ರಾಜ್ಯೋತ್ಸವಕ್ಕೆ “ಒಡೆಯ’ ಟೀಸರ್
Team Udayavani, Oct 29, 2019, 3:00 AM IST
ಎನ್.ಸಂದೇಶ್ ಅವರು ನಿರ್ಮಿಸುತ್ತಿರುವ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಒಡೆಯ’ ಚಿತ್ರದ ಟೀಸರ್ ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ. ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಡಿಸೆಂಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ. ಎಂ.ಡಿ.ಶ್ರೀಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ದರ್ಶನ್ ಅಭಿನಯದ “ಪೊರ್ಕಿ’, “ಬುಲ್‌ಬುಲ್’ ಚಿತ್ರಗಳನ್ನು ಎಂ.ಡಿ.ಶ್ರೀಧರ್ ಅವರು ನಿರ್ದೇಶನ ಮಾಡಿದ್ದರು.
ಈಗ ದರ್ಶನ್ ಹಾಗೂ ಶ್ರೀಧರ್ ಅವರ ಕಾಂಬಿನೇಷನಲ್ಲಿ “ಒಡೆಯ’ ಚಿತ್ರ ಮೂಡಿಬರುತ್ತಿದೆ. ಅರ್ಜುನ್ ಜನ್ಯ ಸಂಗೀತದ ಈ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಡಾ.ನಾಗೇಂದ್ರ ಪ್ರಸಾದ್, ಕವಿರಾಜ್ ಹಾಗೂ “ಬಹದ್ದೂರ್’ ಚೇತನ್ ಕುಮಾರ್ ಬರೆದಿದ್ದಾರೆ. ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ಜಯ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ನಮ್ಮ ‘ಒಡೆಯ’ ಚಿತ್ರದ ಟೀಸರ್ ಇದೇ ನವೆಂಬರ್ ೧ ರಂದು @aanandaaudio ಆಡಿಯೋ ಯೂಟ್ಯೂಬ್ ಚಾನೆಲ್ ಅಲ್ಲಿ ಬೆಳಗ್ಗೆ 9:55ಕ್ಕೆ ಬಿಡುಗಡೆಯಾಗಲಿದೆ.
ನಿಮ್ಮ ಪ್ರೀತಿ-ಪ್ರೋತ್ಸಾಹ- ಆಶೀರ್ವಾದ ಸದಾ ಹೀಗೆ ಇರಲಿ ?
– ನಿಮ್ಮ ದಾಸ ದರ್ಶನ್#Odeya #OdeyaTeaserOnNov1 pic.twitter.com/d4r1XIm2vN— Darshan Thoogudeepa (@dasadarshan) October 27, 2019
ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ರಾಘವಿ ತಿಮ್ಮಯ್ಯ ಅಭಿನಯಿಸಿದ್ದಾರೆ. ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.