ಕೊಡಗಿನ ಕುವರಿ ಸನಾ ತಿಮ್ಮಯ್ಯ ಪ್ರಕಾರ ಒಡೆಯ ಅಂದರೆ…
Team Udayavani, Dec 11, 2019, 4:42 PM IST
ಸಂದೇಶ್ ನಾಗರಾಜ್ ಅರ್ಪಿಸಿ, ಎನ್ ಸಂದೇಶ್ ನಿರ್ಮಾಣ ಮಾಡಿರುವ ಒಡೆಯ ಚಿತ್ರ ಈ ವಾರ ತೆರೆಗಾಣುತ್ತಿದೆ. ಈ ಮೂಲಕ ಅದೆಷ್ಟೋ ಕಾಲದಿಂದ ಅಭಿಮಾನಿಗಳಲ್ಲಿ ನಿಗಿನಿಗಿಸುತ್ತಿದ್ದ ಕಾತರ, ನಿರೀಕ್ಷೆಗಳೆಲ್ಲವೂ ಸಾಕಾರಗೊಳ್ಳುವ ಕ್ಷಣಗಳಿಗೆ ಕೌಂಟ್ ಡೌನ್ ಶುರುವಾಗಿದೆ. ಈ ಸಿನಿಮಾ ಆರಂಭವಾದ ಕ್ಷಣದಿಂದಲೇ ಇದರ ನಾಯಕಿ ಯಾರಾಗುತ್ತಾರೆಂಬ ಕುತೂಹಲ ಹುಟ್ಟಿಕೊಂಡಿತ್ತು. ಈ ಸಾಲಿನಲ್ಲಿ ಒಂದಷ್ಟು ಲೀಡ್ ನಟಿಯರ ಹೆಸರುಗಳೂ ತೇಲಿ ಹೋಗಿದ್ದವು. ಆದರೆ ಕಡೆಯೂ ಒಡೆಯನ ಒಡತಿಯಾಗಿ ನಿಕ್ಕಿಯಾಗಿದ್ದು ಕೊಡಗಿನ ಕುವರಿ ರಾಘವಿ ತಿಮ್ಮಯ್ಯ. ಮೊದಲ ಹೆಜ್ಜೆಯಲ್ಲಿಯೇ ಎಲ್ಲರೂ ಹುಬ್ಬೇರಿಸುವಂಥಾ ಅವಕಾಶ ಗಿಟ್ಟಿಸಿಕೊಂಡಿದ್ದ ರಾಘವಿಯ ಲಕ್ಕು ಈ ಸಿನಿಮಾ ಮೂಲಕವೇ ಬದಲಾಗೋ ಲಕ್ಷಣಗಳಿವೆ. ಈ ಕಾರಣದಿಂದಲೇ ಅವರು ಹೆಸರು ಬದಲಾವಣೆ ಮಾಡಿಕೊಂಡು ಇದೀಗ ಸನಾ ತಿಮ್ಮಯ್ಯ ಆಗಿ ಅವತರಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್‌ಗೆ ನಾಯಕಿಯಾಗಬೇಕೆಂಬ ಆಸೆ ಮತ್ತು ಪೈಪೋಟಿ ಲೀಡ್ ನಟಿಯರ ವಲಯದಲ್ಲಿಯೇ ಇರುತ್ತದೆ. ಹಾಗಿರುವಾಗ ಹೊಸಾ ಹುಡುಗಿ ಸನಾ ಅವಕಾಶವನ್ನು ತನ್ನದಾಗಿಸಿಕೊಂಡಾಗ ಸಹಜವಾಗಿಯೇ ಎಲ್ಲರೂ ಹೆಬ್ಬೇರಿಸಿದ್ದರು. ಆದರೆ ಇಲ್ಲಿರೋ ತನ್ನ ಸವಾಲಿನಂಥಾ ಪಾತ್ರವನ್ನು ಸನಾ ಎಲ್ಲರೂ ಮೆಚ್ಚಿಕೊಳ್ಳುವಂತೆಯೇ ನಿಭಾಯಿಸಿದ್ದಾರಂತೆ. ಅದು ಸಾಧ್ಯವಾದದ್ದು ದರ್ಶನ್ ಹಾಗೂ ಇಡೀ ಚಿತ್ರತಂಡದ ಪ್ರೋತ್ಸಾಹ ಮತ್ತು ಮಾರ್ಗದರ್ಶನದಿಂದಲೇ ಅನ್ನೋದು ಸನಾ ಅಭಿಪ್ರಾಯ. ಈ ನಿಟ್ಟಿನಲ್ಲಿ ಒಡೆಯ ಅಂದರೆ ಅವರ ಪಾಲಿಗೆ ಮಾರ್ಗದರ್ಶಕ ಮತ್ತು ಆತ್ಮಬಂಧು. ತನಗೆ ಇಂಥಾದ್ದೊಂದು ಅವಕಾಶ ಕೊಟ್ಟಿರೋ ಸಂದೇಶ್ ಪ್ರೊಡಕ್ಷನ್ಸ್ ಬಗ್ಗೆಯೂ ಸನಾಗೆ ಅಪಾರವಾದ ಗೌರವಾಧರಗಳಿವೆ.
ಸನಾಗೆ ಆರಂಭಿಕ ಹೆಜ್ಜೆಯಲ್ಲಿಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ನಟಿಸೋ ಅವಕಾಶ ಕೂಡಿ ಬಂದಿರೋದರ ಬಗ್ಗೆ ಖುಷಿಯಿದೆ. ಸವಾಲಿನಂಥಾ ನಾಯಕಿಯ ಪಾತ್ರವನ್ನೂ ಸಮರ್ಥವಾಗಿ ನಿರ್ವಹಿಸಿರೋದರ ಬಗ್ಗೆ ಹೆಮ್ಮೆಯೂ ಇದೆ. ಇದರ ಜೊತೆ ಜೊತೆಗೇ ಒಡೆಯ ಕನ್ನಡಿಗರೆಲ್ಲರ ಪ್ರೀತಿ ಸಂಪಾದಿಸುವಂಥಾ ಹೆಮ್ಮೆಯ ಚಿತ್ರವಾಗಿ ಮೂಡಿ ಬಂದಿದೆಯೆಂಬ ಭರವಸೆ, ಅದು ದೊಡ್ಡ ಮಟ್ಟದಲ್ಲಿಯೇ ಗೆಲುವು ಕಾಣಲಿದೆ ಎಂಬ ನಂಬಿಕೆ ಸನಾರದ್ದು. ಇದೆಲ್ಲ ಏನೇ ಇದ್ದರೂ ಚೊಚ್ಚಲ ಚಿತ್ರದಲ್ಲಿಯೇ ದರ್ಶನ್ ನಾಯಕಿಯಾದ ಸನಾ ಅದೃಷ್ಟ ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ. ಸಿನಿಮಾ ಬಿಡುಗಡೆಯಾದ ನಂತರ ಸನಾ ನಟನೆಯನ್ನು ನೋಡಿಯೂ ಅದೇ ಅಚ್ಚರಿ ಮತ್ತೆ ಮಿರುಗುವಂತಾಗೋದರಲ್ಲಿ ಯಾವ ಸಂದೇಹವೂ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.