“ಗಿರ್ಮಿಟ್‌’ ಎಂಬ ಹೊಸ ರುಚಿ!

ಮಕ್ಕಳ ಹೊಸ ಪ್ರಯೋಗ ಮತ್ತು ಪ್ರಯತ್ನ - ನ.8 ರಂದು 6 ಭಾಷೆಯಲ್ಲಿ ರಿಲೀಸ್‌

Team Udayavani, Oct 24, 2019, 6:03 AM IST

Girmit

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಪ್ರಯೋಗಗಳು ನಡೆದಿವೆ. ಈಗ ಮತ್ತೂಂದು ಹೊಸ ಪ್ರಯತ್ನ ಆಗಿದೆ. ಅದು “ಗಿರ್ಮಿಟ್‌’ ಎಂಬ ಚಿತ್ರದ ಮೂಲಕ. ಹೌದು ಈ ಹಿಂದೆ “ಕಟಕ’ ಚಿತ್ರ ಮಾಡಿದ್ದ ಚಿತ್ರತಂಡವೇ ಮತ್ತೂಂದು ಹೊಸ ಪ್ರಯತ್ನ ಮಾಡುವ ಮೂಲಕ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. “ಗಿರ್ಮಿಟ್‌’ ಇದು ಪಕ್ಕಾ ಕಮರ್ಷಿಯಲ್‌ ಚಿತ್ರ. ಆದರೆ, ಸ್ಟಾರ್ ಇಲ್ಲವಷ್ಟೇ. ಮಕ್ಕಳೇ ಇಲ್ಲಿ ಸ್ಟಾರ್‌. ಹೌದು, ನಿರ್ದೇಶಕ ರವಿಬಸ್ರೂರ್‌ ಮತ್ತು ತಂಡ ಪ್ರತಿಭಾವಂತ ಮಕ್ಕಳನ್ನೇ ಆಯ್ಕೆ ಮಾಡಿಕೊಂಡು “ಗಿರ್ಮಿಟ್‌’ ಮಾಡಿದ್ದಾರೆ.

ಇಂಥದ್ದೊಂದು ಚಿತ್ರಕ್ಕೆ ಎನ್‌.ಎಸ್‌.ರಾಜಕುಮಾರ್‌ ಅವರು ನಿರ್ಮಾಣ ಮಾಡುವ ಮೂಲಕ ಸಾಥ್‌ ನೀಡಿದ್ದಾರೆ. ಚಿತ್ರದ ವಿಶೇಷವೆಂದರೆ, ಇಲ್ಲಿ ಮಕ್ಕಳೇ ಆವರಿಸಿದ್ದಾರೆ. ಹಾಗಂತ ಇದು ಮಕ್ಕಳ ಸಿನಿಮಾವಲ್ಲ, ಕಲಾತ್ಮಕ ಚಿತ್ರವೂ ಅಲ್ಲ. ಈಗ ಕನ್ನಡದಲ್ಲಿ ಬರುತ್ತಿರುವ ಸ್ಟಾರ್‌ ಸಿನಿಮಾಗಳ ಸಾಲಿಗೆ ಈ ಚಿತ್ರವೂ ಸೇರಲಿದೆ ಅಂದರೆ ಅಚ್ಚರಿ ಪಡಬೇಕಿಲ್ಲ. ಕಾರಣ, ಇಲ್ಲಿ ಸ್ಟಾರ್‌ನಟರಷ್ಟೇ ವ್ಯಾಲ್ಯು ಮಕ್ಕಳಿಗೂ ಕೊಡಲಾಗಿದೆ. ಇಲ್ಲೂ ಫ್ಯಾಮಿಲಿ, ಆ್ಯಕ್ಷನ್‌, ಕಾಮಿಡಿ, ಡ್ರಾಮಾ ವಿಷಯ ಇಟ್ಟುಕೊಂಡು ಕಥೆ ಹೆಣೆಯಲಾಗಿದೆ.

ಮಕ್ಕಳನ್ನು ಮಕ್ಕಳಾಗಿಯೇ ನೋಡದೆ, ಅವರನ್ನೂ ವಯಸ್ಸಿಗೆ ಮೀರಿದ ವ್ಯಕ್ತಿತ್ವಗಳೊಂದಿಗೆ ನೋಡಬಹುದು ಎಂಬುದಕ್ಕೆ “ಗಿರ್ಮಿಟ್‌’ ಸಾಕ್ಷಿಯಾಗುತ್ತೆ. ಈಗಾಗಲೇ ಚಿತ್ರದ ಟೀಸರ್‌, ಹಾಡಿಗೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ ಚಿತ್ರತಂಡಕ್ಕೂ ಚಿತ್ರದ ಮೇಲೆ ಇನ್ನಿಲ್ಲದ ಭರವಸೆ ಮೂಡಿಸಿದೆ. ನಿರ್ಮಾಪಕ ಎನ್‌.ಎಸ್‌.ರಾಜಕುಮಾರ್‌ ಹೇಳುವಂತೆ, “ಚಿತ್ರ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಯಾವುದೇ ಸ್ಟಾರ್‌ ಸಿನಿಮಾಗೂ ಕಮ್ಮಿ ಇಲ್ಲವೆಂಬಂತೆ ಚಿತ್ರ ಮಾಡಿದ್ದೇವೆ. ಸಿನಿಮಾ ನೋಡಿದವರಿಗೆ ಪಕ್ಕಾ ಮನರಂಜನೆ ಗ್ಯಾರಂಟಿ.

ನವೆಂಬರ್‌ 8 ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆ ಮಾಡುತ್ತಿದ್ದೇವೆ. ಅಷ್ಟೇ ಅಲ್ಲ, ಈ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಇದರೊಂದಿಗೆ ಇಂಗ್ಲೀಷ್‌ ಭಾಷೆಯಲ್ಲೂ ಸಹ ತೆರೆಗೆ ತರಲು ತಯಾರಿ ನಡೆಸುತ್ತಿದ್ದೇವೆ. ಕಾರ್ತಿಕ್‌ ಅವರು ವಿತರಣೆ ಹಕ್ಕು ಪಡೆದಿದ್ದು, ಸುಮಾರು 100 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್‌ ಮಾಡಲಿದ್ದೇವೆ’ ಎಂದು ವಿವರ ಕೊಡುತ್ತಾರೆ ನಿರ್ಮಾಪಕ ಎನ್‌.ಎಸ್‌.ರಾಜಕುಮಾರ್‌. ನಿರ್ದೇಶಕ ರವಿಬಸ್ರೂರ್‌ ಅವರಿಗೆ “ಗಿರ್ಮಿಟ್‌’ ಚಾಲೆಂಜ್‌ ಚಿತ್ರವಂತೆ.

ಅವರು ಹೇಳುವ ಪ್ರಕಾರ, “ಡ್ರಾಮಾ ಜ್ಯೂನಿಯರ್ಸ್’ ಇಂಥದ್ದೊಂದು ಚಿತ್ರ ಮಾಡೋಕೆ ಸ್ಪೂರ್ತಿ. ಅಲ್ಲಿ ತಮ್ಮ ಪ್ರತಿಭೆ ಅನಾವರಣಗೊಳಿಸುವುದನ್ನ ಕಂಡ ನನಗೆ ಇಂಥದ್ದೊಂದು ಪ್ರಯತ್ನ ಯಾಕೆ ಮಾಡಬಾರದು ಎನಿಸಿದ್ದರಿಂದ ಈ ಚಿತ್ರ ಮಾಡಲು ಮುಂದಾದೆ. ನಿರ್ಮಾಪಕರ ಪ್ರೀತಿ, ಬೆಂಬಲದಿಂದ ಇದು ಸಾಧ್ಯವಾಗಿದೆ. ಚಿತ್ರವನ್ನು ನೋಡಿದ ಯಶ್‌ ಮತ್ತು ರಾಧಿಕಾ ಪಂಡಿತ್‌ ಅವರು ನಮ್ಮ ಚಿತ್ರದ ನಾಯಕ, ನಾಯಕಿ ಪಾತ್ರಕ್ಕೆ ವಾಯ್ಸ್ ನೀಡಿದ್ದಾರೆ. ಅಷ್ಟೇ ಅಲ್ಲ, ಅಚ್ಯುತ್‌, ತಾರಾ, ರಂಗಾಯಣ ರಘು,ಸುಧಾ ಬೆಳವಾಡಿ, ಶಿವರಾಜ್‌ ಕೆ.ಆರ್‌.ಪೇಟೆ, ಸಾಧುಕೋಕಿಲ, ಜಹಾಂಗೀರ್‌,ಹೊನ್ನವಳ್ಳಿ ಕೃಷ್ಣ ಸೇರಿದಂತೆ ಹಲವು ಕಲಾವಿದರು ಮಕ್ಕಳ ನಟನೆಗೆ ಧ್ವನಿ ನೀಡಿದ್ದಾರೆ.

ಶನಿವಾರ ನ.26 ರಂದು ಚಿತ್ರದ ಟ್ರೇಲರ್‌ ರಿಲೀಸ್‌ ಆಗಲಿದೆ. ಸದ್ಯಕ್ಕೆ ಸಾಂಗ್‌ ಮತ್ತು ಡಬ್ಬಿಂಗ್‌ ಟೀಸರ್‌ಗೆ ಒಳ್ಳೆಯ ರೆಸ್ಪಾನ್ಸ್‌ ಸಿಕ್ಕಿದೆ’ ಎನ್ನುತ್ತಾರೆ ರವಿಬಸ್ರೂರ್‌. ಚಿತ್ರದಲ್ಲಿ ಆಶ್ಲೇಷ್‌ ರಾಜ್‌, ಶ್ಲಾಘಾ ಸಾಲಿಗ್ರಾಮ,ನಾಗರಾಜ್‌ ಜಪ್ತಿ, ಶ್ರಾವ್ಯಾ, ತನಿಶಾ ಕೋಣೆ, ಆದಿತ್ಯ, ಸಹನ ಬಸ್ರೂರ್‌, ಪವಿತ್ರ, ಜಯೇಂದ್ರ, ಸಿಂಚನ, ಮನೀಶ್‌ ಶೆಟ್ಟಿ, ಸಾರ್ಥಕ್‌ ಶೆಣೈ, ಮಹೇಂದ್ರ ಮತ್ತು ಪವನ್‌ ಬಸ್ರೂರ್‌ ನಟಿಸಿದ್ದಾರೆ. ಸಚಿನ್‌ ಬಸ್ರೂರ್‌ ಛಾಯಾಗ್ರಹಣವಿದೆ. ರವಿಬಸ್ರೂರ್‌ ಸಂಗೀತವಿದೆ.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.