‘ಓ ಮೈ ಲವ್’ ಹಾಡಿಗೆ ಮೆಚ್ಚುಗೆ; ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್
Team Udayavani, Apr 21, 2022, 1:51 PM IST
ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್, ಕೀರ್ತಿ ಕಲ್ಕೆರೆ ನಾಯಕ-ನಾಯಕಿಯಾಗಿ ನಟಿಸಿರುವ “ಓ ಮೈ ಲವ್’ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿತ್ತು. ಆ ಹಾಡು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿ ಹಿಟ್ಲಿಸ್ಟ್ ಸೇರಿದೆ.
ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿರುವ ಈ ಹಾಡಿಗೆ ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ. “ಏನಾಯ್ತೋ ಕಾಣೆ…’ ಎಂಬ ಸಾಹಿತ್ಯವಿರುವ ಈ ಹಾಡು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಯೂ ಟ್ಯೂಬ್ ಸೇರಿದಂತೆ ಫೇಸ್ಬುಕ್, ಇನ್ಸ್ಟಗ್ರಾಮ್, ಮೋಜ್, ಟಕಾ ಟಕ್ ಹಾಗೂ ಶೇರ್ ಚಾಟ್ ಸೇರಿದಂತೆ ಅನೇಕ ಸೋಶಿಯಲ್ ಮೀಡಿಯಾ ಆ್ಯಪ್ಗ್ಳಲ್ಲಿ “ಓ ಮೈ ಲವ್’ ಚಿತ್ರದ ಹಾಡು ಸಖತ್ ಸೌಂಡು ಮಾಡುತ್ತಿದೆ. ಪ್ರಿ-ವೆಡ್ಡಿಂಗ್ ಶೂಟ್, ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಈ ಹಾಡನ್ನು ಬಳಸಿಕೊಳ್ಳಲಾಗುತ್ತಿದೆ ಎಂಬುದು ಮತ್ತೂಂದು ವಿಶೇಷ.
ಇದನ್ನೂ ಓದಿ: ಹೊರಬಂತು ‘ರಾಜಿ’ ಹಾಡುಗಳು; ದಾಂಪತ್ಯ ಮಹತ್ವ ಸಾರುವ ಚಿತ್ರ
ನಿರ್ಮಾಪಕ ರಾಮಾಂಜಿನಿ ಅವರೇ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಜಿಸಿಬಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ನಿರ್ದೇಶಕ ಸ್ಮೈಲ್ ಶ್ರೀನು ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.
ಟಾಲಿವುಡ್ ಖಳನಟ ದೇವ್ ಗಿಲ್, ಹಿರಿಯ ನಟ ಎಸ್.ನಾರಾಯಣ್, ಸಾಧುಕೋಕಿಲ, ಪವಿತ್ರಾ ಲೋಕೇಶ್ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.