ವಿಭಿನ್ನ ಕಥಾ ಹಂದರದ ಚಿತ್ರ ‘ನಿಮ್ಮೆಲ್ಲರ ಆಶೀರ್ವಾದ’ ಶೀಘ್ರದಲ್ಲೇ ತೆರೆಗೆ

ಚಿತ್ರದಲ್ಲಿದೆ ಪ್ರತಿಭಾ ಸಂಪನ್ನ ತಾರಾಗಣ

Team Udayavani, Jul 2, 2023, 9:23 PM IST

ವಿಭಿನ್ನ ಕಥಾ ಹಂದರದ ಚಿತ್ರ ‘ನಿಮ್ಮೆಲ್ಲರ ಆಶೀರ್ವಾದ’ ಶೀಘ್ರದಲ್ಲೇ ತೆರೆಗೆ

ಕನ್ನಡದ ಹೊಸ ನಿರ್ಮಾಣ ಸಂಸ್ಥೆ “ವರುಣ್‌ ಸಿನಿ ಕ್ರಿಯೇಷನ್ಸ್‌’ ತನ್ನ ಚೊಚ್ಚಲ ಸಿನಿಮಾ “ನಿಮ್ಮೆಲ್ಲರ ಆರ್ಶೀರ್ವಾದ’ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದ್ದು ಈ ತಿಂಗಳಲ್ಲೇ ರಾಜಾದ್ಯಂತ ಸಿನಿಮಾ ತೆರೆ ಕಾಣಲಿದೆ. ಈ ಚಿತ್ರಕ್ಕೆ ಯುವ ನಿರ್ದೇಶಕ ರವಿಕಿರಣ್‌ ನಿರ್ದೇಶನ ಮಾಡಿದ್ದಾರೆ.

ಯುವ ಸಿನಿಮಾ ಉತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ಸಿನಿಮಾ ತನ್ನ ಶೀರ್ಷಿಕೆ ಮೂಲಕವೇ ಗಮನ ಸೆಳೆಯುತ್ತಿದ್ದು ಇದಕ್ಕೆ ‘ನಿಮ್ಮೆಲ್ಲರ ಆಶೀರ್ವಾದ’ವೂ ಬೇಕಿದೆ…

ಈ ಚಲನಚಿತ್ರವು ಕೌಟುಂಬಿಕ ಕಥಾಹಂದರ ಹೊಂದಿದ್ದು, ಪೊಲೀಸ್‌ ಅಧಿಕಾರಿಯೊಬ್ಬನ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ತೆರೆದಿಡುವಂತಿದೆ. ಸರಳ ಮತ್ತು ಸಹಜ ಜೀವನವನ್ನು ಕರಾವಳಿಯ ಹಿನ್ನೆಲೆಯಲ್ಲಿ ಸುಂದರವಾಗಿ ಚಿತ್ರೀಕರಿಸಲಾಗಿದೆ.

ನಾಯಕ ನಟಿಯಾಗಿ “ಭಿನ್ನ’ ಸಿನೆಮಾ ಖ್ಯಾತಿಯ ಪಾಯಲ್‌ ರಾಧಾಕೃಷ್ಣ ಅಭಿನಯಿಸಿದ್ದಾರೆ. ನಾಯಕ ನಟನಾಗಿ ಪ್ರತೀಕ್‌ ಶೆಟ್ಟಿ ಹೊಸ ಪರಿಚಯ ಆಗಲಿದ್ದಾರೆ. ಚಿತ್ರರಂಗದ ಹಿರಿಯ ಮತ್ತು ಅನುಭವಿ ನಟರಾದ ಎಂ.ಎನ್‌.ಲಕ್ಷ್ಮೀದೇವಿ, ಅರವಿಂದ ಬೋಳಾರ್‌, ಗೋವಿಂದೇಗೌಡ, ಸ್ವಾತಿ ಗುರುದತ್‌, ದಿನೇಶ್‌ ಮಂಗಳೂರು ಮತ್ತಿತರರು ತಾರಾಗಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರಕ್ಕೆ ಸರವಣನ್‌ ಜಿ.ಎನ್‌.ಛಾಯಾಗ್ರಹಣ ಮಾಡಿದ್ದು, ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ರೂಪೇಂದ್ರ ಆಚಾರ್‌ ಕಲಾ ನಿರ್ದೇಶನದ ಕೆಲಸ ಮಾಡಿದ್ದಾರೆ. ಸುನಾದ್‌ ಗೌತಮ್‌ ಸಂಗೀತ ಮತ್ತು ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ರಾಜ್ಯ ಪ್ರಶಸ್ತಿ ವಿಜೇತ ಸಂಕಲನಕಾರ ಸುರೇಶ್‌ ಆರುಮುಗಂ ಅವರ ಎಡಿಟಿಂಗ್ ‌ ಕೆಲಸ ಚಿತ್ರದ ಅಂದ ಹೆಚ್ಚಿಸಲಿದೆ.

ಕರಾವಳಿಯ ವಿವಿಧ ಭಾಗಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದ್ದು, ಇದೀಗ ಈ ಚಿತ್ರದ ಹೊಸ ಪೋಸ್ಟರ್‌ವೊಂದು ರಿಲೀಸ್‌ ಆಗಿದ್ದು ಇದೇ ತಿಂಗಳಲ್ಲಿ ರಾಜ್ಯದ ಎಲ್ಲಾ ಚಿತ್ರ ಮಂದಿರಗಳಲ್ಲಿ ತೆರೆಕಾಣಲಿದೆ. ಚಿತ್ರ ತಂಡಕ್ಕೆ ‘ನಿಮ್ಮೆಲ್ಲರ ಆಶೀರ್ವಾದ’ ಬೇಕಾಗಿದೆ.

ಇದನ್ನೂ ಓದಿ: ಬ್ರಿಟಿಷರು ಮಾಡಿದ್ದಕ್ಕಿಂತ ಹೆಚ್ಚು ಲೂಟಿ ಮೋದಿ ಸರ್ಕಾರ ಮಾಡಿದೆ: ಕೇಜ್ರಿವಾಲ್

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.