ್ರೀಕರಣ ಮುಗಿಸಿದೆ. ಈ ಚಿತ್ರವನ್ನು ಮಧು ಎಂಬ ಹೊಸ ಪ್ರತಿಭೆ ನಿರ್ದೇಶನ ಮಾಡಿದೆ. ಶಿವಪ್ರಕಾಶ್ ಎಂಬುವವರು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಇವರಿಗೂ ಇದು ಮೊದಲ ಚಿತ್ರ. ಇದೊಂದು ಮಹಿಳಾ ಪ್ರಧಾನ ಕಥೆ ಆಗಿದ್ದು, ಅತ್ಯಾಚಾರಕ್ಕೆ ಸಂಬಂಧಿಸಿದ ವಿಷಯ ಚಿತ್ರದ ಹೈಲೈಟ್. ದೇಶದಲ್ಲಿ ಅತ್ಯಾಚಾರಗಳ ಸಂಖ್ಯೆ ಸಾಕಷ್ಟು ಇದೆ. ಅವುಗಳನ್ನು ಆಧರಿಸಿ ಅನೇಕ ಸಿನಿಮಾಗಳೂ ಕೂಡ ಮೂಡಿ ಬಂದಿವೆ.
ಅದರಂತೆ “ನಕ್ಷೆ ‘ಚಿತ್ರದ ಕಥೆಕೂಡ ಅತ್ಯಾಚಾರಕ್ಕೆ ಸಂಬಂಧಿಸಿದ್ದೇ ಆಗಿದೆ. ಈಗಾಗಲೇ ಸದ್ದಿಲ್ಲದೆಯೇ ಈ ಚಿತ್ರದ ಚಿತ್ರೀಕರಣ ಶುರುವಾಗಿದ್ದು, ಶೇ.40 ರಷ್ಟುಮುಗಿದಿದೆ. ಸದ್ಯಕ್ಕೆ ಕೋವಿಡ್ 19 ಎಫೆಕ್ಟ್ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ಸ್ಥಗಿತ ಗೊಳಿಸಲಾಗಿದೆ.ಕೊರೊನಾ ತಣ್ಣಗಾದ ಬಳಿಕ ಪುನಃ “ನಕ್ಷೆ ‘ಚಿತ್ರಕ್ಕೆ ಚಿತ್ರೀಕರಣ ಶುರುವಾಗಲಿದೆ. ಅಂದ ಹಾಗೆ, ಈ ಚಿತ್ರದಲ್ಲಿ ಖುಷಿ ನಾಯಕಿಯಾಗಿದ್ದಾರೆ. ಅಪ್ಪಟ ಕನ್ನಡತಿಯಾಗಿರುವ ಖುಷಿ ಅವರಿಗೆ ಇದು ಎರಡನೇ ಸಿನಿಮಾ. ಈ ಚಿತ್ರಕ್ಕೆ ಮಹೇಶ್ ಎಂಬುವವರ ಛಾಯಾಗ್ರಹಣ ಮಾಡಿದರೆ, ಪೂರ್ಣಚಂದ್ರತೇಜಸ್ವಿ ಅವರು ಸಂಗೀತ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.