ಪ್ರಜ್ವಲ್ ಅಕೌಂಟ್‌ಗೆ ಹೊಸ ಚಿತ್ರ
ಡಾಟರ್ ಆಫ್ ಪಾರ್ವತಮ್ಮ ನಿರ್ಮಾಪಕರ ಎರಡನೇ ಚಿತ್ರ
Team Udayavani, Jun 30, 2019, 3:01 AM IST
ಇತ್ತೀಚೆಗಷ್ಟೇ ಪ್ರಜ್ವಲ್ ದೇವರಾಜ್ ಹೊಸ ಸಿನಿಮಾ ಒಪ್ಪಿಕೊಂಡ ಬಗ್ಗೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಸದಾ ಒಂದಿಲ್ಲೊಂದು ಚಿತ್ರದಲ್ಲಿ ಬಿಝಿಯಾಗಿರುವ ಪ್ರಜ್ವಲ್ ದೇವರಾಜ್ ಕೈಯಲ್ಲಿ ಈಗ ನಾಲ್ಕು ಮತ್ತೂಂದು ಸಿನಿಮಾ ಇದೆ. “ಇನ್ಸ್‌ಪೆಕ್ಟರ್ ವಿಕ್ರಂ’, “ಜಂಟಲ್ ಮ್ಯಾನ್’ ಮತ್ತು “ಅರ್ಜುನ್ ಗೌಡ’ ಚಿತ್ರಗಳು ಕೈಯಲ್ಲಿದ್ದರೆ, ಇನ್ನೂ ಹೆಸರಿಡದ ಎರಡು ಚಿತ್ರಗಳಲ್ಲೂ ಅವರು ನಟಿಸಲು ಗ್ರೀನ್‌ಸಿಗ್ನಲ್ ಕೊಟ್ಟಿದ್ದಾರೆ.
ಅವುಗಳ ಜೊತೆಗೆ ಇನ್ನೂ ಒಂದು ಹೊಸ ಚಿತ್ರವನ್ನು ಒಪ್ಪಿದ್ದಾರೆ ಎಂಬುದು ಈ ಹೊತ್ತಿನ ಸುದ್ದಿ. ಅಂದಹಾಗೆ, ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕಿನ್ನೂ ಶೀರ್ಷಿಕೆ ಪಕ್ಕಾ ಆಗಿಲ್ಲ. ಆ ಚಿತ್ರಕ್ಕೆ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ . “ಗೋವಿಂದಾಯ ನಮಃ’, “ಶ್ರಾವಣಿ ಸುಬ್ರಹ್ಮಣ್ಯ ‘, “ನಟಸಾರ್ವಭೌಮ’ ಚಿತ್ರ ಸೇರಿದಂತೆ ಹಲವು ಚಿತ್ರಗಳಲ್ಲಿ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಇದೆ.
ಆ ಅನುಭವದ ಮೇಲೆ ಈ ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ. ಅವರ ಈ ಚೊಚ್ಚಲ ನಿರ್ದೇಶನದ ಚಿತ್ರ ದಿಶಾ ಎಂಟರ್‌ಟೈನ್ಮೆಂಟ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದ್ದು, ಚಿತ್ರವನ್ನು ಶಶಿಧರ್ ಕೆ.ಎಂ. ನಿರ್ಮಾಣ ಮಾಡುತ್ತಿದ್ದಾರೆ. ಇವರೊಂದಿಗೆ ಕೃಷ್ಣ, ಮಧು, ಸಂದೀಪ್ ಕೂಡ ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ಈ ಹಿಂದೆ ಈ ತಂಡ “ಡಾಟರ್ ಆಫ್ ಪಾರ್ವತಮ್ಮ’ ಚಿತ್ರವನ್ನು ನಿರ್ಮಿಸಿತ್ತು.
ತಮ್ಮ ಮೊದಲ ನಿರ್ದೇಶನದ ಚಿತ್ರದ ಬಗ್ಗೆ ಹೇಳುವ ನಿರ್ದೇಶಕ ಕುಮಾರ್, ” ಇದೊಂದು ಲವ್, ಆ್ಯಕ್ಷನ್, ಎಮೋಷನಲ್ ಡ್ರಾಮ ಇರುವ ಚಿತ್ರ. ಪಕ್ಕಾ ಮಾಸ್ ಅಂಶಗಳಿರುವ ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾ. ಪ್ರಜ್ವಲ್ ದೇವರಾಜ್ ಅವರಿಗೆ ಇಲ್ಲಿ ಎರಡು ಶೇಡ್ ಪಾತ್ರಗಳಿವೆ. ಚಿತ್ರಕ್ಕಿನ್ನೂ ನಾಯಕಿಯ ಆಯ್ಕೆಯಾಗಿಲ್ಲ. ಬಿಗ್‌ಬಜೆಟ್‌ನಲ್ಲಿ ತಯಾರಾಗುತ್ತಿರುವ ಚಿತ್ರದಲ್ಲಿ ವಿಶೇಷ ಪಾತ್ರಗಳಿರಲಿದ್ದು, ಆ ಪಾತ್ರದಲ್ಲಿ ಕನ್ನಡದ ಕೆಲ ಸೆಲೆಬ್ರಿಟಿಗಳು ನಟಿಸಲಿದ್ದಾರೆ.
ಅವರು ಯಾರು ಎಂಬುದು ಸದ್ಯಕ್ಕೆ ಸಸ್ಪೆನ್ಸ್ ‘ ಎನ್ನುತ್ತಾರೆ ನಿರ್ದೇಶಕ ಕುಮಾರ್. ಬಹುತೇಕ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಸುಮಾರು 70 ದಿನಗಳ ಕಾಲ ಚಿತ್ರೀಕರಣ ನಡೆಸುವ ಯೋಜನೆ ಹಾಕಿಕೊಂಡಿದ್ದು, ಹಾಡುಗಳನ್ನು ವಿದೇಶದಲ್ಲಿ ಚಿತ್ರೀಕರಿಸುವ ನಿರ್ಧಾರ ಮಾಡಲಾಗಿದೆ. ಸದ್ಯಕ್ಕೆ ಸ್ಕ್ರಿಪ್ಟ್ ಅಂತಿಮ ಹಂತದಲ್ಲಿದ್ದು, ಅಕ್ಟೋಬರ್‌ನಲ್ಲಿ ಚಿತ್ರಕ್ಕೆ ಚಾಲನೆ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.