Bun Tea Movie; ಬನ್ ಮತ್ತು ಟೀ ಜತೆಗೆ ಶಿಕ್ಷಣ ವ್ಯವಸ್ಥೆ ಕಥೆ ಹೇಳಲು ಹೊರಟ ಹೊಸಬರು
Team Udayavani, Sep 19, 2023, 8:35 PM IST
ದಿನದಿಂದ ದಿನಕ್ಕೆ ಶಿಕ್ಷಣ ದುಬಾರಿಯಾಗುತ್ತಿದೆ. ಬಡ-ಮಧ್ಯಮ ವರ್ಗದ ಮಕ್ಕಳಿಗೆ ಕೈಗೆಟುಕುವ ಶಿಕ್ಷಣ ಸಿಗುತ್ತಿಲ್ಲ. ಶಿಕ್ಷಣ ನೀತಿ ಸರಿಯಾಗಿಲ್ಲ, ಇಂದಿನ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಮಾರಕ… ಶಿಕ್ಷಣಕ್ಕೆ ಸಂಬಂಧಿಸಿದ ಇಂಥ ಹತ್ತಾರು ಮಾತುಗಳನ್ನು ಪ್ರತಿನಿತ್ಯ ನಾವೆಲ್ಲ ಕೇಳುತ್ತಲೇ ಇರುತ್ತೇವೆ. ಈಗ ಇಂಥದ್ದೇ ಶಿಕ್ಷಣದ ವಿಷಯವನ್ನು ಇಟ್ಟುಕೊಂಡು ಇಲ್ಲೊಂದು ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಅದರ ಹೆಸರು “ಬನ್ ಟೀ’
ಎಲ್ಲರಿಗೂ ಗೊತ್ತಿರುವಂತೆ, “ಬನ್’ ಮತ್ತು “ಟೀ’ ಪ್ರತಿದಿನ ಸಮಾಜದಲ್ಲಿ ಅದೆಷ್ಟೋ ಮಂದಿಯ ಹೊಟ್ಟೆ ತುಂಬಿಸುತ್ತದೆ. ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ಅನೇಕ ಬಾರಿ ಈ “ಬನ್-ಟೀ’ಯೇ ಆಧಾರ. ಇದೇ ವಿಷಯವನ್ನು ಹಿನ್ನೆಲೆಯಲ್ಲಿ ಇಟ್ಟುಕೊಂಡು, ಶಿಕ್ಷಣ ವ್ಯವಸ್ಥೆ, ಮಕ್ಕಳ ಮನಸ್ಥಿತಿ, ಪೋಷಕರ ಪರಿಸ್ಥಿತಿ, ಸಾಮಾಜಿಕ ಸ್ಥಿತಿ-ಗತಿ ಎಲ್ಲದರ ಸುತ್ತ “ಬನ್ ಟೀ’ ಸಿನಿಮಾ ಸಾಗುತ್ತದೆ.
ತನ್ನ ಸ್ನೇಹಿತನ ಜೀವನದಲ್ಲಿ ನಡೆದ ನೈಜ ಘಟನೆಯನ್ನೇ ಆಧಾರವಾಗಿಟ್ಟುಕೊಂಡು ನಿರ್ದೇಶಕ ಉದಯ ಕುಮಾರ್ “ಬನ್ ಟೀ’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. “ಬನ್ ಟೀ’ ಸಿನಿಮಾದಲ್ಲಿ ಮೌರ್ಯ ಮತ್ತು ತನ್ಮಯಿ ಇಬ್ಬರು ಬಾಲ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಉಮೇಶ್, ಶ್ರೀದೇವಿ, ಗುಂಡಣ್ಣ ಚಿಕ್ಕಮಗಳೂರು ಮೊದಲಾದವರು ಸಿನಿಮಾದ ಇತರ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೇಶವ್ ಆರ್. ಈ ಚಿತ್ರವನ್ನು ನಿರ್ಮಿಸಿದ್ದಾರೆ.
“ಇದೊಂದು ಕಂಟೆಂಟ್ ಆಧಾರಿತ ಸಿನಿಮಾ. ಹಾಗಾಗಿ ಇದರಲ್ಲಿ ಹೀರೋ-ಹೀರೋಯಿನ್ ಅಂತಿಲ್ಲ. ಇಂದಿನ ಹದಗೆಟ್ಟ ಶಿಕ್ಷಣ ವ್ಯವಸ್ಥೆಯ ಚಿತ್ರಣ ಈ ಸಿನಿಮಾದಲ್ಲಿದೆ. ಕೊನೆಗೊಂದು ಸಂದೇಶ ಕೂಡ ಸಿನಿಮಾದಲ್ಲಿದೆ. ಮಕ್ಕಳು, ಪೋಷಕರು ಎಲ್ಲರೂ ಕೂತು ನೋಡುವಂಥ ಸಿನಿಮಾ ಮಾಡಿದ್ದೇವೆ. ಸಿನಿಮಾ ನೈಜವಾಗಿ ಬರಬೇಕೆಂಬ ಕಾರಣಕ್ಕೆ ಯಾವುದೇ ಸೆಟ್ ಬಳಸದೆ ಸ್ಲಂ, ಮಾರ್ಕೆಟ್, ಟ್ರಾμಕ್ ಸಿಗ್ನಲ್‌ನಂತಹ ಸ್ಥಳಗಳಲ್ಲಿ ಇಡೀ ಸಿನಿಮಾದ ಚಿತ್ರೀಕರಣ ಮಾಡಿದ್ದೇವೆ’ ಎಂಬುದು ಚಿತ್ರತಂಡದ ಒಕ್ಕೊರಲ ಮಾತು.
“ಬನ್ ಟೀ’ ಸಿನಿಮಾದ ಹಾಡುಗಳಿಗೆ ಪ್ರದ್ಯೋತ್ತನ್ ಸಂಗೀತ ಸಂಯೋಜಿಸಿದ್ದಾರೆ. ಈ ಸಿನಿಮಾದಲ್ಲಿ ಹಾಡುಗಳು ಇರದಿದ್ದರೂ, ಹಿನ್ನೆಲೆ ಸಂಗೀತಕ್ಕೆ ಸಾಕಷ್ಟು ಮಹತ್ವವಿದೆಯಂತೆ. ಚಿತ್ರಕ್ಕೆ ರಾಜ ರಾವ್ ಛಾಯಾಗ್ರಹಣವಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ಬನ್ ಟೀ’ ಸಿನಿಮಾವನ್ನು ಇದೇ ಸೆಪ್ಟೆಂಬರ್ 22ಕ್ಕೆ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.