Nidradevi Next Door: ನಿದ್ರಾದೇವಿಯ ಮಡಿಲಿನಲ್ಲಿ…
Team Udayavani, Feb 27, 2024, 5:56 PM IST
ನವನಟ ಪ್ರವೀರ್ ಶೆಟ್ಟಿ ನಾಯಕರಾಗಿರುವ “ನಿದ್ರಾದೇವಿ ನೆಕ್ಸ್ಟ್ ಡೋರ್’ ಎಂಬ ಸಿನಿಮಾವೊಂದು ಸೆಟ್ಟೇರಿದೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದ್ದು, ನಟ ರವಿಚಂದ್ರನ್ ಕ್ಲ್ಯಾಪ್ ಮಾಡಿದರು. ಸುರಾಗ್ ಸಾಗರ್ ಈ ಸಿನಿಮಾದ ನಿರ್ದೇಶಕರು.
ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ರಿಷಿಕಾ ನಾಯಕ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.
ಮುಹೂರ್ತ ಸಮಾರಂಭದ ಬಳಿಕ ಮಾತನಾಡಿದ ನಿರ್ದೇಶಕ ಸುರಾಗ್ ಸಾಗರ್, “ಇದು ಇಬ್ಬರು ನಿದ್ದೆ ಇಲ್ಲದರ ಜರ್ನಿ. ಅವ್ರಿಗೆ ಯಾಕೆ ನಿದ್ದೆ ಬರಲ್ಲ. ಇದಕ್ಕೆ ಪರಿಹಾರ ಏನು, ಅದರೊಳಗೆ ಅವರು ಕಂಡುಕೊಳ್ಳುವ ಲವ್ ಸ್ಟೋರಿ… ಮೂಲಕ ಕಥೆ ಸಾಗುತ್ತದೆ’ ಎಂದರು.
ನಿರ್ಮಾಪಕ ಜಯರಾಮ್ ದೇವಸಮುದ್ರ ಮಾತನಾಡಿ, “ಪ್ರವೀಣ್ ಶೆಟ್ಟಿ ಅವರಿಗೋಸ್ಕರ ಈ ಸಿನಿಮಾಕ್ಕೆ ಹಣ ಹಾಕುತ್ತಿದ್ದೇನೆ. ಕಥೆ ಬಹಳ ಚೆನ್ನಾಗಿದೆ. ನನಗೆ ಸುರಾಗ್ ಕಥೆ ಹೇಳಿದಾಗ ಇಷ್ಟವಾಯಿತು. ಪ್ರತಿಯೊಬ್ಬರ ಲೈಫ್ನಲ್ಲಿ ನಡೆಯುವ ಕೆಲ ಘಟನೆಗಳು ಸಿನಿಮಾದಲ್ಲಿದೆ. ಕಾಮಿಡಿ ಜೊತೆಗೆ ಒಂದು ಸಂದೇಶ ಚಿತ್ರದಲ್ಲಿದೆ’ ಎನ್ನುವುದು ಅವರ ಮಾತು.
ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ, “ನಿದ್ರೆ ಬರದಿರುವ ಹುಡುಗ ಏನೇನೂ ಕಷ್ಟಪಡುತ್ತಾನೆ. ಅದರ ಸುತ್ತ ನನ್ನ ಪಾತ್ರ ಸಾಗುತ್ತದೆ. ನನ್ನದು ಇಂಟ್ರೆಸ್ಟಿಂಗ್ ಪಾತ್ರ. ಈ ಹಿಂದಿನ ಚಿತ್ರಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನ ಪಾತ್ರ. ಕಳೆದೊಂದು ತಿಂಗಳಿನಿಂದ ರಿಹರ್ಸಲ್ ಮಾಡುತ್ತಿದ್ದೇವೆ’ ಎಂದರು.
ಎರಡು ವರ್ಷದ ಹಿಂದೆಯೇ ನನಗೆ ನಿರ್ದೇಶಕರು ಸಿನಿಮಾದ ಕಥೆ ಹೇಳಿದ್ದರು. ಆಗ ಕ್ಯಾರಕ್ಟರ್ ಬೇರೆ ಇತ್ತು. ಈಗ ಕ್ಯಾರೆಕ್ಟರ್ ಬೇರೆ ಇದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎನ್ನುವುದು ನಾಯಕಿ ರಿಷಿಕಾ ಮಾತು. ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.