Sandalwood: ಲೈಕಾ ಪ್ರೊಡಕ್ಷನ್ ಅಡಿಯಲ್ಲಿ ನಿಖಿಲ್ ಹೊಸಚಿತ್ರ
Team Udayavani, Aug 25, 2023, 12:14 PM IST
ಕಳೆದ ಎರಡು ವರ್ಷಗಳಿಂದ ರಾಜಕೀಯ ಅಂಗಳಲ್ಲಿ ಸಕ್ರಿಯವಾಗಿದ್ದ ರಾಜಕಾರಣಿ ಕಂ ನಟ ನಿಖಿಲ್ ಕುಮಾರ್ ಈಗ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಸದ್ಯ ತಮ್ಮ ಹೊಸ ಸಿನಿಮಾದ ಕಡೆಗೆ ಗಮನ ಹರಿಸಿರುವ ನಿಖೀಲ್ ಕುಮಾರ್, ಈ ಬಾರಿ ದಕ್ಷಿಣ ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆ “ಲೈಕಾ ಪ್ರೊಡಕ್ಷನ್ಸ್’ ಜೊತೆಗೆ ಸೇರಿ ಮತ್ತೂಂದು ಆ್ಯಕ್ಷನ್ ಕಂ ಮಾಸ್ ಎಂಟರ್‌ಟೈನ್ಮೆಂಟ್ ಸಿನಿಮಾದ ಜೊತೆಗೆ ಪ್ರೇಕ್ಷಕರ ಮುಂದೆ ಬರುವ ತಯಾರಿ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ನಿಖಿಲ್ ಕುಮಾರ್ ಅಭಿನಯಿಸುತ್ತಿರುವ ಈ ಹೊಸ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದ್ದು, ಇದೀಗ ಸಿನಿಮಾ ಅದ್ಧೂರಿಯಾಗಿ ಮುಹೂರ್ತವನ್ನು ಆಚರಿಸಿಕೊಂಡಿದೆ.
ಬೆಂಗಳೂರಿನ ಪಂಚತಾರಾ ಹೋಟೆಲ್ ಒಂದರಲ್ಲಿ ನಡೆದ ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಸಿನಿಮಾದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸಿ, ಚಿತ್ರೀಕರಣಕ್ಕೆ ಚಾಲನೆ ನೀಡಿದರು.
“ಲೈಕಾ ಪ್ರೊಡಕ್ಷನ್ಸ್’ನ ಸುಭಾಸ್ಕರನ್, ನಿರ್ದೇಶಕ ಲಕ್ಷ್ಮಣ್, ನಟ ಕೋಮಲ್ ಸೇರಿದಂತೆ ಚಿತ್ರತಂಡದ ಕಲಾವಿದರು, ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಮುಹೂರ್ತದ ಬಳಿಕ ಮಾತನಾಡಿದ ನಾಯಕ ನಟ ನಿಖಿಲ್ ಕುಮಾರ್, “ಈ ಹಿಂದೆ ನಾನು ಅಭಿನಯಿಸಿದ್ದ “ಸೀತಾರಾಮ ಕಲ್ಯಾಣ’ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ “ಲೈಕಾ ಪ್ರೊಡಕ್ಷನ್ಸ್’ ಸಂಸ್ಥೆಯ ಸುಭಾಸ್ಕರನ್ ಆಗಮಿಸಿದ್ದರು. ನಮ್ಮ ಸಂಸ್ಥೆಯ ನಿರ್ಮಾಣದ ಸಿನಿಮಾದಲ್ಲಿ ನೀವು ನಾಯಕರಾಗಿ ನಟಿಸಬೇಕು ಎಂದು ಸುಭಾಸ್ಕರನ್ ಹೇಳಿದ್ದರು. ಈಗ ಆ ಸಿನಿಮಾ ಆರಂಭವಾಗುತ್ತಿದೆ. ಈ ಸಿನಿಮಾಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ ಮಾಡುತ್ತಿದ್ದಾರೆ. ಶೀಘ್ರದಲ್ಲಿಯೇ ಸಿನಿಮಾದ ಕುರಿತು ಹೆಚ್ಚಿನ ಮಾಹಿತಿ ನೀಡುತ್ತೇವೆ’ ಎಂದರು.
ತಮ್ಮ ತಂಡವನ್ನು ಪರಿಚಯಿಸಿ ಮಾತನಾಡಿದ ನಿರ್ದೇಶಕ ಲಕ್ಷ್ಮಣ್, “ಕನ್ನಡದಲ್ಲಿ ಇದು ನನ್ನ ಮೊದಲ ಸಿನಿಮಾ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖೀಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.