ಜು.15 ಕ್ಕೆ ಓ ಮೈ ಲವ್ ತೆರೆಗೆ
ಜೂ.24 ಟ್ರೇಲರ್ ಸಚಿವ ಶ್ರೀರಾಮುಲು ಸಾಥ್
Team Udayavani, Jun 22, 2022, 1:52 PM IST
ಶಶಿಕುಮಾರ್ ಪುತ್ರ ಅಕ್ಷಿತ್ ನಾಯಕರಾಗಿ ನಟಿಸಿರುವ “ಓ ಮೈ ಲವ್’ ಚಿತ್ರ ಆರಂಭ ದಿಂದಲೂ ಸದ್ದು ಮಾಡುತ್ತಲೇ ಬರುತ್ತಿದೆ. ಟೀಸರ್, ಸಾಂಗ್ ಮೂಲಕ ಸಿನಿಪ್ರಿಯರ ಕುತೂಹಲ ಹೆಚ್ಚಿಸಿರುವ ಈ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು ಜುಲೈ 15ರಂದು ಚಿತ್ರ ಬಿಡುಗಡೆಯಾಗಲಿದೆ.
ಈ ಮೂಲಕ ಔಟ್ ಅಂಡ್ ಔಟ್ ಲವ್ ಕಂ ಫ್ಯಾಮಿಲಿ ಡ್ರಾಮಾ ತೆರೆ ಮೇಲೆ ಬರಲಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಜೂ.24ರಂದು ಬಿಡುಗಡೆಯಾಗಲಿದ್ದು, ಸಚಿವ ಶ್ರೀರಾಮುಲು ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ.
ಈಗಾಗಲೇ ಈ ಚಿತ್ರಕ್ಕೆ ಶಿವರಾಜ್‌ಕುಮಾರ್, ಉಪೇಂದ್ರ, ಕೆ.ರಾಘವೇಂದ್ರ ರಾವ್, ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೇರಿದಂತೆ ಅನೇಕರು ಸಾಥ್ ನೀಡಿದ್ದಾರೆ. ಸ್ಮೈಲ್ ಶ್ರೀನು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ, “ಓ ಮೈ ಲವ್’ ಚಿತ್ರಕ್ಕೆ ಜಿ. ರಾಮಾಂಜಿನಿ ಕಥೆ ಬರೆದು, “ಜಿಸಿಬಿ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.
ಇದನ್ನೂ ಓದಿ: ಗುರು ಶಿಷ್ಯರು ಹಾಡು ಬಂತು
ಚಿತ್ರದ ಎಲ್ಲಾ ಹಾಡುಗಳಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯವಿದ್ದು,ಚರಣ್ ಅರ್ಜುನ್ ಸಂಗೀತವಿದೆ. “ಓ ಮೈ ಲವ್’ ಚಿತ್ರದಲ್ಲಿ ನಾಯಕ ಅಕ್ಷಿತ್ ಶಶಿಕುಮಾರ್ ಮತ್ತು ನಾಯಕಿಯಾಗಿ ಕೀರ್ತಿ ಕಲ್ಕೆರೆ ತೆರೆಮೇಲೆ ಜೋಡಿಯಾಗಿ ಅಭಿನಯಿಸಿದ್ದಾರೆ.
“ಸಿನಿಮಾದಲ್ಲಿ ಮನಮುಟ್ಟುವಂಥ ಒಳ್ಳೆಯ ಪಾತ್ರಗಳಿದ್ದು, ಇಡೀ ಚಿತ್ರತಂಡದ ಪ್ರಯತ್ನದಿಂದ ಸಿನಿಮಾ ತುಂಬ ಚೆನ್ನಾಗಿ ಮೂಡಿಬಂದಿ ದೆ ಎನ್ನುವುದು ನಿರ್ದೇಶಕರ ಮಾತು. ಇನ್ನು “ಓ ಮೈ ಲವ್’ ಸಿನಿಮಾದಲ್ಲಿ ಬಹುಭಾಷಾ ನಟ ದೇವಗಿಲ್ ಖಳನಟನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಎಸ್. ನಾರಾಯಣ್, ದೇವಗಿಲ್, ಸಾಧುಕೋಕಿಲ, ಪವಿತ್ರಾ ಲೋಕೇಶ್ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.