“ಪಡ್ಡೆಹುಲಿ’ಗೆ ನಿಶ್ವಿಕಾ ನಾಯ್ಡು ನಾಯಕಿ
Team Udayavani, Mar 5, 2018, 3:27 PM IST
ಕೆ. ಮಂಜು ಮಗ ಶ್ರೇಯಸ್ ಹೀರೋ ಆಗಿ ನಟಿಸುತ್ತಿರುವ ಮೊದಲ ಚಿತ್ರ “ಪಡ್ಡೆ ಹುಲಿ’ ಇದೇ ತಿಂಗಳ 11ಕ್ಕೆ ಪ್ರಾರಂಭವಾಗುವುದಕ್ಕೆ ಸಜ್ಜಾಗಿದೆ. ಈಗಾಗಲೇ ಶ್ರೇಯಸ್‌ನ ಮೊದಲ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಇತ್ತೀಚೆಗೆ ನಟ-ನಿರ್ದೇಶಕ ಸುದೀಪ್ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಈ ಮಧ್ಯೆ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದು, ಶ್ರೇಯಸ್ ಎದುರು ನಾಯಕಿಯಾಗಿ ನಿಶ್ವಿಕಾ ನಾಯ್ಡು ನಟಿಸುತ್ತಿದ್ದಾರೆ. ಅನೀಶ್ ತೇಜೇಶ್ವರ್ ಅಭಿನಯದ ಮತ್ತು ನಿರ್ದೇಶನದ “ವಾಸು ಪಕ್ಕಾ ಲೋಕಲ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.
ಅದಾದ ನಂತರ ಚಿರಂಜೀವಿ ಸರ್ಜಾ ಅಭಿನಯದ “ಅಮ್ಮಾ ಐ ಲವ್ ಯೂ’ ಚಿತ್ರದಲ್ಲೂ ನಾಯಕಿಯಾಗಿ ನಟಿಸಿದ್ದರು. ಆ ಎರಡು ಚಿತ್ರಗಳು ಬಿಡುಗಡೆಯಾಗುವ ಮುನ್ನವೇ, ಅವರು “ಪಡ್ಡೆ ಹುಲಿ’ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವುದು ವಿಶೇಷ.
“ಪಡ್ಡೆ ಹುಲಿ’ ಚಿತ್ರವನ್ನು ಗುರು ದೇಶಪಾಂಡೆ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣ ಇರಲಿದೆ. ಈ ಹಿಂದೆ “ಉಪ್ಪು ಹುಳಿ ಖಾರ’ ಚಿತ್ರವನ್ನು ನಿರ್ಮಿಸಿದ್ದ ರಮೇಶ್ ರೆಡ್ಡಿ, ಈ ಚಿತ್ರವನ್ನು ತಮ್ಮ ತೇಜಸ್ವಿನಿ ಎಂಟರ್‌ಪ್ರೈಸಸ್ ಬ್ಯಾನರ್‌ನ ಮೂಲಕ ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.