ಜುಲೈ 21ಕ್ಕೆ ತೆರೆಗೆ ಬರುತ್ತಿದೆ ಹೊಸಬರ ‘ನಿಮ್ಮೆಲ್ಲರ ಆರ್ಶೀರ್ವಾದ’
Team Udayavani, Jul 7, 2023, 4:46 PM IST
ಕನ್ನಡದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ‘ನಿಮ್ಮೆಲ್ಲರ ಆಶೀರ್ವಾದ’. ವರುಣ್ ಸಿನಿ ಕ್ರಿಯೇಷನ್ ಮೊದಲ ಪ್ರಯತ್ನದ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ‘ನಿಮ್ಮೆಲ್ಲರ ಆಶೀರ್ವಾದ ‘ಜುಲೈ 21ಕ್ಕೆ ರಾಜ್ಯಾದ್ಯಂತ ತೆರೆಗೆ ಬರ್ತಿದೆ.
ಚಿತ್ರರಂಗದ ಮೇಲಿನ ಅಪಾರ ಅಭಿಮಾನ ಹಾಗೂ ಆಸಕ್ತಿಯಿಂದಾಗಿ ವರುಣ್ ಹೆಗ್ಡೆ ಈ ಸಿನಿಮಾ ನಿರ್ಮಾಣ ಮಾಡಿದ್ದು, ಇದು ಇವರ ಮೊದಲ ಕನಸು. ಈ ಬಗ್ಗೆ ಚಿತ್ರತಂಡ ಮಾಧ್ಯಮದರೊಂದಿಗೆ ಒಂದಿಷ್ಟು ವಿಷಯವನ್ನು ಹಂಚಿಕೊಂಡಿದೆ.
ನಿರ್ಮಾಪಕ ವರುಣ್ ಹೆಗ್ಡೆ ಮಾತನಾಡಿ, ನನ್ನ ಸ್ನೇಹಿತ ಕತೆ ಬರೆಯುತ್ತಿದ್ದ, ಕತೆ ಕೇಳಿ ಖುಷಿ ಆಯ್ತು. ಕೋವಿಡ್ ಬಂದು ಎಲ್ಲಾ ಜೀವನದ ಮೇಲೆ ಪರಿಣಾಮ ಬೀರಿತು. ಜನರಿಗೆ ಎಂಟರ್ಟೈನ್ಮೆಂಟ್ ಈ ಸಿನಿಮಾ. ಹಾಸ್ಯಸ್ಪದ ರೀತಿಯಲ್ಲಿ ಬರೆಯಲಾಗಿದೆ. ಈ ಚಿತ್ರವನ್ನು ಸರಿಯಾದ ಸಮಯಕ್ಕೆ ತಂದು ಒಪ್ಪಿಸಬೇಕು ಎಂದುಕೊಂಡಿದ್ದೆವು. ಇದೊಂದು ಫ್ಯಾಮಿಲಿ ಎಂಟರ್ ಟೈನರ್. ನನ್ನ ಹಾಗೂ ನಿರ್ದೇಶಕನ ಸ್ನೇಹಕ್ಕಿಂತ ಕತೆ ನನಗೆ ಇಷ್ಟವಾಯ್ತು. ಹೀಗಾಗಿ ‘ನಿಮ್ಮೆಲ್ಲರ ಆಶೀರ್ವಾದ’ ಸಿನಿಮಾ ಮಾಡಿದ್ದೇನೆ ಎಂದರು.
ನಿರ್ದೇಶಕ ರವಿಕಿರಣ್ ಮಾತನಾಡಿ, ಸುಂದರ-ಸರಳ ಕತೆಯನ್ನು ಹೆಣೆದಿದ್ದೇವೆ. ಪ್ರತಿಯೊಬ್ಬರಿಗೂ ಸಿನಿಮಾ ಇಷ್ಟಪಡಬೇಕು. ಅರ್ಥ ಮಾಡಿಕೊಳ್ಳಬೇಕು ಎಂಬ ರೀತಿಯಲ್ಲಿ ಸಿನಿಮಾ ಮಾಡಿದ್ದೇವೆ. ಇತ್ತೀಚೆಗಿನ ವರ್ಷಗಳಲ್ಲಿ ತುಂಬಾ ಜಾನರ್ ಗಳ ಬಗ್ಗೆ ಯೋಚನೆ ಮಾಡುತ್ತಿದ್ದೆ. ಫ್ಯಾಮಿಲಿ ಡ್ರಾಮಾ ಬಂದಿವೆ. ಆದರೆ ಮೊದಲಿನಿಂದ ಕೊನೆತನಕ ಸಿಂಪಲ್ ಆಗಿ ಎಂಟರ್ಟೈನ್ ಡ್ರಾಮಾಗಳು ಇತ್ತೀಚೆಗೆ ಕಡಿಮೆಯಾಗಿವೆ ಎಂದು ಈ ಕತೆ ಬರೆದಿದ್ದೇವೆ. ಈಗ ಸಿನಿಮಾ ರಿಲೀಸ್ ಹಂತದಲ್ಲಿದೆ. ಇಡೀ ಫ್ಯಾಮಿಲಿ ಕುಳಿತುಕೊಂಡು ನೋಡುವ ಚಿತ್ರ ಇದಾಗಿದ್ದು, ಇದೇ ಜುಲೈ 21ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದರು.
ಕೌಟುಂಬಿಕ ಕಥಾಹಂದರದ ‘ನಿಮ್ಮೆಲ್ಲರ ಆಶೀರ್ವಾದ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್ ಶೆಟ್ಟಿ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದು, ಭಿನ್ನ ಸಿನಿಮಾ ಖ್ಯಾತಿಯ ಪಾಯಲ್ ರಾಧಾಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಎಂ. ಎನ್.ಲಕ್ಷ್ಮೀದೇವಿ, ಅರವಿಂದ ಬೋಳಾರ್, ಗೋವಿಂದೇಗೌಡ, ಸ್ವಾತಿ ಗುರುದತ್, ದಿನೇಶ್ ಮಂಗಳೂರು ಸೇರಿದಂತೆ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ.
‘ನಿಮ್ಮೆಲ್ಲರ ಆಶೀರ್ವಾದ’ ಸಿನಿಮಾಗೆ ಯುವ ನಿರ್ದೇಶಕ ರವಿಕಿರಣ್ ಆಕ್ಷನ್ ಕಟ್ ಹೇಳಿದ್ದು, ಸರವಣನ್ ಜಿ.ಎನ್.ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ, ರೂಪೇಂದ್ರ ಆಚಾರ್ ಕಲಾ ನಿರ್ದೇಶನ, ಸುನಾದ್ ಗೌತಮ್ ಸಂಗೀತ ಮತ್ತು ವಿವೇಕ್ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್ ಆರುಮುಗಂ ಸಂಕಲನವಿದೆ. ಕರಾವಳಿಯ ವಿವಿಧ ಭಾಗಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಈಗಾಗಲೇ ಪೋಸ್ಟರ್ ಮತ್ತು ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ನಿಮ್ಮೆಲ್ಲರ ಆಶೀರ್ವಾದ’ ಚಿತ್ರ ಇದೇ ತಿಂಗಳು 21 ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.