ಗೋವಾ ಕಡಲತಡಿಯಲಿ ‘ಓ ಮೈ ಲವ್’ ಟಪ್ಪಾಂಗುಚಿ ಸಾಂಗ್
Team Udayavani, Mar 15, 2022, 2:24 PM IST
ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ನಾಯಕನಾಗಿ ಅಭಿನಯಿಸುತ್ತಿರುವ “ಓ ಮೈ ಲವ್’ ಚಿತ್ರದ ಚಿತ್ರೀಕರಣ ಕೊನೆಯ ಹಂತಕ್ಕೆ ತಲುಪಿದೆ. ಈಗಾಗಲೇ ಮಾತು ಮತ್ತು ಸಾಹಸ ದೃಶ್ಯಗಳ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಕೊನೆಹಂತದಲ್ಲಿ ಚಿತ್ರದ ಹಾಡುಗಳ ಚಿತ್ರೀಕರಣದಲ್ಲಿ ನಿರತವಾಗಿದೆ.
ಸದ್ಯ ಗೋವಾದ ಸುಂದರ ಕಡಲ ಕಿನಾರೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಚಿತ್ರದ “ನಿನ್ನ ಡ್ಯಾಡಿ ನಂಗೆ ಯಾವಾಗಿಂದ ಮಾವ ಆಗೋದು…’ ಎಂಬ ಹಾಡಿನ ಚಿತ್ರೀಕರಣ ನಡೆಸಲಾಗುತ್ತಿದೆ. ನಾಯಕ ಅಕ್ಷಿತ್ ಶಶಿಕುಮಾರ್, ನಾಯಕಿ ಕೀರ್ತಿ ಕಲ್ಕೆರೆ ಈ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ.
ಇದನ್ನೂ ಓದಿ:ಕಾಶ್ಮೀರದಲ್ಲಿ ‘ಮಾರ್ಟಿನ್’ ಕಾದಾಟ
ಉಳಿದಂತೆ “ಓ ಮೈ ಲವ್’ ಚಿತ್ರದಲ್ಲಿ ಎಸ್. ನಾರಾಯಣ್, ದೇವ್ ಗಿಲ್, ದೀಪಿಕಾ ಆರಾಧ್ಯ, ಪೃಥ್ವಿರಾಜ್, ಸಾಧುಕೋಕಿಲ, ಪವಿತ್ರಾ ಲೋಕೇಶ್, ಸಂಗೀತಾ, ಆನಂದ್, ಭಾಗ್ಯಶ್ರೀ, ಶಿಲ್ಪಾ, ಅಕ್ಷತಾ, ಸುಯೋಧ, ಟೆನ್ನಿಸ್ ಕೃಷ್ಣ, ರವಿ ರಾಮಕುಮಾರ್ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
“ಜಿಸಿಬಿ ಪೊ›ಡಕ್ಷನ್ಸ್’ ಬ್ಯಾನರ್ನಲ್ಲಿ ಜಿ. ರಾಮಾಂಜಿನಿ ಕಥೆ ಬರೆದು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಚಿತ್ರವನ್ನು “ಬಳ್ಳಾರಿ ದರ್ಬಾರ್’ ಖ್ಯಾತಿಯ ಸೆ¾çಲ್ ಶ್ರೀನು ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ಅರ್ಜುನ್ ಸಂಗೀತ, ಹಾಲೇಶ್ ಎಸ್. ಛಾಯಾಗ್ರಹಣ, ಡಿ. ಮಲ್ಲಿ ಸಂಕಲನವಿದೆ.
ಈಗಾಗಲೇ “ಓ ಮೈ ಲವ್’ ಚಿತ್ರದ ಚಿತ್ರೀಕರಣವನ್ನು ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಲಾಗಿದೆ. ಔಟ್ ಆ್ಯಂಡ್ ಔಟ್ ಲವ್, ಕಾಮಿಡಿ, ಸೆಂಟಿಮೆಂಟ್ ಜೊತೆಗೆ ಭರ್ಜರಿ ಆಕ್ಷನ್ ಒಳಗೊಂಡ “ಓ ಮೈ ಲವ್’ ಈ ವರ್ಷದ ಮಧ್ಯ ಭಾಗಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.