Nice Road Movie: ನೈಟ್ ರೋಡ್ ಸೆ.27ಕ್ಕೆ ಬಿಡುಗಡೆ
Team Udayavani, Sep 24, 2024, 4:10 PM IST
“ನೈಸ್ ರೋಡ್’ ಎಂಬ ಚಿತ್ರ ಈಗ ಟೈಟಲ್ ಬದಲಿಸಿ ನೈಟ್ ರೋಡ್ ಆಗಿರುವುದು ನಿಮಗೆ ಗೊತ್ತೇ ಇದೆ. ಈ ಚಿತ್ರ ಸದ್ಯ ಬಿಡುಗಡೆಯ ಹಂತಕ್ಕೆ ಬಂದಿದ್ದು, ಸೆ.27ರಂದು ತೆರೆಕಾಣುತ್ತಿದೆ.
ಅಪಘಾತದಿಂದ ಮೃತಪಟ್ಟ ಯುವಕನ ಅಸಹಜ ಸಾವಿನ ತನಿಖೆಗೆ ಮುಂದಾಗುವ ನಾಯಕ ಆಧ್ಯಾತ್ಮದತ್ತ ವಾಲುತ್ತಾನೆ. ಹೀಗೆ ತಿರುವು ಪಡೆಯುವ ಚಿತ್ರದ ಪ್ರತಿ ದೃಶ್ಯದಲ್ಲೂ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚಿಸುವ ಜೊತೆಗೆ ಯೋಚನೆಗೆ ಹಚ್ಚುತ್ತದೆ. ಕ್ಲೈಮ್ಯಾಕ್ಸ್ ವೇಳೆಗಂತೂ ನೋಡುಗರನ್ನು ತನ್ನಲ್ಲಿ ಆವಾಹನೆ ಮಾಡಿಕೊಂಡಿರುತ್ತದೆ ಎನ್ನುತ್ತದೆ ಚಿತ್ರತಂಡ.
ಗೋಪಾಲ್ ಹಳೇಪಾಳ್ಯ ಈ ಚಿತ್ರದ ನಿರ್ದೇಶಕರು. ಈ ಹಿಂದೆ ಗೋಪಾಲ್ ಹಳೇಪಾಳ್ಯ “ತಾಂಡವ’ ಚಿತ್ರವನ್ನು ನಿರ್ದೇಶಿಸಿದ್ದರು. ಕಳೆದ 15ವರ್ಷಗಳಿಂದ ಸಿನೆಮಾ ರಂಗದಲ್ಲಿ ಬರವಣಿಗೆ ಸೇರಿದಂತೆ ನಿರ್ದೇಶನದ ವಿಭಾಗದಲ್ಲಿ ತೊಡಗಿಸಿಕೊಂಡಿದ್ದಾರೆ.
ಇದೀಗ, ತಮ್ಮ 2ನೇ ಚಿತ್ರವನ್ನು ಪುನರ್ ಗೀತಾ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಗೋಪಾಲ್ ಹಳೇಪಾಳ್ಯ ಅವರೇ ನಿರ್ಮಾಣ ಮಾಡುವ ಜೊತೆಗೆ ನಿರ್ದೇಶನ ಮಾಡಿದ್ದಾರೆ.
ತಾರಾಗಣದಲ್ಲಿ ಧರ್ಮ, ಜ್ಯೋತಿ ರೈ, ಗಿರಿಜಾ ಲೋಕೇಶ್, ಗೋವಿಂದೇಗೌಡ, ರವಿಕಿಶೋರ್, ಸಚ್ಚಿ, ಮಂಜು ಮೈಸೂರು, ಪ್ರಭು, ರೇಣು ಶಿಕಾರಿ, ಸುರೇಖಾ ಇದ್ದಾರೆ. ಸತೀಶ್ ಆರ್ಯನ್ ಸಂಗೀತ, ಪ್ರವೀಣ್ ಶೆಟ್ಟಿ ಛಾಯಾಗ್ರಹಣ, ಜೀವನ್ ಪ್ರಕಾಶ್ ಸಂಕಲನ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.