![UDP-DC](https://www.udayavani.com/wp-content/uploads/2024/12/UDP-DC-415x249.jpg)
ಮತ್ತೆ ಸಿನಿಮಾದತ್ತ ನಿಖಿಲ್
ಸೆ.11ಕ್ಕೆ ಹೊಸ ಚಿತ್ರದ ಟೈಟಲ್,ಫಸ್ಟ್ ಲುಕ್ ಲಾಂಚ್
Team Udayavani, Sep 7, 2020, 6:30 PM IST
![ಮತ್ತೆ ಸಿನಿಮಾದತ್ತ ನಿಖಿಲ್](https://www.udayavani.com/wp-content/uploads/2020/09/cinema-tdy-3-1-620x372.jpg)
ನಿಖೀಲ್ ಕುಮಾರ್ ಮತ್ತೆ ಸಿನಿಮಾದತ್ತ ಮುಖ ಮಾಡಲು ಅಣಿಯಾಗಿದ್ದಾರೆ. ಅದು ಹೊಸ ಸಿನಿಮಾ ಮೂಲಕ. ಕೆಲವು ತಿಂಗಳ ಹಿಂದೆ ನಿಖೀಲ್ ಅವರ ನಾಲ್ಕನೇ ಚಿತ್ರಕ್ಕೆ ಮುಹೂರ್ತ ನಡೆದಿತ್ತು. ಲಹರಿ ಸಂಸ್ಥೆ ನಿರ್ಮಿಸುತ್ತಿರುವ ಈ ಚಿತ್ರವನ್ನು ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶನ ಮಾಡುತ್ತಿದ್ದಾರೆ. ಈಗ ಚಿತ್ರತಂಡ ಚಿತ್ರೀಕರಣಕ್ಕೆ ಅಣಿಯಾಗಿದ್ದು, ಮೊದಲ ಹಂತವಾಗಿ ಚಿತ್ರದ ಟೈಟಲ್ ಫಸ್ಟ್‌ಲುಕ್ ಹಾಗೂ ಮೋಶನ್ ಪೋಸ್ಟರ್ ರಿಲೀಸ್ ಮಾಡಲು ಚಿತ್ರ ತಂಡ ಮುಂದಾಗಿದೆ. ಸೆಪ್ಟೆಂಬರ್ 11 ರಂದು ಫಸ್ಟ್‌ಲುಕ್ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಇದೊಂದು ಪಕ್ಕಾ ಕಮರ್ಶಿಯಲ್ ಎಂಟರ್‌ಟೈನ್ಮೆಂಟ್ ಸಿನಿಮಾವಾಗಿದ್ದು, ನಿಖೀಲ್ ಇಲ್ಲಿ ಒಬ್ಬ ಬಾಸ್ಕೇಟ್ ಬಾಲ್ ಪ್ಲೇಯರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಸ್ಕೇಟ್ ಬಾಲ್ ಪ್ಲೇಯರ್ ಲೈಪ್‌ನಲ್ಲಿ ಏನೇನು ನಡೆಯುತ್ತದೆ ಅನ್ನೋದರ ಸುತ್ತ ಸಿನಿಮಾದ ಕಥೆ ನಡೆಯುತ್ತದೆ. ಇದರಲ್ಲಿ ನಿಖೀಲ್ ಅವರದು ಮಧ್ಯಮ ವರ್ಗದ ಹುಡುಗನ ಪಾತ್ರ. ಇದರಲ್ಲಿ ಲವ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್, ಎಮೋಶನ್ಸ್ ಎಲ್ಲವೂ ಇರಲಿದ್ದು, ಚಿತ್ರದ ಕ್ಯಾರೆಕ್ಟರ್‌ಗಾಗಿ ಒಂದಷ್ಟು ತಯಾರಿ ಮಾಡಿಕೊಂಡಿದ್ದಾರೆ ನಿಖೀಲ್. ಚಿತ್ರದ ಕಥೆ ಕನ್ನಡ ಮತ್ತು ತೆಲುಗು ಎರಡೂ ಭಾಷೆಯ ಆಡಿಯನ್ಸ್‌ಗೂ ತಲುಪುವಂತಿದೆ.
ಹಾಗಾಗಿ ಈ ಸಿನಿಮಾವನ್ನು ಕನ್ನಡ, ತೆಲುಗು ಎರಡೂ ಭಾಷೆಯಲ್ಲೂ ಮಾಡಲಾಗುತ್ತಿದೆಯಂತೆ. ಕನ್ನಡ, ತೆಲುಗು ಚಿತ್ರರಂಗದ ಪ್ರಸಿದ್ದ ಕಲಾವಿದರು, ತಂತ್ರಜ್ಞರು ಸಿನಿಮಾದಲ್ಲಿರುತ್ತಾರೆ.
ಟಾಪ್ ನ್ಯೂಸ್
![UDP-DC](https://www.udayavani.com/wp-content/uploads/2024/12/UDP-DC-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು](https://www.udayavani.com/wp-content/uploads/2024/12/bigg-2-150x96.jpg)
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-150x97.jpg)
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
![Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ](https://www.udayavani.com/wp-content/uploads/2024/12/17-1-150x90.jpg)
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
![Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ](https://www.udayavani.com/wp-content/uploads/2024/12/16-2-150x90.jpg)
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
![ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ](https://www.udayavani.com/wp-content/uploads/2024/12/11-20-150x90.jpg)
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.